Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯದ ಮೊದಲ ತ್ಯಾಜ್ಯ ವಿದ್ಯುತ್...

ರಾಜ್ಯದ ಮೊದಲ ತ್ಯಾಜ್ಯ ವಿದ್ಯುತ್ ಉತ್ಪಾದನಾ ಘಟಕಕ್ಕೆ ಶಂಕುಸ್ಥಾಪನೆ

ವಾರ್ತಾಭಾರತಿವಾರ್ತಾಭಾರತಿ2 Dec 2020 4:16 PM IST
share
ರಾಜ್ಯದ ಮೊದಲ ತ್ಯಾಜ್ಯ ವಿದ್ಯುತ್ ಉತ್ಪಾದನಾ ಘಟಕಕ್ಕೆ ಶಂಕುಸ್ಥಾಪನೆ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬಿಡದಿಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ರಾಜ್ಯದ ಮೊದಲ ತ್ಯಾಜ್ಯ ವಿದ್ಯುತ್ ಉತ್ಪಾದನಾ ಘಟಕಕ್ಕೆ ವರ್ಚುವಲ್ ಕಾರ್ಯಕ್ರಮದಲ್ಲಿ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿರುವ ಬೆಂಗಳೂರಿನಲ್ಲಿ ಪ್ರತಿದಿನ 5000 ಮೆಟ್ರಿಕ್ ಟನ್ ತ್ಯಾಜ್ಯ ಉತ್ಪಾದನೆಯಾಗುತ್ತಿದೆ. ವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಮಾಡುವ ನಿಟ್ಟಿನಲ್ಲಿ ತ್ಯಾಜ್ಯ ವಿದ್ಯುತ್ ಉತ್ಪಾದನಾ ಘಟಕ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

ಈ ಘಟಕದಲ್ಲಿ ದಿನಕ್ಕೆ 600 ಟನ್ ಸಂಸ್ಕರಿತ ತ್ಯಾಜ್ಯ ಬಳಸಿ, 11.5 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ಗುರಿ ಹೊಂದಲಾಗಿದೆ. 260 ಕೋಟಿ ರೂ. ವೆಚ್ಚದಲ್ಲಿ ಈ ಘಟಕವನ್ನು ನಿರ್ಮಿಸಲಾಗುತ್ತಿದ್ದು, ಕರ್ನಾಟಕ ವಿದ್ಯುತ್ ನಿಗಮ ಹಾಗೂ ಬಿಬಿಎಂಪಿ ಯವರು ತಲಾ 130 ಕೋಟಿ ವೆಚ್ಚ ಭರಿಸಲಿದ್ದಾರೆ. ಮುಂದಿನ ಎರಡು ವರ್ಷಗಳಲ್ಲಿ ಈ ಘಟಕದ ನಿರ್ಮಾಣ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು. ಇದರಿಂದ ಬೆಂಗಳೂರಿನ  ಶೇಕಡಾ 25 ರಷ್ಟು ಮಿಶ್ರ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗುತ್ತದೆ.

ಪ್ರಧಾನ ಮಂತ್ರಿ ಅವರು ಚಾಲನೆ ನೀಡಿರುವ "ಆತ್ಮ ನಿರ್ಭರ್ ಭಾರತ್" ಯೋಜನೆಯನ್ವಯ ಈ ಯೋಜನೆಯ ನಿರ್ಮಾಣ ಕಾರ್ಯದಲ್ಲಿ ಬಳಸುವ ಹೆಚ್ಚಿನ ವಸ್ತುಗಳು ಸ್ವದೇಶಿಯದ್ದೇ ಆಗಿರುತ್ತದೆ ಎಂದು ಮುಖ್ಯಮಂತ್ರಿ ಸಂತಸ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಗಡಿ ಶಾಸಕ ಎ. ಮಂಜುನಾಥ್ ಅವರು ಮಾತನಾಡಿ, ಈ ಯೋಜನೆಗೆ ರಾಮನಗರ ಜಿಲ್ಲೆಯ ತ್ಯಾಜ್ಯವನ್ನೂ ಪೂರೈಸಲು ಅವಕಾಶ ಕಲ್ಪಿಸುವಂತೆ ಹಾಗೂ ಬೆಂಗಳೂರು ನಗರದ ಸುತ್ತಲಿನ ತಾಲ್ಲೂಕುಗಳಿಗೆ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮುಖ್ಯಮಂತ್ರಿಯವರ ಸಲಹೆಗಾರ ಎಂ. ಲಕ್ಷ್ಮೀನಾರಾಯಣ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಇಂಧನ ಇಲಾಖೆ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್, ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತಾ, ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್, ಕೆಪಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಪೊನ್ನುರಾಜ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X