Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಮುಸ್ಲಿಮರಿಗೆ ಟಿಕೆಟ್ ಕೊಡುವುದಿಲ್ಲ'...

'ಮುಸ್ಲಿಮರಿಗೆ ಟಿಕೆಟ್ ಕೊಡುವುದಿಲ್ಲ' ಎಂದ ಈಶ್ವರಪ್ಪರಿಗೆ ಡಿಕೆಶಿ ನೀಡಿದ ಸಲಹೆ ಏನು ಗೊತ್ತಾ ?

ವಾರ್ತಾಭಾರತಿವಾರ್ತಾಭಾರತಿ30 Nov 2020 5:32 PM IST
share
ಮುಸ್ಲಿಮರಿಗೆ ಟಿಕೆಟ್ ಕೊಡುವುದಿಲ್ಲ ಎಂದ ಈಶ್ವರಪ್ಪರಿಗೆ ಡಿಕೆಶಿ ನೀಡಿದ ಸಲಹೆ ಏನು ಗೊತ್ತಾ ?

ಬೆಂಗಳೂರು, ನ. 30: ‘ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ನಾವು ಮುಸ್ಲಿಮರಿಗೆ ಟಿಕೆಟ್ ನೀಡುವುದಿಲ್ಲ ಎಂದಿರುವ ಸಚಿವ ಕೆ.ಎಸ್.ಈಶ್ವರಪ್ಪನವರು, ಸಂವಿಧಾನ ಓದಬೇಕು. ಅದರಲ್ಲಿರುವ ಆಶಯ ಏನು ಎಂದು ತಿಳಿದುಕೊಳ್ಳಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಲಹೆ ಮಾಡಿದ್ದಾರೆ.

ಸೋಮವಾರ ದೇವನಹಳ್ಳಿಯ ನಡೆದ ಕಾಂಗ್ರೆಸ್ ಹಿರಿಯ ನಾಯಕರ ಸಭೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 'ಬಿಜೆಪಿಯವರ ಸಿದ್ಧಾಂತವೇ ಅದು. ಅವರಿಗೆ ಸಂವಿಧಾನದ ಬಗ್ಗೆ ಗೊತ್ತಿಲ್ಲ. ಅದರ ಬಗ್ಗೆ ಗೌರವವೂ ಇಲ್ಲ. ಅವರು ಸಂವಿಧಾನ ಸುಡಬೇಕು ಅಂತಲೇ ಕಾಯುತ್ತಿದ್ದಾರೆ’ ಎಂದು ಟೀಕಿಸಿದರು.

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಂದ ಸಂವಿಧಾನವನ್ನು ಓದಿಸಿ. ಅವರಿಗೆ ಅದರ ಆಶಯಗಳು ಅರ್ಥವಾಗಲಿ. ಬಿಜೆಪಿಯವರು ತಮ್ಮ ಪಕ್ಷದಲ್ಲಿರುವ ಅಲ್ಪಸಂಖ್ಯಾತರ ಘಟಕವನ್ನು ವಿಸರ್ಜಿಸುವುದು ಉತ್ತಮ ಎಂದು ಡಿ.ಕೆ.ಶಿವಕುಮಾರ್ ಇದೇ ಸಂದರ್ಭದಲ್ಲಿ ಸೂಚಿಸಿದರು.

ಈಗಾಗಲೇ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳು ನಡೆದಿವೆ. ಹೀಗಾಗಿ ಗ್ರಾಮ ಪಂಚಾಯತ್ ಚುನಾವಣೆ ನಡೆಸುವುದರಲ್ಲಿ ಯಾವುದೇ ಅಭ್ಯಂತರವಿಲ್ಲ. ಕೋವಿಡ್-19 ನಿಯಮ ಪಾಲನೆ, ವ್ಯಕ್ತಿಗತ ಅಂತರ ಕಾಯ್ದುಕೊಳ್ಳುವಂತೆ ಸರಕಾರ ಹಾಗೂ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಶಿವಕುಮಾರ್ ಸಲಹೆ ನೀಡಿದರು.

