Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಹಜ ಪ್ರಕ್ರಿಯೆ ಅಸಹಜವಾಗಿ ಕಾಡಿದಾಗಲೇ...

ಸಹಜ ಪ್ರಕ್ರಿಯೆ ಅಸಹಜವಾಗಿ ಕಾಡಿದಾಗಲೇ ಬರಹ : ಚಂದ್ರ ಪೂಜಾರಿ

‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ27 Nov 2020 7:59 PM IST
share
ಸಹಜ ಪ್ರಕ್ರಿಯೆ ಅಸಹಜವಾಗಿ ಕಾಡಿದಾಗಲೇ ಬರಹ : ಚಂದ್ರ ಪೂಜಾರಿ

ಮಂಗಳೂರು, ನ. 27: ಸಹಜವಾದ ಪ್ರಕ್ರಿಯೆಯೊಂದು ಅಸಹಜವಾಗಿ ಕಾಡಿದಾಗಲೇ ಬರಹ ರೂಪುಗೊಳ್ಳಲಿದೆ ಎಂದು ಹಂಪಿ ಕನ್ನಡ ವಿವಿಯ ನಿವೃತ್ತ ಪ್ರಾಧ್ಯಾಪಕ ಡಾ. ಚಂದ್ರ ಪೂಜಾರಿ ಅಭಿಪ್ರಾಯಪಟ್ಟರು.

ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಮುಸ್ಲಿಮ್ ಲೇಖಕರ ಸಂಘವು ಕೊಡಮಾಡುವ 2018ನೇ ಸಾಲಿನ ರಾಜ್ಯ ಮಟ್ಟದ ದಿ.ಯು.ಟಿ. ಫರೀದ್ ಸ್ಮರಣಾರ್ಥ ನಗರದ ಸಹಕಾರಿ ಸದನದ ಶಾಂತಿ ಪ್ರಕಾಶನ ಸಭಾಂಗಣದಲ್ಲಿ ಶುಕ್ರವಾರ ನಡೆದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಮಾತು ಸುಲಭ. ಆದರೆ, ಬರಹ ಕಷ್ಟ. ಹಾಗಾಗಿ ಒಬ್ಬ ಲೇಖಕ ಅಥವಾ ಲೇಖಕಿ ಯಾಕೆ ಬರೆಯಬೇಕು ಎಂಬ ಪ್ರಶ್ನೆ ಸಾಮಾನ್ಯವಾಗಿ ಹುಟ್ಟುತ್ತದೆ. ಸಮಾಜದ ಆಗು ಹೋಗುಗಳನ್ನು ಕಂಡು ಕೆಲವರಿಗೆ ಅದು ಸಹಜ ಅಂತ ಅನಿಸಬಹುದು. ಆದರೆ, ಯಾರಿಗೆ ಅದು ಅಸಹಜ ಅಂತ ಕಾಡಲು ಆರಂಭಿಸುತ್ತದೆಯೋ ಆವಾಗ ಅವರಲ್ಲಿ ಬರಹದ ತುಡಿತ ಶುರುವಾಗುತ್ತದೆ. ಹೀಗೆ ತುಡಿತವಿದ್ದಾಗಲೇ ಅದು ಸಾಹಿತ್ಯದ ಬೇರೆ ಬೇರೆ ಪ್ರಾಕಾರಗಳಲ್ಲಿ ಹೊರಹೊಮ್ಮಲಿದೆ ಎಂದು ಎಂದು ಡಾ. ಚಂದ್ರ ಪೂಜಾರಿ ನುಡಿದರು.

ಕರಾವಳಿಯ ಮಟ್ಟಿಗೆ ಕೋಮುವಾದ, ಅಸ್ಪ್ರಶ್ಯತೆ ಸಹಜ ಪ್ರಕ್ರಿಯೆಯಂತೆ ಕಂಡು ಬಂದರೂ ಅದರ ನೋವುಂಡ ಬರಹಗಾರರಲ್ಲಿ ಬರೆಯುವ ತುಡಿತ ಇದ್ದೇ ಇದೆ. ಬರೆಯುವುದು ಕೂಡ ಪ್ರತಿಭಟನೆಯ ಅಸ್ತ್ರವಾಗಿದೆ. ಮತ್ತೊಬ್ಬರ ಪ್ರಜ್ಞೆಯನ್ನು ಪ್ರಭಾವಿಸುವ ಕಲೆ ಬರಹಕ್ಕಿದೆ ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕಿದೆ ಎಂದ ಚಂದ್ರ ಪೂಜಾರಿ ಹಿಂದೆ ಕರಾವಳಿಯಲ್ಲಿ ದಲಿತರು ಮಾತ್ರ ಅಸ್ಪ್ರಶ್ಯರಾಗಿರಲಿಲ್ಲ. ಬಿಲ್ಲವರೂ ಅಸ್ಪೃಶ್ಯರಾಗಿದ್ದರು ಎಂಬುದನ್ನು ಮರೆಯಲು ಸಾಧ್ಯವಿಲ್ಲ ಎಂದರು.

ಪ್ರಶಸ್ತಿ ಪ್ರದಾನ : ಲೇಖಕ ಅಬ್ದುಲ್ ಸಲಾಂ ದೇರಳಕಟ್ಟೆ ಬರೆದ ‘ಮರೀಚಿಕೆ’ ಕೃತಿಗೆ 2018ನೆ ಸಾಲಿನ ಮುಸ್ಲಿಂ ಸಾಹಿತ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅಬ್ದುಲ್ ಸಲಾಂ ಅವರು ಈ ಪ್ರಶಸ್ತಿಯನ್ನು ಗುರುವಾರ ನಿಧನರಾದ ಸಾಮಾಜಿಕ ಕಾರ್ಯಕರ್ತ ಮುಹಮ್ಮದ್ ಕೆ. ಅವರಿಗೆ ಸಮರ್ಪಿಸಿದರು. ಅಲ್ಲದೆ ಪ್ರಶಸ್ತಿಯ ನಗದು 10 ಸಾವಿರ ರೂ.ವನ್ನು ಪ್ರತಿಭಾನ್ವಿತ ವಿದ್ಯಾರ್ಥಿನಿ ಫಾತಿಮಾ ಸಾನ್ವಿ ಅವರಿಗೆ ಹಸ್ತಾಂತರಿಸಿದರು.

ಮುಸ್ಲಿಮ್ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು.ಎಚ್. ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಹುಭಾಷಾ ಕವಿಗೋಷ್ಠಿ: ಹಿರಿಯ ಸಾಹಿತಿ ಮುಹಮ್ಮದ್ ಬಡ್ಡೂರು ಬಹುಭಾಷಾ ಕವಿಗೋಷ್ಠಿಯನ್ನು ಉದ್ಘಾಟಿಸಿದರು. ಅತ್ರಾಡಿ ಅಮೃತಾ ಶೆಟ್ಟಿ, ರಾಜಾರಾಮ ವರ್ಮ ವಿಟ್ಲ, ಮೌ. ಇಮ್ರಾನುಲ್ಲಾ ಖಾನ್ ಮನ್ಸೂರಿ ಕವನ ವಾಚಿಸಿದರು.

ಮುಝಾಹಿರ್ ಅಹ್ಮದ್ ಕಿರಾಅತ್ ಪಠಿಸಿದರು. ಆಲಿಕುಂಞಿ ಪಾರೆ ವಂದಿಸಿದರು. ಮುಸ್ಲಿಂ ಲೇಖಕರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎ.ಮುಹಮ್ಮದ್ ಅಲಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X