ದ.ಕ.ಜಿಲ್ಲೆ : 36 ಮಂದಿಗೆ ಕೊರೋನ ಸೋಂಕು
ಮಂಗಳೂರು, ಡಿ.1: ದ.ಕ. ಜಿಲ್ಲೆಯಲ್ಲಿ ಹೊಸದಾಗಿ 36 ಮಂದಿಗೆ ಸೋಂಕು ತಗುಲಿದ್ದು, 42 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿನ 31,959 ಸೋಂಕಿತರ ಪೈಕಿ 30,664 ಮಂದಿ ಕೊರೋನ ಮುಕ್ತರಾಗಿದ್ದಾರೆ. ಇಲ್ಲಿಯವರೆಗೆ ಕೋವಿಡ್‌ಗೆ 713 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 582 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ 14,988 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, 16,09,772 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಯ ಪ್ರಕಟನೆ ತಿಳಿಸಿದೆ.
Next Story