ಸಮೂಹ ನಾಯಕತ್ವದಲ್ಲಿ ನಂಬಿಕೆ: ರಾಜ್ಯದ ಸಮಸ್ಯೆ ಹಾಗೂ ಸರಕಾರದ ಕೆಲವು ನಿರ್ಣಯಗಳನ್ನು ನಾವು ಗಮನಿಸಿದ್ದೇವೆ. ಈ ವಿಚಾರವಾಗಿ ನಾನೊಬ್ಬನೆ ತೀರ್ಮಾನ ಮಾಡುವುದಿಲ್ಲ. ಎಲ್ಲ ಅಭಿಪ್ರಾಯ ಪಡೆದು ತೀರ್ಮಾನ ತೆಗೆದುಕೊಳ್ಳಲಾಗುವುದು. ನಾನು ಸಾಮೂಹಿಕ ನಾಯಕತ್ವದ ಮೇಲೆ ನಂಬಿಕೆ ಇಟ್ಟಿದ್ದು, ಇಂದು ಹಿರಿಯ ನಾಯಕರೆಲ್ಲ ಸೇರಿ ಚರ್ಚಿಸಿ, ಅವರ ಸಲಹೆ ಪಡೆಯುತ್ತೇನೆ ಎಂದು ಅವರು ತಿಳಿಸಿದರು.

ತನಿಖೆ ಆದರೆ ತಾನೇ ಸತ್ಯಾಂಶ ಹೊರಬರುವುದು: ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಅವರು ಈಗ ಯಾವ ಹೇಳಿಕೆ ಬೇಕಾದರೂ ನೀಡಲಿ. ತಮ್ಮ ಆಂತರಿಕ ವಿಚಾರ ಮುಚ್ಚಿಕೊಳ್ಳಲು ಏನಾದರೂ ಹೇಳಲಿ. ರಾಜಕೀಯ ಕಾರಣಕ್ಕಾಗಿ ಅವರಿಂದ ಈ ಹೇಳಿಕೆ ಕೊಡಿಸಲಾಗಿದೆ. ಸಂತೋಷ್ ಅವರು ಯಾಕೆ ಆತ್ಮಹತ್ಯೆ ಯತ್ನ ಮಾಡಿದ್ದಾರೆಂಬುದರ ಬಗ್ಗೆಯೇ ಅವರ ಪತ್ನಿ ಶಂಕೆ ವ್ಯಕ್ತಪಡಿಸಿದ್ದಾರೆ. ಈ ವಿಚಾರಕ್ಕಾದರೂ ತನಿಖೆ ನಡೆಯಬೇಕೋ ಬೇಡವೋ? ಅವರು ಯಾವುದೋ ಸಾಮಾನ್ಯ ಹುದ್ದೆಯಲ್ಲಿ ಇರುವವರಲ್ಲ, ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಲ್ಲಿದ್ದಾರೆ. ಹೀಗಾಗಿ ಇವರ ಆತ್ಮಹತ್ಯೆ ಯತ್ನ ತನಿಖೆ ಆಗಬೇಕು ಎಂದು ಡಿ.ಕೆ.ಶಿವಕುಮಾರ್ ಆಗ್ರಹಿಸಿದರು.

ಸಿದ್ಧಾಂತದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ: 'ಚುನಾವಣೆಗಳ ಗೆಲುವು, ಸೋಲಿನ ಫಲಿತಾಂಶದ ಬಗ್ಗೆ ನಾವು ಆತಂಕ ಪಡುವುದಿಲ್ಲ. ಉಪಚುನಾವಣೆಗಳೇ ಬೇರೆ, ಪ್ರಮುಖ ಚುನಾವಣೆಗಳೇ ಬೇರೆ. ನಾವು ಭವಿಷ್ಯದಲ್ಲಿ ಗೆಲುವು ಸಾಧಿಸುವ ವಿಶ್ವಾಸವಿದೆ. ಉಪ ಚುನಾವಣೆ ಫಲಿತಾಂಶದಿಂದ ನಾವು ನಮ್ಮ ಪಕ್ಷದ ಸಿದ್ಧಾಂತದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ನಮಗೆ ನಮ್ಮ ಸಿದ್ಧಾಂತಗಳೇ ಮುಖ್ಯ. ಬಿಜೆಪಿಯ ಆಂತರಿಕ ವಿಚಾರವಾಗಿ ನಾವು ಮಾತನಾಡುವುದಿಲ್ಲ' ಎಂದು ಶಿವಕುಮಾರ್ ಸ್ಪಷ್ಟನೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X