Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವಂತೆ...

ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವಂತೆ ಸರಕಾರಕ್ಕೆ ವಿಧಾನಪರಿಷತ್ ಸದಸ್ಯರ ಒಕ್ಕೊರಲ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ2 Dec 2020 8:08 PM IST
share
ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವಂತೆ ಸರಕಾರಕ್ಕೆ ವಿಧಾನಪರಿಷತ್ ಸದಸ್ಯರ ಒಕ್ಕೊರಲ ಆಗ್ರಹ

ಬೆಂಗಳೂರು, ಡಿ.2: ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯದಲ್ಲಿ ತಕ್ಷಣವೇ ಶಾಲಾರಂಭ ಮಾಡಬೇಕೆಂದು ವಿಧಾನಪರಿಷತ್ತಿನ ಶಿಕ್ಷಕ ಮತ್ತು ಪದವೀಧರ ಕ್ಷೇತ್ರದ ಸದಸ್ಯರು ರಾಜ್ಯ ಸರಕಾರಕ್ಕೆ ಒತ್ತಾಯಿಸಿದ್ದಾರೆ. 

ಬುಧವಾರ ನಗರದಲ್ಲಿನ ಸಮಗ್ರ ಶಿಕ್ಷಣ ಕಚೇರಿಯ ಸಭಾಂಗಣದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಜ್ವಲಂತ ಸಮಸ್ಯೆಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಶಿಕ್ಷಕ ಮತ್ತು ಪದವೀಧರ ಕ್ಷೇತ್ರದ ವಿಧಾನಪರಿಷತ್ ಸದಸ್ಯರು ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಯಿತು.

ಶಾಲೆಗಳು ಪ್ರಾರಂಭವಾಗದೇ ಇರುವುದರಿಂದ ಗ್ರಾಮೀಣ ಪ್ರದೇಶದ ಅದರಲ್ಲೂ ವಿಶೇಷವಾಗಿ ಸರಕಾರಿ ಶಾಲಾ ಮಕ್ಕಳಿಗೆ ಕಲಿಕೆಯ ನಿರಂತರತೆ ತಪ್ಪಿ ಹಲವಾರು ಸಮಸ್ಯೆಗಳಿಗೆ ಕಾರಣವಾಗಿದೆ. ಶಾಲೆಗಳನ್ನು ಅಂದರೆ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಮೊದಲ ಹಂತದಲ್ಲಿ ದ್ವಿತೀಯ ಪಿಯುಸಿ ಮತ್ತು ಎಸೆಸೆಲ್ಸಿ ತರಗತಿಗಳನ್ನು ಆರಂಭಿಸಬೇಕು. ಶಾಲೆಗಳನ್ನು ಆರಂಭಿಸುವುದರಿಂದ ಪ್ರಸ್ತುತ ಶಿಕ್ಷಣ ಇಲಾಖೆಯ ಮುಂದಿರುವ ಖಾಸಗಿ ಅನುದಾನ ರಹಿತ ಶಿಕ್ಷಕರ ಸಮಸ್ಯೆ ಸೇರಿದಂತೆ ಹಲವಾರು ಜ್ವಲಂತ ಸಮಸ್ಯೆಗಳಿಗೆ ಪರಿಹಾರ ದೊರೆತಂತಾಗುತ್ತದೆ ಎಂದು ವಿಧಾನಪರಿಷತ್ತಿನ ಸದಸ್ಯರು ಅಭಿಪ್ರಾಯಪಟ್ಟರು.

ವಿಶೇಷವಾಗಿ ಬಹುಕಾಲ ಮಕ್ಕಳು ಶಾಲೆಯಿಂದ ದೂರ ಉಳಿಯುವುದರಿಂದ ಮಕ್ಕಳ ಭವಿಷ್ಯದ ಮೇಲೆ ದೂರಗಾಮಿ ಪರಿಣಾಮಗಳು ಉಂಟಾಗುವುದರಿಂದ ಶಾಲೆಗಳನ್ನು ತಕ್ಷಣವೇ ಪ್ರಾರಂಭಿಸುವುದು ಉತ್ತಮ. ಬಹುಕಾಲ ಶಾಲೆಯಿಂದ ದೂರ ಉಳಿದರೆ ಮಕ್ಕಳಲ್ಲಿ ನಿರಾಸಕ್ತಿ ಮೂಡುತ್ತದೆ, ಈಗಾಗಲೇ ಖಿನ್ನತೆ ಆರಂಭಿಸಿದೆ, ಮುಂದೆ ಇದರಿಂದ ಅವರ ಕಲಿಕೆಯ ಮೇಲೆ ಪರಿಣಾಮವಾಗಿ ಇನ್ನೊಂದು ಸಮಸ್ಯೆ ಸೃಷ್ಟಿಯಾಗುತ್ತದೆ ಎಂದು ಸದಸ್ಯರು ಹೇಳಿದರು.

