Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ''ನಮ್ಮ ಪ್ರೀತಿಯ ಮುಂದೆ ನಿಮ್ಮ ದ್ವೇಷದ...

''ನಮ್ಮ ಪ್ರೀತಿಯ ಮುಂದೆ ನಿಮ್ಮ ದ್ವೇಷದ ಸೋಲು ನಿಶ್ಚಯ''

'ಲವ್ ಜಿಹಾದ್' ತಡೆ ಕಾನೂನು ಜಾರಿ ವಿರೋಧಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ1 Dec 2020 7:43 PM IST
share
ನಮ್ಮ ಪ್ರೀತಿಯ ಮುಂದೆ ನಿಮ್ಮ ದ್ವೇಷದ ಸೋಲು ನಿಶ್ಚಯ

ಬೆಂಗಳೂರು, ಡಿ.1: ಕರ್ನಾಟಕ ಸೇರಿದಂತೆ ದೇಶದಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ 'ಲವ್ ಜಿಹಾದ್' ವಿರುದ್ಧ ಕಾನೂನು ತರಲು ಹೊರಟಿರುವುದನ್ನು ವಿರೋಧಿಸಿ ವಿವಿಧ ಮಹಿಳಾ ಸಂಘಟನೆಗಳಿಂದು ನಗರದಲ್ಲಿ ಪ್ರತಿಭಟನೆ ನಡೆಸಿತು.

ಮಂಗಳವಾರ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಜನವಾದಿ ಮಹಿಳಾ ಸಂಘಟನೆ, ಕರ್ನಾಟಕದ ಮಹಿಳಾ, ದಲಿತ, ಮುಸ್ಲಿಂ, ಲಿಂಗತ್ವ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ, ಮಾನವ ಹಕ್ಕುಗಳ ಸಂಘಟನೆಗಳ ನೇತೃತ್ವದಲ್ಲಿ ಜಮಾಯಿಸಿದ್ದ ನೂರಾರು ಮಹಿಳಾ ಕಾರ್ಯಕರ್ತರು ಘೋಷಣೆಗಳು ಕೂಗಿ ಬಿಜೆಪಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಪ್ರೀತಿಯ ಮುಂದೆ ನಿಮ್ಮ ದ್ವೇಷದ ಸೋಲು ನಿಶ್ಚಯ, ದ್ವೇಷ ಬಿಟ್ಟು ಪ್ರೀತಿಯನ್ನು ಆಯ್ಕೆ ಮಾಡೋಣ. ಪ್ರೀತಿಯಿಂದ ಮಾತ್ರ ಸಮಾನತೆಯ ಸಮಾಜ ಕಟ್ಟಲು ಸಾಧ್ಯ, ಪ್ರೀತಿ ಬೇಕು, ದ್ವೇಷ ಬೇಡ ಎಂಬ ಭಿತ್ತಿಪತ್ರಗಳನ್ನು ಹಿಡಿದು ನೂರಾರು ಮಂದಿ ಬಿಜೆಪಿ ಸರಕಾರಗಳ ವಿರುದ್ಧ ವಿರೋಧ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜೆಎಂಎಸ್‍ನ ಕೆ.ಎಸ್.ಲಕ್ಷ್ಮಿ, ಮಹಿಳೆಯರ ರಕ್ಷಣೆಯ ಹೆಸರಿನಲ್ಲಿ ಮಹಿಳೆಯರು ಯಾರನ್ನು ಪ್ರೀತಿಸಬೇಕು, ಯಾರನ್ನು ಮದುವೆಯಾಗಬೇಕು ಎಂದು ಬಿಜೆಪಿ ನಿಯಂತ್ರಿಸುವ ಹುನ್ನಾರ ನಡೆಸುತ್ತಿದೆ. ಇಂತಹ ಕಾನೂನುಗಳ ಮೂಲಕ ನಮ್ಮ ಸಮಾಜವನ್ನು ಜಾತಿ, ಧರ್ಮಗಳ ಆಧಾರದಲ್ಲಿ ಮತ್ತಷ್ಟು ವಿಭಜಿಸುವ, ಸಮುದಾಯದ ನಾಗರಿಕತೆಗೆ ಧಕ್ಕೆ ತರುವುದನ್ನು ನಾವು ವಿರೋಧಿಸುತ್ತೇವೆ ಎಂದು ಆಕ್ರೋಶ ಹೊರಹಾಕಿದರು.

