Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಯಸ್ಸಾದ ಹಸು- ಎತ್ತುಗಳನ್ನು ಬಿಜೆಪಿಯವರ...

ವಯಸ್ಸಾದ ಹಸು- ಎತ್ತುಗಳನ್ನು ಬಿಜೆಪಿಯವರ ಮನೆ ಬಾಗಿಲಲ್ಲಿ ಬಿಟ್ಟು ಬರಬೇಕೆ: ಸಿದ್ದರಾಮಯ್ಯ ಪ್ರಶ್ನೆ

ಗೋಹತ್ಯೆ ನಿಷೇಧ ಕಾಯ್ದೆ ಜಾರಿ ನಿರ್ಧಾರಕ್ಕೆ ತೀವ್ರ ವಿರೋಧ

ವಾರ್ತಾಭಾರತಿವಾರ್ತಾಭಾರತಿ1 Dec 2020 5:07 PM IST
share
ವಯಸ್ಸಾದ ಹಸು- ಎತ್ತುಗಳನ್ನು ಬಿಜೆಪಿಯವರ ಮನೆ ಬಾಗಿಲಲ್ಲಿ ಬಿಟ್ಟು ಬರಬೇಕೆ: ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು, ಡಿ.1: ಲವ್ ಜಿಹಾದ್ ಮತ್ತು ಗೋಹತ್ಯೆ ವಿಚಾರದಲ್ಲಿ ಸರ್ಕಾರ ಕಾಯ್ದೆ ತರಲು ಮುಂದಾದರೆ ವಿರೋಧಿಸುವುದಾಗಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. 

ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲು ಮುಂದಾಗಿರುವ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಸಿದ್ದರಾಮಯ್ಯ ಅವರನ್ನು ಇಂದು ಭೇಟಿಯಾಗಿ ಮಾತುಕತೆ ನಡೆಸಿದರು. 

ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ ಅವರು, ರಾಜ್ಯ ಸರ್ಕಾರದ ಪಶು ಸಂಗೋಪನಾ ಸಚಿವರು ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸುವುದಾಗಿ ಹೇಳಿದ್ದರು. ಇದರಿಂದ ಆತಂಕಕ್ಕೀಡಾದ ಮುಸ್ಲಿಂ ಸಮುದಾಯದ ನಾಯಕರು ಇಂದು ನನ್ನನ್ನು ಭೇಟಿಯಾಗಿ, ಮಾತುಕತೆ ನಡೆಸಿದರು. ಈ ಕಾಯ್ದೆಯನ್ನು ಬಿಜೆಪಿ ಆಡಳಿತವಿರುವ ಗೋವಾದಲ್ಲಿ ಏಕೆ ಇದುವರೆಗೂ ಜಾರಿಗೊಳಿಸಿಲ್ಲ ? ಕರ್ನಾಟಕವೇ ಏಕೆ ? ಕಾಯ್ದೆ ಜಾರಿಯಾದರೆ ತಾವು ಕಷ್ಟ ನಷ್ಟಕ್ಕೆ ಈಡಾಗುತ್ತೇವೆ ಎಂಬ ಭಯದಿಂದ ಮುಸ್ಲಿಂ ಸಮುದಾಯದ ಮುಖಂಡರು ನನ್ನ ಬಳಿಗೆ ಬಂದಿದ್ದರು. ಅಧಿವೇಶನದಲ್ಲಿ ಈ ವಿಚಾರ ಚರ್ಚೆಗೆ ಬಂದಲ್ಲಿ ನಾವು ತೀವ್ರವಾಗಿ ವಿರೋಧಿಸಲಿದ್ದೇವೆ ಎಂದರು. 