ಈಗಾಗಲೇ ಮಕ್ಕಳು ಕೂಲಿ ಕೆಲಸಕ್ಕೆ ಹೋಗುತ್ತಿದ್ದಾರೆ, ಕೆಲವರು ಬಾಲ್ಯವಿವಾಹಕ್ಕೆ ತುತ್ತಾಗಿದ್ದಾರೆ. ಇದು ಇನ್ನೂ ಹಲವಾರು ಸಾಮಾಜಿಕ ಸಮಸ್ಯೆಗಳಿಗೆ ಕಾರಣವಾಗುತ್ತದೆ. ನಾವು ಗ್ರಾಮಾಂತರ ಪ್ರದೇಶದಲ್ಲಿ ಪ್ರತಿದಿನವೂ ಎಲ್ಲ ಚಟುವಟಿಕೆಗಳು ಆರಂಭವಾಗಿರುವುದನ್ನು ನೋಡಿದ್ದೇವೆ. ಮಕ್ಕಳೂ ಗುಂಪುಗುಂಪಾಗಿ ಆಟವಾಡುತ್ತಿದ್ದಾರೆ. ಯಾವ ಸಮಸ್ಯೆಗಳೂ ಉದ್ಭವಿಸಿಲ್ಲ. ಅನ್ ಲಾಕ್ ಘೋಷಣೆಯಾಗಿ ಎಲ್ಲ ರೀತಿಯ ಚಟುವಟಿಕೆಗಳು ಆರಂಭವಾಗಿದ್ದು, ಶಾಲೆಗಳು ಮಾತ್ರವೇ ಆರಂಭವಾಗಿಲ್ಲ. ಶಾಲೆಗಳನ್ನು ಅದರಲ್ಲೂ 10ನೇ ಮತ್ತು ದ್ವಿತೀಯ ಪಿಯಸಿ ತರಗತಿಗಳನ್ನು ಆರಂಭಿಸಲು ಈ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಸದಸ್ಯರು ಒತ್ತಾಯಿಸಿದರು.

ಸುರಕ್ಷಿತ ಅಂತರ ಕಾಪಾಡಿಕೊಂಡು ಪಾಳಿ ಆಧಾರದಲ್ಲಿ ತರಗತಿಗಳನ್ನು ನಡೆಸಬೇಕು. ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಆದರೆ ನಾವು ದೃಶ್ಯ ಮಾಧ್ಯಮಗಳತ್ತ ಹೆಚ್ಚು ಗಮನ ಹರಿಸುವುದಕ್ಕಿಂತ ನಮ್ಮ ಮಕ್ಕಳ ಹಿತವನ್ನು ಗಮನಹರಿಸಬೇಕಿದೆ. ಮಾಧ್ಯಮಗಳು ಶಾಲೆ ಆರಂಭಿಸಿದರೆ ಒಂದು ಸಮಸ್ಯೆ ಹಿಡಿದು ಎಳೆದಾಡುತ್ತಾರೆ, ಶಾಲೆ ಆರಂಭಿಸದಿದ್ದರೆ ಇನ್ನೊಂದು ರೀತಿಯ ಸಮಸ್ಯೆಗಳುಂಟಾಗುತ್ತವೆ ಎಂದು ಜಗ್ಗಾಡುತ್ತಾರೆ. ಅವರ ಅಭಿಪ್ರಾಯಗಳನ್ನು ಎಷ್ಟು ದಿವಸ ಕೇಳಿಕೊಂಡಿರುವುದು ಎಂದು ಪ್ರಶ್ನಿಸಿದ ಸದಸ್ಯರು, ಮಾಧ್ಯಮಗಳ ವರದಿಯನ್ನು ಪಕ್ಕಕ್ಕಿಟ್ಟು ನಮ್ಮ ಮಕ್ಕಳ ಹಿತದೃಷ್ಟಿಯಿಂದ ನಾವು ಶಾಲೆಗಳನ್ನು ಆರಂಭಿಸುವುದು ಒಳ್ಳೆಯದು ಎಂದು ಅಭಿಪ್ರಾಯಪಟ್ಟರು.

