ಹಾವು ಕಡಿದು ಯುವಕ ಸಾವು

ಮಂಡ್ಯ, ಡಿ.1: ಹಾವು ಕಚ್ಚಿ ಯುವಕನೊಬ್ಬ ಸಾವಿಗೀಡಾಗಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ ಹೋಬಳಿಯ ಬೂವನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಾಗೇಗೌಡರ ಪುತ್ರ ಅಜಯ್(23) ಸಾವನ್ನಪ್ಪಿದವ. ಈತ ಸೋಮವಾರ ಸಂಜೆ ಭತ್ತದ ಗದ್ದೆ ಬಳಿ ರಾಸುಗಳಿಗೆ ಮೇವು ಕೊಯ್ಯುತ್ತಿದ್ದಾಗ ವಿಷಪೂರಿತ ಹಾವು ಕಚ್ಚಿದ್ದು, ತಕ್ಷಣ ಕೆ.ಆರ್.ಪೇಟೆ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಲಾಗಿದೆ.
ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾನೆ. ಈ ಸಂಬಂಧ ಕೆ.ಆರ್.ಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