ಉತ್ತರ ಪ್ರದೇಶದಲ್ಲಿ ಜಾರಿಯಿರುವ ಲವ್ ಜಿಹಾದ್ ತಡೆ ಕಾನೂನು ಅಸಂವಿಧಾನಿಕ. ನಿಗದಿತ ವಯೋಮಾನಕ್ಕೆ ಮೇಲ್ಪಟ್ಟ ಪ್ರತಿಯೊಬ್ಬರಿಗೂ ತಮಗೆ ಇಷ್ಟವಾಗುವ ವ್ಯಕ್ತಿಯನ್ನು ಮದುವೆಯಾಗುವ ಸ್ವಾತಂತ್ರ್ಯ ಇದೆ. ಯಾವುದೇ ಒಂದು ಜಾತಿ ಇಂತಹುದೇ ಜಾತಿ - ಧರ್ಮದ ಹುಡುಗ ಅಥವಾ ಹುಡುಗಿಯನ್ನು ವಿವಾಹವಾಗಬೇಕೆಂಬ ಕಾನೂನು ನಮ್ಮ ಸಂವಿಧಾನದಲ್ಲಿ ಇಲ್ಲ. ಇದು ವಿವೇಕ- ವಿವೇಚನೆಯಿಲ್ಲದೆ ರಚನೆಯಾದ ಕಾನೂನು. ಹಿಂದೂ ಮುಸ್ಲಿಮನನ್ನು, ಮುಸ್ಲಿಂ ಹಿಂದೂವನ್ನು ಮಧುವೆಯಾಗುವಂತಿಲ್ಲ ಎಂಬ ನಿಯಮ ರೂಪಿಸುವುದು ತಪ್ಪು ಎಂದು ತಿಳಿಸಿದರು. 

ಹಿಂದೆ ಮೊಘಲರ ಆಳ್ವಿಕೆ ಕಾಲದಲ್ಲಿ ಸಾಕಷ್ಟು ಅಂತರ್ಧರ್ಮೀಯ ವಿವಾಹವಾಗಿವೆ. ಹಿಂದೂ ಮುಸ್ಲಿಂ ದಂಪತಿಗಳಿಗೆ ಜನಿಸಿರುವ ಸಾಕಷ್ಟು ಮಂದಿ ಇದ್ದರು. ಇಂಥಹ ಕಾನೂನು ಜಾರಿಗೊಳಿಸಲು ಸಂವಿಧಾನ ಅವಕಾಶ ನೀಡಲ್ಲ. ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದರೆ ಕಾಯ್ದೆ ವಜಾಗೊಳ್ಳಲಿದೆ. ಇಂತಹಾ ಕಾಯ್ದೆಗಳಿಗೆ ಅವಕಾಶವಿಲ್ಲ ಎಂದು ಅಲಹಾಬಾದ್ ಹಾಗೂ ಕರ್ನಾಟಕದ ಉಚ್ಚ ನ್ಯಾಯಾಲಯಗಳು ಹೇಳಿವೆ. ಹಾಗಾಗಿ ಕಾಯ್ದೆ ಜಾರಿ ಅಸಾಧ್ಯ. ಆದರೂ ಇಂತದ್ದೊಂದು ಕೆಲಸಕ್ಕೆ ಸರ್ಕಾರ ಕೈಹಾಕಿದೆ ಅಂದರೆ ಅದು ದುರುದ್ದೇಶದಿಂದ ಕೂಡಿದ ಕೆಲಸವಲ್ಲದೆ ಬೇರೇನು? ಸಮಾಜದ ಶಾಂತಿ ಕದಡಬೇಕು ಎಂಬ ಬಿಜೆಪಿಯವರ ಉದ್ದೇಶ ಇದರಿಂದ ಸ್ಪಷ್ಟವಾಗುತ್ತಿದೆ ಎಂದು ಟೀಕಿಸಿದರು.

ನನ್ನನ್ನು ಕಾಂಗ್ರೆಸ್ ಸೇರಿಸಿದ್ದು ವಿಶ್ವನಾಥ್ ಎಂಬುದೇ ಶುದ್ಧ ಸುಳ್ಳು. ನನ್ನನ್ನು ಕರೆದುಕೊಂಡು ಹೋಗಿ ಕಾಂಗ್ರೆಸ್‌ನ ಯಾವ ನಾಯಕರನ್ನು ಭೇಟಿ ಮಾಡಿಸಿದ್ದರು ಅಂತ ವಿಶ್ವನಾಥ್ ಅವರನ್ನೇ ಕೇಳಿ. ನಾನು ಕಾಂಗ್ರೆಸ್ ಸೇರಲು ತಿರಾನ್ ಹಾಗೂ ಅಹಮದ್ ಪಟೇಲ್ ಕಾರಣ. ಇದನ್ನೇ ಹಿಂದೆಯೂ ಹಲವು ಬಾರಿ ಹೇಳಿದ್ದೇನೆ. ಕರ್ನಾಟಕದ ಯಾವೊಬ್ಬ ನಾಯಕ ಕೂಡ ನಾನು ಕಾಂಗ್ರೆಸ್ ಸೇರಲು ಕಾರಣರಲ್ಲ ಎಂದರು.

