Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕುರುಬರ ಎಸ್ಟಿ ಹೋರಾಟದ ಹಿಂದೆ ಆರೆಸ್ಸೆಸ್...

ಕುರುಬರ ಎಸ್ಟಿ ಹೋರಾಟದ ಹಿಂದೆ ಆರೆಸ್ಸೆಸ್ ಕೈವಾಡ: ಸಿದ್ದರಾಮಯ್ಯ ಆರೋಪ

''ಬಿಜೆಪಿ, ಆರೆಸ್ಸೆಸ್ ಮೀಸಲಾತಿ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧ''

ವಾರ್ತಾಭಾರತಿವಾರ್ತಾಭಾರತಿ1 Dec 2020 6:03 PM IST
share
ಕುರುಬರ ಎಸ್ಟಿ ಹೋರಾಟದ ಹಿಂದೆ ಆರೆಸ್ಸೆಸ್ ಕೈವಾಡ: ಸಿದ್ದರಾಮಯ್ಯ ಆರೋಪ

ಬೆಂಗಳೂರು, ಡಿ.1: ಕುರುಬರ ಎಸ್ಟಿ ಹೋರಾಟದ ಹಿಂದೆ ಆರೆಸ್ಸೆಸ್ ಕೈವಾಡವಿದೆ. ಇದು ಕುರುಬ ಸಮುದಾಯವನ್ನು ಒಡೆಯುವ ಹುನ್ನಾರ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು.

ಮಂಗಳವಾರ ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಟಿ ಹೋರಾಟದ ಹೆಸರಲ್ಲಿ ಕುರುಬ ಸಮುದಾಯವನ್ನು ದಾರಿ ತಪ್ಪಿಸುವ ಕೆಲಸವಾಗುತ್ತಿದೆ. ಆರೆಸ್ಸೆಸ್‍ನ ದತ್ತಾತ್ರೇಯ ಹೊಸಬಾಳೆ ಹಾಗೂ ಸಂತೋಷ್ ಅವರು ಕೆ.ಎಸ್.ಈಶ್ವರಪ್ಪರನ್ನು ಬಳಸಿಕೊಂಡು ಕುರುಬ ಸಮಾಜವನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಗಾರಿದರು.

ನಾವು ಕರೆದರೂ ಕುರುಬರ ಎಸ್ಟಿ ಮೀಸಲಾತಿ ಹೋರಾಟದಲ್ಲಿ ಸಿದ್ದರಾಮಯ್ಯ ಭಾಗವಹಿಸುತ್ತಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ. ಅವರು ನನ್ನನ್ನು ಕರೆದಿಲ್ಲ. ಬರುತ್ತೇನೆ ಅಥವಾ ಬರುವುದಿಲ್ಲ ಎಂದು ನಾನೂ ಅವರಿಗೆ ಹೇಳಿಲ್ಲ. ಈಶ್ವರಪ್ಪ ಅವರು ಈ ವಿಚಾರದಲ್ಲಿ ಸುಳ್ಳು ಹೇಳಿದ್ದಾರೆ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರು. 