ದೇಶದ ಆರ್ಥಿಕತೆ ಕುಸಿದಿದೆ. ಕೃಷಿ ಮಸೂದೆಗಳ ವಿರುದ್ಧ ರೈತರು ದೆಹಲಿಯಲ್ಲಿ ಹೋರಾಡುತ್ತಿದ್ದಾರೆ. ಇಂತಹ ಸ್ಥಿತಿಯಲ್ಲಿ ಜನರ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ಇಲ್ಲದ ಲವ್ ಜಿಹಾದ್ ಚರ್ಚೆಯನ್ನು ಮುನ್ನಲೆಗೆ ತಂದಿದೆ. ಇನ್ನೊಂದು ಕಡೆ ಮಹಿಳೆಯರ ಮೇಲಿನ ದಬ್ಬಾಳಿಕೆ, ದೌರ್ಜನ್ಯಗಳು ಅಧಿಕವಾಗುತ್ತಿದ್ದು, ಅದರಲ್ಲಿಯೂ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿಯೇ ಇದು ಹೆಚ್ಚಾಗಿದೆ. ಅದನ್ನು ಧಿಕ್ಕು ತಪ್ಪಿಸಲು ಆಯಾ ಸರಕಾರಗಳು ಲವ್ ಜಿಹಾದ್ ಅನ್ನು ಚರ್ಚೆಗೆ ತಂದಿದ್ದಾರೆ ಎಂದು ಕಿಡಿಕಾರಿದರು.

ಅಲ್ಲದೇ, ಪ್ರೀತಿಸೋದು ತಪ್ಪಾ? ಎಂಬ ಟ್ವಿಟರ್ ಖಾತೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವ ಸಿ.ಟಿ.ರವಿ, ಶಶಿಕಲಾ ಜೊಲ್ಲೆ ಇವರುಗಳನ್ನು ಟ್ಯಾಗ್ ಮಾಡಿ, “ಪ್ರೀತಿ ಸಂವಿಧಾನದ ಸರಳ ಪಾಠ. ಆದರೆ ನೀವು ಸಂವಿಧಾನವನ್ನು ಇಷ್ಟಪಡುವುದಿಲ್ಲ ಅಥವಾ ಅರ್ಥಮಾಡಿಕೊಳ್ಳುವುದಿಲ್ಲ. ಆದ್ದರಿಂದ, ನೀವು ಅದನ್ನು ತಿಳಿದುಕೊಳ್ಳುವವರೆಗೆ ನಾವು ಪ್ರತಿಭಟನೆ ಪುನರಾವರ್ತಿಸುತ್ತೇವೆ!” ಎಂದು ಟ್ವೀಟ್ ಮಾಡಲಾಗಿದೆ.

‘ಅಂತರ್ ಧಾರ್ಮಿಕ ಪ್ರೀತಿಯ ಅಪರಾಧೀಕರಣದ ವಿರುದ್ಧ ಅಭಿಯಾನ’ ಎಂಬ ಶೀರ್ಷಿಕೆಯಡಿ ತಮ್ಮ ಖಾತೆಯನ್ನು ಲವ್ ಜಿಹಾದ್ ವಿರುದ್ಧದ ಅಭಿಯಾನ ಎಂದು ಕರೆದಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೂಡ ‘ಲವ್ ಜಿಹಾದ್’ ತಡೆಗೆ ಕಾನೂನು ರೂಪಿಸುವ ಮುಖ್ಯಮಂತ್ರಿ ಅವರ ಘೋಷಣೆ, ತಮ್ಮ ಆಡಳಿತದ ವೈಫಲ್ಯದಿಂದ ಜನಮನವನ್ನು ಬೇರೆಡೆ ಸೆಳೆಯುವ ಹತಾಶ ಪ್ರಯತ್ನವಲ್ಲದೇ ಇನ್ನೇನಲ್ಲ. ಕೋಮುದ್ವೇಷವನ್ನು ಹುಟ್ಟುಹಾಕಿ ರಾಜಕೀಯದ ಬೇಳೆ ಬೇಯಿಸುವ ದುರುದ್ದೇಶವಲ್ಲದೇ ಬೇರೆ ಯಾವ ಸದುದ್ದೇಶ ಈ ಘೋಷಣೆಗೆ ಇಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X