Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಕಾಲ ಯೋಜನೆಯನ್ನು ಪರಿಣಾಮಕಾರಿಯಾಗಿ...

ಸಕಾಲ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಸಚಿವ ಸುರೇಶ್ ‌ಕುಮಾರ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ30 Nov 2020 8:29 PM IST
share
ಸಕಾಲ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಸಚಿವ ಸುರೇಶ್ ‌ಕುಮಾರ್ ಸೂಚನೆ

ಉಡುಪಿ, ನ.30: ಸಾರ್ವಜನಿಕರಿಗೆ ನಿಗದಿತ ಕಾಲಾವಧಿಯೊಳಗೆ ಸೇವೆಯನ್ನು ಒದಗಿಸುವ ಉದ್ದೇಶದಿಂದ ಸಕಾಲ ಯೋಜನೆ ಜಾರಿಗೆ ತರಲಾಗಿದೆ. ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಸೋಮವಾರ ಸಕಾಲ ಸಪ್ತಾಹ ಕಾರ್ಯಕ್ರಮವನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ, ರಾಜ್ಯದ ಎಲ್ಲಾ ಇಲಾಖಾ ಕಾರ್ಯದರ್ಶಿಗಳು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಸಚಿವರು ಮಾತನಾಡಿದರು.

ಜನಸಾಮಾನ್ಯರಿಗೆ ನಿಗದಿತ ಕಾಲಮಿತಿಯೊಳಗೆ ಸರಕಾರದ ಸೇವೆಗಳನ್ನು ಒದಗಿಸಬೇಕೆಂಬ ಉದ್ದೇಶದಿಂದ ಸಕಾಲ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದ ಅವರು, ಪ್ರಾರಂದಲ್ಲಿ ಸಕಾಲ ಯೋಜನೆಯಡಿ 151 ಸೇವೆಗಳನ್ನು ವಿವಿಧ ಇಲಾಖೆಗಳ ಮೂಲಕ ಸಾರ್ವಜನಿಕರಿಗೆ ಒದಗಿಸಲಾಗುತ್ತಿತ್ತು. ಪ್ರಸ್ತುತ 98 ಇಲಾಖೆಗಳಲ್ಲಿ 1025ಕ್ಕೂ ಅಧಿಕ ಸೇವೆಗಳನ್ನು ಒದಗಿಸಲಾಗುತ್ತಿದೆ ಎಂದರು.

ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಸಕಾಲದ ಕಾರ್ಯಕ್ಕೆ ಸ್ವಲ್ಪ ಹಿನ್ನೆಡೆಯಾಗಿದೆ. ಮತ್ತೆ ಅದನ್ನು ಚುರುಕುಗೊಳಿಸುವ ಉದ್ದೇಶದಿಂದ ಸಪ್ತಾಹವನ್ನು ನ.30ರಿಂದ ಡಿಸೆಂಬರ್ 5ರವರೆಗೆ ನಗರಾಭಿವೃದ್ಧಿ, ಕಂದಾಯ, ಸಾರಿಗೆ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಗಳಲ್ಲಿ ನಡೆಸಲಾಗುತ್ತಿದೆ ಎಂದರು.

ಇಲಾಖೆಗಳಲ್ಲಿ ಅರ್ಜಿಗಳನ್ನು ಸ್ವೀಕರಿಸುವಾಗ ಸಕಾಲದ ಅಡಿಯಲ್ಲಿ ಅರ್ಜಿಗಳನ್ನು ಪಡೆದು, ಅರ್ಜಿಗಳನ್ನು ನಿಗದಿತ ಕಾಲಾವಧಿಯಲ್ಲಿ ವಿಲೇವಾರಿ ಮಾಡ ಬೇಕು. ಸಣ್ಣಪುಟ್ಟ ಕಾರಣಗಳನ್ನು ನೀಡಿ ಅರ್ಜಿ ತಿರಸ್ಕರಿಸುವುದನ್ನು ಮಾಡ ಬಾರದು. ಬಾಕಿ ಉಳಿದ ಅರ್ಜಿಗಳನ್ನು ಶೀಘ್ರದಲ್ಲಿಯೇ ವಿಲೇವಾರಿ ಮಾಡಬೇಕು ಎಂದರು.