ನರೇಂದ್ರ ಮೋದಿ ಪ್ರಧಾನಿಯಾಗಿ ಆರೂವರೆ ವರ್ಷಗಳಾದವು. ಗೊಂಡ, ರಾಜಗೊಂಡ ಸಮುದಾಯದವರು ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕುರುಬರು ಎಂದು ಕರೆದುಕೊಳ್ಳುವವರೂ ಅದರಲ್ಲಿ ಸೇರಿದ್ದಾರೆ. ಅವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಎಂದು ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಲಾಗಿದೆ. ಆ ಬಗ್ಗೆ ಈಶ್ವರಪ್ಪ ಏಕೆ ಆದೇಶ ಮಾಡಿಸಿಲ್ಲ. ಕೋಲಿ, ಗೊಲ್ಲ ಸಮುದಾಯವನ್ನೂ ಎಸ್ಟಿ ಪಟ್ಟಿಗೆ ಸೇರಿಸುವಂತೆ ಮಾಡಿರುವ ಶಿಫಾರಸು ನನೆಗುದಿಗೆ ಬಿದ್ದಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಈಶ್ವರಪ್ಪರನ್ನು ಮುಂದೆ ಬಿಟ್ಟು ಆರೆಸ್ಸೆಸ್ ಕುರುಬರ ಎಸ್ಟಿ ಹೋರಾಟದ ರೂಪುರೇಷೆ ಸಿದ್ಧಪಡಿಸುತ್ತಿದೆ. ಇದು ಸಮುದಾಯವನ್ನು ದಾರಿ ತಪ್ಪಿಸುವ ಮತ್ತು ಗೊಂದಲ ನಿರ್ಮಾಣ ಮಾಡುವ ಪ್ರಯತ್ನ. ಹೋರಾಟ ತಪ್ಪು ಎಂದು ಹೇಳುವುದಿಲ್ಲ. ಆರು ವರ್ಷದಿಂದ ಸುಮ್ಮನಿದ್ದು ಈಗ ಹೋರಾಟಕ್ಕೆ ಕೈ ಹಾಕಿರುವುದರ ಉದ್ದೇಶ ಏನು? ಹೋರಾಟದ ಹಿಂದೆ ಆರೆಸ್ಸೆಸ್ ಇರುವುದರ ಮರ್ಮವೇನು? ಆರೆಸ್ಸೆಸ್‍ನವರು ಎಂದೂ ಮೀಸಲಾತಿ ಪರ ಇಲ್ಲ. ಹಾವನೂರು ಆಯೋಗ, ವೆಂಕಟಸ್ವಾಮಿ ಆಯೋಗ, ಚಿನ್ನಪ್ಪರೆಡ್ಡಿ ಆಯೋಗ ಮತ್ತು ಮಂಡಲ್ ವರದಿಯನ್ನು ಅವರು ಸ್ವಾಗತ ಮಾಡಿದರೇ? ಎಲ್ಲ ಸಂದರ್ಭದಲ್ಲಿಯೂ ವಿರೋಧ ಮಾಡಿದ್ದಾರೆ ಎಂದು ಅವರು ಟೀಕಿಸಿದರು.

ಬಿಜೆಪಿ ಮತ್ತು ಆರೆಸ್ಸೆಸ್ ಮೀಸಲಾತಿ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧ. ಹೆಗಡೇವಾರ್, ಗೋಳ್ವಾಲ್ಕರ್ ಆರೆಸ್ಸೆಸ್‍ನ ಸ್ಥಾಪಕರು. ಅವರು ಎಂದಾದರೂ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿ ಪರ ಹೋರಾಟ ಮಾಡಿದ್ದಾರೆಯೇ? ಕುರುಬರ ನಾಯಕ ನಾನೇ ಎಂದು ಈಶ್ವರಪ್ಪ ಹೇಳಿಕೊಳ್ಳಲಿ. ಅದಕ್ಕೆ ನನ್ನ ತಕರಾರು ಇಲ್ಲ. ಆದರೆ, ನಾಯಕ ಎಂದು ನಾವೇ ಹೇಳಿಕೊಳ್ಳುವುದಲ್ಲ. ಜನ ತೀರ್ಮಾನ ಮಾಡಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ಕುರುಬರನ್ನು ಎಸ್ಟಿಗೆ ಸೇರಿಸುವ ಮೊದಲು ಎಸ್ಟಿಗೆ ನೀಡುತ್ತಿರುವ ಮೀಸಲು ಪ್ರಮಾಣವನ್ನು ಶೇ.3ರಿಂದ ಶೇ.20ಕ್ಕೆ ಹೆಚ್ಚಿಸಬೇಕು. ಅದಕ್ಕೂ ಹೋರಾಟ ಮಾಡಬೇಕಿದೆ. ವಾಲ್ಮೀಕಿ ಸಮುದಾಯದವರು ಮೀಸಲು ಪ್ರಮಾಣವನ್ನು ಶೇ.7.5ಕ್ಕೆ ಹೆಚ್ಚಿಸುವಂತೆ ಈಗಾಗಲೇ ಹೋರಾಟ ಮಾಡುತ್ತಿದ್ದಾರೆ. ಮೀಸಲು ಪ್ರಮಾಣ ಶೇ.3ರಷ್ಟೇ ಇದ್ದರೆ ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸಿದರೂ ಪ್ರಯೋಜನವಿಲ್ಲ. ಕುರುಬ ಸಮುದಾಯದ ಬಗ್ಗೆ ಬಿಜೆಪಿಯವರಿಗೆ ಕಾಳಜಿ ಇದ್ದರೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಿದ್ಧಪಡಿಸಿರುವ ಸಾಮಾಜಿಕ, ಶೈಕ್ಷಣಿಕ ಗಣತಿ ಆಧಾರಿತ ವರದಿಯನ್ನು ಸರಕಾರ ಅಂಗೀಕಾರ ಮಾಡಲಿ ಎಂದು ಅವರು ಒತ್ತಾಯಿಸಿದರು.

