ಡಿ.1ರಂದು ಉಡುಪಿ ಡಿಸಿ ಕಚೇರಿ ಚಲೋ ಹೋರಾಟ
ಉಡುಪಿ, ನ.30: ಉಡುಪಿ ಜಿಲ್ಲಾ ಮೀನುಗಾರರ ಮತ್ತು ಮೀನು ಕಾರ್ಮಿಕರ ಸಂಘದ ನೇತೃತ್ವದಲ್ಲಿ ಬೀದಿ ಬದಿ ಮೀನು ಮಾರಾಟಗಾರರ ಮತ್ತು ದ್ವಿಚಕ್ರ ವಾಹನದಲ್ಲಿ ಮನೆ, ಮನೆಗೆ ಮೀನು ಮಾರಾಟಗಾರರ ವಿವಿಧ ಬೇಡಿಕೆ ಗಳನ್ನು ಈಡೇರಿಸುವಂತೆ ಒತ್ತಾಯಿಸಿ ಡಿ.1ರಂದು ಬೆಳಗ್ಗೆ 10ಗಂಟೆಗೆ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಹಮ್ಮಿಕೊಳ್ಳಲಾಗಿದೆ
ಇದಕ್ಕೂ ಮುನ್ನಾ ಮಣಿಪಾಲ ಸಿಂಡಿಕೇಟ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
Next Story