ಎಸೆಸೆಲ್ಸಿ ಪರೀಕ್ಷೆ ನಡೆಸಿದಂತೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಇನ್ನೂ ಕಾಲಹರಣ ಮಾಡದೇ ಶಾಲೆಗಳನ್ನು ಆರಂಭಿಸುವುದು ಎಲ್ಲ ದೃಷ್ಟಿಯಿಂದಲೂ ಉತ್ತಮ. ತಮ್ಮೊಂದಿಗೆ ಮತ್ತು ಶಾಲೆ ಆರಂಭಿಸುವ ಸರಕಾರದ ನಿರ್ಧಾರದೊಂದಿಗೆ ನಾವೆಲ್ಲ ಇದ್ದೇವೆ.  ನೀವು ಶಾಲೆ ಆರಂಭಿಸಿ ಎಂದು ಎಲ್ಲ ಸದಸ್ಯರು ಶಿಕ್ಷಣ ಸಚಿವರಿಗೆ ಅಭಯ ನೀಡಿದರು.

10 ಮತ್ತು 12ನೇ ತರಗತಿಗಳನ್ನು ಶೀಘ್ರವೇ ಆರಂಭಿಸಬೇಕು. ವಿದ್ಯಾಗಮದಂತಹ ಕಾರ್ಯಕ್ರಮ ನಿಲ್ಲಿಸಿದ್ದು ಸರ್ವಥಾ ಸರಿಯಲ್ಲ. ಇದರಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗೆ ನಿಜಕ್ಕೂ ತುಂಬಾ ತೊಂದರೆಯಾಗಿದೆ. ಈ ವಿದ್ಯಾಗಮ ಕಾರ್ಯಕ್ರಮಕ್ಕೆ ಮರು ಚಾಲನೆ ನೀಡಬೇಕೆಂದು ಒತ್ತಾಯಿಸಿದ ಸದಸ್ಯರು, ಶಾಲಾರಂಭದ ನಂತರ ಉಳಿಕೆಯ ಅವಧಿಯನ್ನು ಗಮನದಲ್ಲಿಟ್ಟುಕೊಂಡು ಪಠ್ಯ ಕಡಿತ ಮಾಡಬೇಕೆಂದು ಸಲಹೆ ನೀಡಿದರು.

ಎಲ್ಲ ಸದಸ್ಯರ ಅಭಿಪ್ರಾಯಗಳನ್ನು ಆಲಿಸಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಸದಸ್ಯರು ಒಕ್ಕೊರಲಿನ ಅಭಿಪ್ರಾಯವನ್ನು ನಾನು ಗಮನಿಸಿದ್ದು, ಈ ಕುರಿತಂತೆ ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಅಭಿಪ್ರಾಯ ಪಡೆದು ಎಸೆಸೆಲ್ಸಿ ಮತ್ತು ದ್ವಿತೀಯ ಪಿಯು ತರಗತಿಗಳನ್ನು ಆರಂಭಿಸುವ ಕುರಿತಂತೆ ನಿರ್ಣಯಕ್ಕೆ ಬರಲಾಗುವುದು ಎಂದು ಹೇಳಿದರು.

ಕೋವಿಡ್ ನಂತರ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಗೂ ಕಲಿಕಾ ನಿರಂತರತೆಗೆ ಕೈಗೊಂಡ ಕ್ರಮಗಳನ್ನು ವಿವರಿಸಿದ ಸುರೇಶ್ ಕುಮಾರ್, ಶಾಲೆ ಆರಂಭಗೊಂಡ ನಂತರ ಪಿಯು ತರಗತಿಗಳ ಪಠ್ಯವನ್ನು ಎನ್.ಸಿ.ಇ.ಆರ್.ಟಿ ನಿಗದಿಪಡಿಸಿದ ಪಠ್ಯಕ್ರಮಗಳಂತೆ ಕಡಿತ ಮಾಡಲಾಗಿದೆ ಎಂದರು.

