ಪ್ರವಾಸಿಗರಿಗೆ ಕೋವಿಡ್ ಬಗ್ಗೆ ಜಾಗೃತಿ ಮೂಡಿಸಲು ಸೂಚನೆ
ಉಡುಪಿ, ಡಿ.2: ಜಿಲ್ಲೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಅನುಮೋದಿತ ಹೋಟೆಲ್, ರೆಸಾರ್ಟ್ಸ್, ಹೋಂ ಸ್ಟೇ, ಯಾತ್ರಿ ನಿವಾಸ, ಟ್ರಾವೆಲ್ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗಳು ಮುಖಗವಚ ಧರಿಸಿಕೊಂಡು ಕೆಲಸ ನಿರ್ವಹಿಸಬೇಕು ಹಾಗೂ ಅಲ್ಲಿಗೆ ಬರುವ ಪ್ರವಾಸಿಗರಿಗೆ ಕೋವಿಡ್-19ರ ಬಗ್ಗೆ ಅರಿವು ಮೂಡಿಸಬೇಕು.
ವಿವಿಧ ಪ್ರವಾಸಿ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರವಾಸಿ ಮಿತ್ರರು, ಟೂರಿಸ್ಟ್ ಗೈಡ್ಗಳು ತಮ್ಮ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವಾಗ ಕಡ್ಡಾಯವಾಗಿ ಮುಖಗವಚ ಧರಿಸಬೇಕು ಹಾಗೂ ಅಲ್ಲಿ ಬರುವ ಪ್ರವಾಸಿಗರಿಗೆ ಕೋವಿಡ್-19ರ ಬಗ್ಗೆ ಮುಖಗವಚ ಧರಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು ಅಗತ್ಯ ಕ್ರಮ ವಹಿಸುವಂತೆ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಸೋಮಶೇಖರ್ ಬಿ. ಕಮರೂರಮನೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story