Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಾಹನಗಳಿಗೆ ಏಕರೂಪದ ಮಾಲಿನ್ಯ ನಿಯಂತ್ರಣ...

ವಾಹನಗಳಿಗೆ ಏಕರೂಪದ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ: ಸಾರಿಗೆ ಸಚಿವಾಲಯದ ಚಿಂತನೆ

ವಾರ್ತಾಭಾರತಿವಾರ್ತಾಭಾರತಿ29 Nov 2020 9:02 PM IST
share
ವಾಹನಗಳಿಗೆ ಏಕರೂಪದ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ: ಸಾರಿಗೆ ಸಚಿವಾಲಯದ ಚಿಂತನೆ

 ಹೊಸದಿಲ್ಲಿ,ನ.29: ದೇಶಾದ್ಯಂತ ಎಲ್ಲ ವಾಹನಗಳಿಗೆ ಕ್ಯೂಆರ್ ಕೋಡ್‌ನೊಂದಿಗೆ ಏಕರೂಪದ ಮಾಲಿನ್ಯ ನಿಯಂತ್ರಣ (ಪಿಯುಸಿ) ಪ್ರಮಾಣಪತ್ರಗಳನ್ನು ಶೀಘ್ರವೇ ಜಾರಿಗೊಳಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಉದ್ದೇಶಿಸಿದೆ. ಏಕರೂಪದ ಪಿಯುಸಿ ಪ್ರಮಾಣಪತ್ರಗಳ ಮೇಲಿನ ಕ್ಯೂಆರ್ ಕೋಡ್ ಮಾಲಿಕ,ವಾಹನ ಮತ್ತು ಹೊಗೆ ಸೂಸುವಿಕೆಯ ಸ್ಥಿತಿಗತಿಯ ಕುರಿತು ನಿರ್ದಿಷ್ಟ ವಿವರಗಳನ್ನು ಒಳಗೊಂಡಿರಲಿದೆ. ಸಚಿವಾಲಯವು ಈ ಬದಲಾವಣೆಗಳನ್ನು ಪ್ರಸ್ತಾವಿಸಿ ಕರಡು ಅಧಿಸೂಚನೆಯೊಂದನ್ನು ಶುಕ್ರವಾರ ಹೊರಡಿಸಿದ್ದು,ಪಾಲುದಾರರಿಂದ ಸಲಹೆಗಳು ಮತ್ತು ಆಕ್ಷೇಪಗಳನ್ನು ಆಹ್ವಾನಿಸಿದೆ.

ಸಾರಿಗೆ ಸಚಿವಾಲಯವು ಈಗಾಗಲೇ ಕೇಂದ್ರ ಮೋಟಾರ್ ವಾಹನಗಳ ನಿಯಮಗಳಲ್ಲಿ ಬದಲಾವಣೆಗಳನ್ನು ಪ್ರಸ್ತಾವಿಸಿದ್ದು,ಪಿಯುಸಿಯನ್ನು ಮಾಡಿಸುವುದಕ್ಕೆ ಮುನ್ನ ಮಾಲಿಕನ ನೋಂದಾಯಿತ ಮೊಬೈಲ್ ಸಂಖ್ಯೆಗೆ ಸಿಸ್ಟಮ್ ಜನರೇಟೆಡ್ ಎಸ್‌ಎಂಎಸ್ ರವಾನೆಯಾಗಲಿದೆ. ಈ ಎಸ್‌ಎಂಎಸ್ ಸಿಸ್ಟಮ್ ವಾಹನಗಳ ಕಳ್ಳತನಗಳಿಗೆ ಕಡಿವಾಣ ಹಾಕಲು ಸಹ ನೆರವಾಗಲಿದೆ. ಪಿಯುಸಿ ಪ್ರಮಾಣಪತ್ರವನ್ನು ಪಡೆಯಲು ವಾಯುಮಾಲಿನ್ಯ ಪರೀಕ್ಷಾ ಕೇಂದ್ರಗಳಿಗೆ ವಾಹನವನ್ನು ಒಯ್ದಾಗ ಅದು ಕಳ್ಳತನದ ವಾಹನವೇ ಎನ್ನುವುದನ್ನು ಪತ್ತೆ ಹಚ್ಚಬಹುದಾಗಿದೆ.

ಪಿಯುಸಿ ಪ್ರಮಾಣಪತ್ರಗಳ ಏಕರೂಪದ ನಮೂನೆಯು ಪಿಯುಸಿ ದತ್ತಾಂಶ ಕೋಶವನ್ನು ರಾಷ್ಟ್ರೀಯ ರಿಜಿಸ್ಟರ್‌ನೊಂದಿಗೆ ಜೋಡಣೆಗೊಳಿಸಲು ಉದ್ದೇಶಿಸಿದೆ. ಸರಕಾರವು ಇದೇ ಮೊದಲ ಬಾರಿಗೆ ಪಿಯುಸಿ ಪ್ರಮಾಣಪತ್ರ ನೀಡಲು ನಿರಾಕರಣೆಗೆ ಕಾರಣವನ್ನು ಉಲ್ಲೇಖಿಸಿ ‘ರಿಜೆಕ್ಷನ್ ಸ್ಲಿಪ್ ’ಅನ್ನು ಒದಗಿಸಲೂ ಉದ್ದೇಶಿಸಿದೆ.

ಕಾನೂನಿನಲ್ಲಿ ಉದ್ದೇಶಿತ ಪರಿಷ್ಕರಣೆಗಳಡಿ ವಾಹನವು ವಾಯುಮಾಲಿನ್ಯ ಮಾನದಂಡಗಳನ್ನು ಪೂರೈಸುತ್ತಿಲ್ಲ ಎಂದು ಜಾರಿ ಅಧಿಕಾರಿಯು ಭಾವಿಸಿದರೆ ಅವರು ಯಾವುದೇ ಅಧಿಕೃತ ಪಿಯುಸಿ ಪರೀಕ್ಷಾ ಕೇಂದ್ರದಲ್ಲಿ ತಪಾಸಣೆ ಮಾಡಿಸುವಂತೆ ಮಾಲಿಕನಿಗೆ ಸೂಚಿಸಬಹುದು.

ವಾಹನದ ಮಾಲಿಕ ಅಥವಾ ಆ ಸಂದರ್ಭದಲ್ಲಿ ವಾಹನವನ್ನು ಹೊಂದಿರುವ ವ್ಯಕ್ತಿಯು ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರವನ್ನು ಒದಗಿಸಲು ವಿಫಲಗೊಂಡರೆ ಮೋಟಾರ್ ವಾಹನಗಳ ಕಾಯ್ದೆಯಡಿ ಮೂರು ತಿಂಗಳವರೆಗೆ ಜೈಲುಶಿಕ್ಷೆ ಅಥವಾ 10,000 ರೂ.ವರೆಗೆ ದಂಡ ಮತ್ತು ಮೂರು ತಿಂಗಳ ಅವಧಿಗೆ ವಾಹನ ಚಾಲನೆ ಪರವಾನಿಗೆ ಅಮಾನತಿಗೆ ಗುರಿಯಾಗಬೇಕಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X