ಈಗಾಗಲೇ ಪ್ರಾರಂಭವಾಗಿರುವ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಎದುರಿಸಲಾಗುತ್ತಿರುವ ಕೆಲವು ಪ್ರಾಯೋಗಿಕ ಸಮಸ್ಯೆಗಳನ್ನು ಸರಿಪಡಿಸುವುದಲ್ಲದೇ ಕಡ್ಡಾಯ, ಹೆಚ್ಚುವರಿ ವರ್ಗಾವಣೆಯಾದ ಶಿಕ್ಷಕರಿಗೆ ಮೊದಲ ಆದ್ಯತೆ ನೀಡಲಾಗಿದೆ. ಈ ಬಾರಿ ವರ್ಗಾವಣೆ ಮಿತಿಯನ್ನು ಶೇ.15ಕ್ಕೆ ಹೆಚ್ಚಿಸಿರುವುದರಿಂದ ಬಹುಪಾಲು ಶಿಕ್ಷಕರಿಗೆ ವರ್ಗಾವಣೆ ಅವಕಾಶಗಳಿವೆ ಎಂದು ಅವರು ಹೇಳಿದರು.

ಸಿ.ಆರ್.ಪಿ ಮತ್ತು ಬಿ.ಆರ್.ಪಿ ಶಿಕ್ಷಕರಿಗೆ ವರ್ಗಾವಣಾ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗುವುದು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಕಡ್ಡಾಯ ವರ್ಗಾವಣಾ ವ್ಯಾಪ್ತಿಯಲ್ಲಿ ಬಂದ ಮುಖ್ಯೋಪಾಧ್ಯಾಯರಿಗೆ ಮತ್ತು ಪದವಿ ಪೂರ್ವ ಉಪನ್ಯಾಸಕರಿಗೂ ಈ ಬಾರಿ ಆದ್ಯತೆಯ ವರ್ಗಾವಣೆಗೆ ಅವಕಾಶ ನೀಡಲಾಗುವುದು ಎಂದು ಸುರೇಶ್ ಕುಮಾರ್ ಹೇಳಿದರು.

ಹೊಸದಾಗಿ ನೇಮಕಗೊಂಡ ಸೇವಾನಿರತ ಪದವಿ ಪೂರ್ವ ಶಿಕ್ಷಣ ಉಪನ್ಯಾಸಕ ಅಭ್ಯರ್ಥಿಗಳ ಪೈಕಿ ಕೆಲವು ಅಭ್ಯರ್ಥಿಗಳು ನಿರಪೇಕ್ಷಣಾ ಪ್ರಮಾಣ ಪತ್ರಗಳನ್ನ ನೀಡಬೇಕೆಂದು ಆಗ್ರಹ ವ್ಯಕ್ತವಾಗಿದ್ದು, ಕೂಡಲೇ ಈ ಕುರಿತು ಕ್ರಮ ವಹಿಸಬೇಕೆಂದು ಪಿಯು ಇಲಾಖೆ ನಿರ್ದೇಶಕರಿಗೆ ಸೂಚಿಸಿದ ಸುರೇಶ್ ಕುಮಾರ್, ಆರ್ಥಿಕ ಮಿತವ್ಯಯದ ಹಿನ್ನೆಲೆಯಲ್ಲಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ನೇಮಕಾತಿ ಸ್ಥಗಿತಗೊಂಡಿದ್ದು, ಈ ಸಮಸ್ಯೆಯನ್ನು ಬಗೆಹರಿಸಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ ನೀಡಿದ್ದೇನೆ ಎಂದರು.

ಸಭೆಯಲ್ಲಿ ವಿಧಾನಪರಿಷತ್ತಿನ ಸದಸ್ಯರಾದ ಬಸವರಾಜ ಹೊರಟ್ಟಿ, ಡಾ.ವೈ.ಎ.ನಾರಾಯಣಸ್ವಾಮಿ, ಶಶೀಲ್ ನಮೋಶಿ, ಸಂಕನೂರು, ಚಿದಾನಂದ ಎಸ್.ಗೌಡ, ಮರಿತಿಬ್ಬೇಗೌಡ, ಪುಟ್ಟಣ್ಣ, ಬೋಜೇಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ.ಅನ್ಬುಕುಮಾರ್, ಪಿಯು ನಿರ್ದೇಶಕಿ ಸ್ನೇಹಲ್, ಸಮಗ್ರ ಶಿಕ್ಷಣ- ಕರ್ನಾಟಕ ರಾಜ್ಯ ಯೋಜನಾಧಿಕಾರಿ ದೀಪಾಚೋಳನ್ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X