Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶ್ರೀಕೃಷ್ಣ ಮಠ ಇತಿಹಾಸದ 251ನೇ...

ಶ್ರೀಕೃಷ್ಣ ಮಠ ಇತಿಹಾಸದ 251ನೇ ಪರ್ಯಾಯಕ್ಕೆ ಪೂರ್ವಸಿದ್ಧತೆ ಪ್ರಾರಂಭ

ಕೃಷ್ಣಾಪುರ ಮಠ ಪರ್ಯಾಯಕ್ಕೆ ಬಾಳೆ ಮುಹೂರ್ತ

ವಾರ್ತಾಭಾರತಿವಾರ್ತಾಭಾರತಿ30 Nov 2020 5:46 PM IST
share
ಶ್ರೀಕೃಷ್ಣ ಮಠ ಇತಿಹಾಸದ 251ನೇ ಪರ್ಯಾಯಕ್ಕೆ ಪೂರ್ವಸಿದ್ಧತೆ ಪ್ರಾರಂಭ

ಉಡುಪಿ, ನ.30: 2022ರ ಜನವರಿ 18ರ ಮುಂಜಾನೆ ನಡೆಯುವ ಕೃಷ್ಣಾಪುರ ಮಠದ ಮುಂದಿನ ಪರ್ಯಾಯಕ್ಕೆ ಪೂರ್ವಭಾವಿ ಸಿದ್ಧತೆಗಳಲ್ಲಿ ಮೊದಲನೆಯದಾದ ಬಾಳೆ ಮುಹೂರ್ತ ಸೋಮವಾರ ಬೆಳಗ್ಗೆ 8:32ಕ್ಕೆ ರಥಬೀದಿಯಲ್ಲಿರುವ ಕೃಷ್ಣಾಪುರ ಮಠದ ಆವರಣದಲ್ಲಿ ನಡೆಯಿತು.

ಉಡುಪಿಯಲ್ಲಿರುವ ಅಷ್ಟಮಠಗಳ ನಡುವೆ ಶ್ರೀಕೃಷ್ಣನ ಪೂಜೆಗೆ ದ್ವೈವಾರ್ಷಿಕ ಪರ್ಯಾಯ ಸಂಪ್ರದಾಯ ಪ್ರಾರಂಭಗೊಂಡ ನಂತರ ಈಗ ನಡೆದಿರುವ ಅದಮಾರು ಮಠದ ಶ್ರೀಈಶಪ್ರಿಯತೀರ್ಥ ಶ್ರೀಪಾದರ ಪರ್ಯಾಯ 32ನೇ ಚಕ್ರದ ಎರಡನೇ (ಅಂದರೆ 250ನೇ) ಪರ್ಯಾಯವಾಗಿದ್ದು, ಮುಂದೆ ನಡೆಯುವ ಕೃಷ್ಣಾಪುರ ಮಠದ ಪರ್ಯಾಯ ಶ್ರೀಕೃಷ್ಣ ಮಠದ ಇತಿಹಾಸದ 251ನೇ ಪರ್ಯಾಯವಾಗಿ ದಾಖಲಾಗಲಿದೆ.

ಕೃಷ್ಣಾಪುರ ಮಠದ ಯತಿಗಳಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಮಠದ ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯರ ನೇತೃತ್ವದಲ್ಲಿ ಬಾಳೆ ಮುಹೂರ್ತದ ಸಾಂಪ್ರದಾಯಿಕ ವಿಧಿವಿಧಾನಗಳು ನಡೆದವು. ಜನಪ್ರತಿನಿಧಿಗಳು ಸೇರಿದಂತೆ ಅನೇಕ ಮಂದಿ ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.

