Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 13ನೇ ಬೆಂಗಳೂರು ಅಂತರ್ ರಾಷ್ಟ್ರೀಯ...

13ನೇ ಬೆಂಗಳೂರು ಅಂತರ್ ರಾಷ್ಟ್ರೀಯ ಸಿನಿಮೋತ್ಸವಕ್ಕೆ ಚಾಲನೆ ನೀಡಲು ಸಿಎಂ ಸಮ್ಮತಿ

ವಾರ್ತಾಭಾರತಿವಾರ್ತಾಭಾರತಿ1 Dec 2020 6:30 PM IST
share
13ನೇ ಬೆಂಗಳೂರು ಅಂತರ್ ರಾಷ್ಟ್ರೀಯ ಸಿನಿಮೋತ್ಸವಕ್ಕೆ ಚಾಲನೆ ನೀಡಲು ಸಿಎಂ ಸಮ್ಮತಿ

ಬೆಂಗಳೂರು, ಡಿ.1: ಪ್ರೇಕ್ಷಕರನ್ನು ಮತ್ತೆ ಚಿತ್ರಮಂದಿರಗಳತ್ತ ಸೆಳೆಯಲು 13ನೇ ಬೆಂಗಳೂರು ಅಂತರ್ ರಾಷ್ಟ್ರೀಯ ಸಿನಿಮೋತ್ಸವ ಪೂರಕ ವಾತಾವರಣವನ್ನು ನಿರ್ಮಿಸಲಿದೆ. 2021ರ ಫೆಬ್ರವರಿ ಮೂರು ಅಥವಾ ನಾಲ್ಕನೆ ವಾರದಲ್ಲಿ ಸಿನಿಮೋತ್ಸವವನ್ನು ಆಯೋಜಿಸಲು ಅನುಮತಿ ನೀಡುವಂತೆ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನಿಲ್ ಪುರಾಣಿಕ್ ನೇತೃತ್ವದ ನಿಯೋಗವು ಮಾಡಿದ ಮನವಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಂದಿಸಿದ್ದಾರೆ.

ಮಂಗಳವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ತಮ್ಮನ್ನು ಭೇಟಿ ಮಾಡಿದ ನಿಯೋಗವು ಬೆಂಗಳೂರು ಅಂತರ್ ರಾಷ್ಟ್ರೀಯ ಸಿನಿಮೋತ್ಸವ ಸತತವಾಗಿ ಕಳೆದ 12 ವರ್ಷಗಳ ಕಾಲ ಯಶಸ್ಸನ್ನು ಕಂಡಿದೆ. ವಿಶ್ವದಲ್ಲಿ 5000 ಸ್ಥಳಗಳಲ್ಲಿ ಚಲನಚಿತ್ರೋತ್ಸವಗಳು ನಡೆಯುತ್ತವೆ. ಆದರೆ, ಅವುಗಳಲ್ಲಿ ಕೇವಲ 45 ಚಲನಚಿತ್ರೋತ್ಸವಗಳಿಗೆ ಅಂತರ್ ರಾಷ್ಟ್ರೀಯ ಮಾನ್ಯತೆ ದೊರೆತಿದೆ ಎಂದು ತಿಳಿಸಿತು.

ಇದೀಗ ಬೆಂಗಳೂರು ಅಂತರ್ ರಾಷ್ಟ್ರೀಯ ಸಿನಿಮೋತ್ಸವಕ್ಕೆ ಅಂತರ್ ರಾಷ್ಟ್ರೀಯ ಮಾನ್ಯತೆ ದೊರೆಯುವ ಲಕ್ಷಣಗಳು ಗೋಚರಿಸುತ್ತಿವೆ. ಒಂದು ವೇಳೆ ಮಾನ್ಯತೆ ದೊರೆತಲ್ಲಿ ಇದು ವಿಶ್ವದಲ್ಲಿ 46ನೆ ಮಾನ್ಯತೆ ಪಡೆದ ಅಂತರ್ ರಾಷ್ಟ್ರೀಯ ಚಲನಚಿತ್ರೋತ್ಸವ ಎಂಬ ಹೆಗ್ಗಳಿಕೆಗೆ ಪಾತ್ರವಾಗುತ್ತದೆ. ಆದುದರಿಂದ, 13ನೇ ಬೆಂಗಳೂರು ಅಂತರ್ ರಾಷ್ಟ್ರೀಯ ಸಿನಿಮೋತ್ಸವವನ್ನು ಆಯೋಜಿಸಲು ಸಮ್ಮತಿ ನೀಡುವಂತೆಯೂ ಹಾಗೂ ಅದಕ್ಕೆ ಅಗತ್ಯ ಅನುದಾನವನ್ನು ದೊರಕಿಸಿಕೊಡುವಂತೆಯೂ ನಿಯೋಗವು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿತು.

ಭಾರತದಲ್ಲಿ ಕೇವಲ ನಾಲ್ಕು ಸ್ಥಳಗಳಲ್ಲಿ ಚಲನಚಿತ್ರೋತ್ಸವಗಳು ನಡೆಯುತ್ತವೆ. ಗೋವಾದಲ್ಲಿ ಭಾರತ ಸರಕಾರ ಚಲನಚಿತ್ರೋತ್ಸವವನ್ನು ಆಯೋಜಿಸುತ್ತದೆ. ಉಳಿದಂತೆ ಪಶ್ಚಿಮ ಬಂಗಾಳ, ಕರ್ನಾಟಕ ಮತ್ತು ಕೇರಳ ರಾಜ್ಯ ಸರಕಾರಗಳು ಚಲನಚಿತ್ರೋತ್ಸವಗಳನ್ನು ಆಯೋಜಿಸುತ್ತಿವೆ ಎಂಬ ಅಂಶವನ್ನು ನಿಯೋಗವು ಮುಖ್ಯಮಂತ್ರಿಯ ಗಮನಕ್ಕೆ ತಂದಿತು.

ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಡಿ.ಆರ್.ಜಯರಾಜ್, ಕಲಾನಿರ್ದೇಶಕ ಎನ್.ವಿದ್ಯಾಶಂಕರ್, ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಹಾಗೂ ಚಿತ್ರನಟಿ ಶೃತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ.ಪಿ.ಎಸ್.ಹರ್ಷ, ಹಿರಿಯ ಪತ್ರಕರ್ತ ಮತ್ತು ಚಿತ್ರ ವಿಮರ್ಶಕ ಮುರಳೀಧರ್ ಖಜಾನೆ ಹಾಗೂ ರಾಜ್ಯ ಚಲನಚಿತ್ರ ಅಕಾಡೆಮಿ ರಿಜಿಸ್ಟ್ರಾರ್ ಜಿ.ಹಿಮಂತರಾಜು ಈ ನಿಯೋಗದಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X