ಜನಸಾಮಾನ್ಯರು ನಿಗದಿತ ಕಾಲಮಿತಿಯೊಳಗೆ ಸೇವೆಯನ್ನು ಪಡೆಯಬೇಕು ಎಂಬ ಉದ್ದೇಶದಿಂದ ಸಕಾಲ ಯೋಜನೆಯನ್ನು ಜಾರಿಗೆ ತರಲಾಗಿದೆ. ಇಲ್ಲಿ ಯವರೆಗೆ 22,88,81,652 ಅರ್ಜಿಗಳು ಸಲ್ಲಿಕೆಯಾಗಿದ್ದು, ಇವುಗಳಲ್ಲಿ 22,82,55,866 ಅರ್ಜಿಗಳನ್ನು ಇತ್ಯರ್ಥ ಪಡಿಸಲಾಗಿದೆ ಎಂದರು.

ಪ್ರಸ್ತುತ ತಿಂಗಳು ಕೋವಿಡ್ ಅರ್ಜಿಗಳ ವಿಲೇವಾರಿಯಲ್ಲಿ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನ, ಚಿಕ್ಕಮಗಳೂರು ದ್ವಿತೀಯ ಸ್ಥಾನ ಪಡೆದರೆ, ಚಿಕ್ಕಬಳ್ಳಾಪುರ ತೃತೀಯ ಸ್ಥಾನದಲ್ಲಿದೆ. ಕ್ರಮವಾಗಿ ರಾಯಚೂರು, ಬೆಂಗಳೂರು ಕೊನೆಯ ಸ್ಥಾನದಲ್ಲಿವೆ ಎಂದ ಅವರು, ಬೆಂಗಳೂರು ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಅತೀ ಹೆಚ್ಚು ಅರ್ಜಿಗಳು ಬಂದಿವೆ ಎಂದರು.

ಸಕಾಲ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಇಲಾಖೆಯ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು ಕೈಜೋಡಿಸಬೇಕು ಎಂದ ಅವರು ಸಕಾಲ ಯೋಜನೆಯ ಬಗ್ಗೆ ಇಲಾಖೆಗಳು ಕೈಗೊಳ್ಳುವ ಕಾರ್ಯಗಳ ಮೇಲುಸ್ತುವಾರಿ ತಪ್ಪದೆ ಮಾಡಬೇಕು ಎಂದರು.

ಪ್ರತಿಯೊಂದು ಇಲಾಖೆಯು ತಮ್ಮ ಕಚೇರಿಯಲ್ಲಿ ಸಕಾಲ ಸೇವೆಗಳ ಮಾಹಿತಿ ಬೋರ್ಡ್‌ನ್ನು ಪ್ರದರ್ಶಿಸಬೇಕು ಎಂದ ಅವರು, ಜನಸಾಮಾನ್ಯರಿಂದ ಸಕಾಲ ಸೇವೆಗಳ ಬಗ್ಗೆ ಅನಿಸಿಕೆಗಳನ್ನು ಪಡೆಯಬೇಕು ಎಂದರು.

ಸರಕಾರದ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಮಾತನಾಡಿ, ಸಕಾಲ ಯೋಜನೆಯ ಬಗ್ಗೆ ಜನಜಾಗೃತಿ ಮೂಡಿಸಿ ಹೆಚ್ಚು ಜನರು ಈ ಸೇವೆಗಳನ್ನು ಪಡೆಯುವ ಹಾಗೆ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದರು.

ಸಭೆಯಲ್ಲಿ ಅಪರ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲಾ, ಸಕಾಲ ಯೋಜನೆಯ ಹೆಚ್ಚುವರಿ ಮಿಷನ್ ನಿರ್ದೇಶಕಿ ಡಾ.ಬಿ.ಆರ್ ಮಮತಾ, ಜಿಲ್ಲಾಧಿಕಾರಿ ಜಿ. ಜಗದೀಶ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರು, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕಿರಣ್ ಪಡ್ನೇಕರ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X