ಗುತ್ತಿಗೆ ಆಧಾರದಲ್ಲಿ ನೇಮಕಾತಿಗೆ ಡಿ.7ರಂದು ಸಂದರ್ಶನ
ಉಡುಪಿ, ಡಿ.1: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತುತ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿಯಿರುವ ನೇತ್ರ ತಜ್ಞರು, ತಾಲೂಕು ಆಶಾ ಮೇಲ್ವಿಚಾರಕಿ, ಶುಶ್ರೂಷಕರು, ಎಲ್ಎಚ್ವಿ, ಡೆಂಟಲ್ ಹೈಜೆನಿಸ್ಟ್, ಎಂಬಿಬಿಎಸ್ ವೈದ್ಯಾಧಿಕಾರಿಗಳು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು, ಕಿರಿಯ ಪುರುಷ ಆರೋಗ್ಯ ಸಹಾಯಕರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಡಿ.7 ರಂದು ಬೆಳಿಗ್ಗೆ 10:30ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಉಡುಪಿ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಅಭ್ಯರ್ಥಿಗಳು ಶೈಕ್ಷಣಿಕ ಮೂಲ ದಾಖಲೆಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story