ಪ್ರಾಕೃತಿಕ ವಿಕೋಪದ ಸಂತ್ರಸ್ತರಿಗೆ ಕಿಟ್ ವಿತರಣೆ
ಉಡುಪಿ, ನ.29: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಪ್ರಾಕೃತಿಕ ವಿಕೋಪದ ಸಂತ್ರಸ್ತರಿಗೆ ಉಪಯುಕ್ತವಾದ ಕಿಚನ್ ಕಿಟ್, ಬೆಡ್ ಶೀಟ್, ಟಾರ್ಪಲಿನ್‌ಗಳನ್ನು ಇಂದು ಉಡುಪಿ ರೆಡ್ ಕ್ರಾಸ್ ಭವನದಲ್ಲಿ ವಿತರಿಸಲಾಯಿತು.
ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿ ತಲ್ಲೂರು ಶಿವರಾಮ ಶೆಟ್ಟಿ, ಉಪಸಭಾಪತಿ ಡಾ.ಅಶೋಕ್ ಕುಮಾರ್ ವೈ.ಜಿ., ಗೌರವ ಕಾರ್ಯದರ್ಶಿ ಕೆ. ಜಯರಾಮ ಆಚಾರ್ಯ ಸಾಲಿಗ್ರಾಮ, ಖಜಾಂಚಿ ಡಾ.ಅರವಿಂದ ನಾಯಕ್ ಅಮ್ಮುಂಜೆ, ನಿಕಟಪೂರ್ವ ಸಭಾಪತಿ ಡಾ.ಉಮೇಶ್ ಪ್ರಭು, ಜಿಲ್ಲಾ ವಿಕಲ ಚೇತನರ ಪುನರ್ವಸತಿ ಕೇಂದ್ರದ ಸದಸ್ಯ ಕಾರ್ಯದರ್ಶಿ ಕೆ.ಸನ್ಮತ್ ಹೆಗ್ಡೆ, ರಮಾದೇವಿ ಮೊದಲಾದವರು ಉಪಸ್ಥಿತರಿದ್ದರು.
Next Story