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯೂ ಸೇರಿದಂತೆ ಬಿಜೆಪಿ ಹಾಗೂ ಆರೆಸ್ಸೆಸ್ ನಾಯಕರು ನಮ್ಮಲ್ಲಿರುವ ಮಾನವೀಯತೆಯನ್ನು ನೋಡಿ ಕಲಿಯಬೇಕು. ಡಿ.ಕೆ ಶಿವಕುಮಾರ್ ಅವರಿಗೆ ನೀವು ಕಿವಿಮಾತು ಹೇಳುವುದೇನೋ ಸರಿ, ಆದರೆ ತಾವು ಯಾವಾಗ ಮಾನವೀಯತೆ, ಮನುಷ್ಯತ್ವವನ್ನು ಕಲಿಯುವುದು? ನಾನೂ ಹಿಂದೆ ಸಗಣಿ ಬಾಚಿದ್ದೇನೆ, ಗಂಜಲ ಎತ್ತಿದ್ದೇನೆ. ಬಿಜೆಪಿಯ ಯಾವ ನಾಯಕ ಈ ಕೆಲಸವನ್ನೆಲ್ಲಾ ಮಾಡಿದ್ದಾರೆ? ಪಶು ಸಾಕಾಣಿಕೆ ಬಗ್ಗೆ ಬಿಜೆಪಿ ನಾಯಕರಿಗೆ ಎಷ್ಟು ಗೊತ್ತಿದೆ? ಮುದಿ ಎತ್ತನ್ನೋ ಅಥವಾ ಹಸುವನ್ನೋ ಅದು ಸಾಯುವವರೆಗೆ ಸಾಕಲು ಎಷ್ಟು ಖರ್ಚು ಬರುತ್ತೆಂದು ಬಿಜೆಪಿಯವರಿಗೆ ಗೊತ್ತೇ? ಹಸು- ಎತ್ತುಗಳಿಗೆ ವಯಸ್ಸಾದ ಮೇಲೆ ಅವನ್ನು ರೈತರು ಬಿಜೆಪಿಯವರ ಮನೆ ಬಾಗಿಲಿಗೆ ಕೊಂಡುಹೋಗಿ ಬಿಟ್ಟು ಬರಬೇಕೆ ಎಂದು ಪ್ರಶ್ನಿಸಿದರು.

ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಸ್ಲಿಮರಿಗೆ ಟಿಕೆಟ್ ನೀಡುವುದಿಲ್ಲ ಎಂದು ಈಶ್ವರಪ್ಪ ಅವರು ಹೇಳಿದ್ದಾರೆ. ಈ ದೇಶ ಮುಸ್ಲಿಮರಿಗೆ ಸೇರಿದೆಯೋ ಇಲ್ಲವೋ ? ಅವರು ಸಂವಿಧಾನ ಓದುವುದು ಒಳ್ಳೆಯದು. ಬಿಜೆಪಿಯವರು ಯಾವ ಪುಸ್ತಕವನ್ನೂ ಓದುವುದಿಲ್ಲ. ಆರೆಸ್ಸೆಸ್ ನವರು ಹೇಳಿಕೊಟ್ಟಿದ್ದನ್ನು ಬಂದು ಹೇಳುತ್ತಾರೆ. ಅವರು ಓದುವುದೂ ಇಲ್ಲ. ಬರೆಯುವುದೂ ಇಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದರು.

ಸಭೆಯಲ್ಲಿ ಶಾಸಕ ರಿಝ್ವಾನ್ ಅರ್ಶದ್ ಉಪಸ್ಥಿತರಿದ್ದರು.

ನಾನು ಕರ್ನಾಟಕ ಹಾಗೂ ಕರ್ನಾಟಕದ ರಾಜಕಾರಣಕ್ಕೆ ಸೀಮಿತ. ನನಗೆ ಹಿಂದಿ ಬರುವುದಿಲ್ಲ, ಬಂದಿದ್ದರೆ ನಾನು ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತಿದ್ದೆ. ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನನ್ನನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಾಡಿ, ಮಹಾರಾಷ್ಟ್ರ ರಾಜ್ಯದ ಉಸ್ತುವಾರಿ ನೀಡುವುದಾಗಿ ಹೇಳಿದ್ದರು. ಆದರೆ, ನಾನು ಒಪ್ಪಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X