ಕುರುಬರ ಬಗ್ಗೆ ಈಶ್ವರಪ್ಪ ಅವರಿಗೆ ಇದ್ದಕ್ಕಿದ್ದಂತೆ ಕಾಳಜಿ ಬಂದಿದೆ. ಕಾಗಿನೆಲೆ ಮಠ ಸ್ಥಾಪನೆ ಸಂದರ್ಭದಲ್ಲಿ ಈಶ್ವರಪ್ಪ ಎಲ್ಲಿದ್ದರು? ಆಗ ಅವರು ಪತ್ತೆಯೇ ಇರಲಿಲ್ಲ. ಈಗ ಸ್ವಾಮೀಜಿಗಳನ್ನು ಕರೆದುಕೊಂಡು ಹೋರಾಟ ನಡೆಸುತ್ತಿದ್ದಾರೆ. ಉಡುಪಿಯ ಕನಕ ಗೋಪುರ ಕೆಡವಿದಾಗ ಎಲ್ಲಿ ಹೋಗಿದ್ದರು. ಯಾವ ಮೀಸಲಾತಿ ಪರ ಅವರು ಹೋರಾಟ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ರಾಜ್ಯಸಭಾ ಸದಸ್ಯರಾಗಿದ್ದ ರಾಮಾ ಜೋಯಿಸ್ ಹಿಂದುಳಿದ ವರ್ಗದವರ ಮೀಸಲು ವಿರೋಧಿಸಿದಾಗ ಈಶ್ವರಪ್ಪ ಏಕೆ ಅದನ್ನು ಪ್ರತಿಭಟಿಸಲಿಲ್ಲ. ಮೊದಲು ಬೀದರ್, ಕಲಬುರಗಿ, ಯಾದಗಿರಿಯ ಗೊಂಡ, ರಾಜಗೊಂಡ ಸಮುದಾಯವನ್ನು ಎಸ್ಟಿಗೆ ಸೇರಿಸುವ ಕುರಿತು ಆದೇಶ ಜಾರಿ ಮಾಡಿಸಲಿ. ಎಸ್ಟಿ ಹೆಸರಲ್ಲಿ ಮುಗ್ಧ ಜನರನ್ನು ದಾರಿ ತಪ್ಪಿಸುವ ಪ್ರಯತ್ನ ಬೇಡ ಎಂದು ಅವರು ಮನವಿ ಮಾಡಿದರು.

ಈಶ್ವರಪ್ಪ ಎಂದೂ ಮೀಸಲಾತಿ ಪರ ಹೋರಾಟ ಮಾಡಿದವರಲ್ಲ. ಸದನದಲ್ಲಿಯೂ ಧ್ವನಿ ಎತ್ತಿದವರಲ್ಲ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಅನ್ನು ಈಶ್ವರಪ್ಪ ಎಲ್ಲಿ ಬಿಟ್ಟರು. ಸ್ವಾರ್ಥಕ್ಕಾಗಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಬಾರದು. ಈಶ್ವರಪ್ಪ ಸ್ವಂತ ಬುದ್ಧಿಯಿಂದ ಹೋರಾಟ ಶುರು ಮಾಡಿಲ್ಲ. ಇದು ಆರೆಸ್ಸೆಸ್ ಹಾಗೂ ಬಿಜೆಪಿಯವರ ಹುನ್ನಾರ ಎಂದು ಸಿದ್ದರಾಮಯ್ಯ ಪುನರುಚ್ಚರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X