ರಥಬೀದಿಯಲ್ಲಿರುವ ಕೃಷ್ಣಾಪುರ ಮಠದಲ್ಲಿ ನವಗ್ರಹ ಪೂಜೆ ಹಾಗೂ ಪ್ರಾರ್ಥನೆಯ ಬಳಿಕ ಚಂದ್ರವೌಳೀಶ್ವರ, ಅನಂತೇಶ್ವರ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿ ಅಲ್ಲಿಂದ ಶ್ರೀಕೃಷ್ಣ ಮಠಕ್ಕೆ ತೆರಳಿ ಶ್ರೀಕೃಷ್ಣ ಮತ್ತು ಮುಖ್ಯಪ್ರಾಣರಿಗೆ, ಗೋಶಾಲೆ, ಗುರುಗಳ ಬೃಂದಾವನಗಳಲ್ಲಿ ಪ್ರಾರ್ಥಿಸಲಾಯಿತು. ಅನಂತರ ಶ್ರೀಮಠಕ್ಕೆ ಮರಳಿ ಬಾಳೆಗಿಡ, ತುಳಸಿ, ಕಬ್ಬುಗಳೊಂದಿಗೆ ರಥಬೀದಿಯಲ್ಲಿ ಮೆರವಣಿಗೆಯಲ್ಲಿ ಬಂದು ಕೃಷ್ಣಾಪುರ ಮಠದ ಜಾಗದಲ್ಲಿ ಬಾಳೆಗಿಡ, ತುಳಸಿ ಹಾಗೂ ಕಬ್ಬಿನ ಗಿಡಗಳನ್ನು ನೆಟ್ಟು ನೀರೆರೆಯಲಾಯಿತು.

ತಮ್ಮ ಪರ್ಯಾಯಾವಧಿಯಲ್ಲಿ ಅನ್ನದಾನವೂ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ಬೇಕಾಗುವ ಬಾಳೆಎಲೆ ಹಾಗೂ ತುಳಸಿಯನ್ನು ಶ್ರೀಪಾದರು ಇಲ್ಲಿಂದಲೇ ಪಡೆಯುವ ಸಂಪ್ರದಾಯವಿದೆ. ಪರ್ಯಾಯ ಪೂರ್ವ ಸಿದ್ಧತೆಯ ಎರಡನೇ ಕಾರ್ಯಕ್ರಮವಾಗಿ ಜನವರಿ ತಿಂಗಳಲ್ಲಿ ಅಕ್ಕಿ ಮುಹೂರ್ತ, ಮುಂದೆ ಇದೇ ಸರಣಿಯಲ್ಲಿ ಕಟ್ಟಿಗೆ ಮುಹೂರ್ತ ಹಾಗೂ ಭತ್ತ ಮುಹೂರ್ತಗಳು ನಡೆಯಲಿವೆ.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರ ಶ್ರೀಪಾದರು, ಕೃಷ್ಣಾಪುರ ಮಠದ ಮುಂದಿನ ಪರ್ಯಾಯಕ್ಕೆ ಊರಿನ ಸಮಸ್ತರ ಹಾಗೂ ಮಠದ ಭಕ್ತರು, ಅಭಿಮಾನಿಗಳ ಸರ್ವ ಸಹಕಾರವನ್ನು ಕೋರಿದರು. ಬನ್ನಂಜೆ ಗೋಪಾಲಕೃಷ್ಣ ಉಪಾಧ್ಯಾಯ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಉಡುಪಿ ಶಾಸಕ ಕೆ. ರಘುಪತಿ ಭಟ್, ಯಶ್ಪಾಲ್ ಸುವರ್ಣ, ಕುಂಭಾಶಿ ಸೂರ್ಯನಾರಾಯಣ ಉಪಾಧ್ಯ, ಪ್ರದೀಪ್ ಕಲ್ಕೂರ, ಪ್ರದೀಪ್ ಕುಮಾರ್, ಯು.ಕೆ.ರಾಘವೇಂದ್ರ ರಾವ್, ರಘುರಾಮ ಆಚಾರ್ಯ, ಬಾಲಾಜಿ ರಾಘವೇಂದ್ರ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X