Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ನಿಮ್ಮ ಕಾಳಜಿಯ ಬಗ್ಗೆ ಸಂದೇಹಗಳು...

'ನಿಮ್ಮ ಕಾಳಜಿಯ ಬಗ್ಗೆ ಸಂದೇಹಗಳು ಹುಟ್ಟುತ್ತಿವೆ': ಇಂದಿರಾ ಕ್ಯಾಂಟೀನ್ ಮುಚ್ಚದಂತೆ ಸಿಎಂಗೆ ಸಿದ್ದರಾಮಯ್ಯ ಪತ್ರ

ವಾರ್ತಾಭಾರತಿವಾರ್ತಾಭಾರತಿ2 Dec 2020 8:17 PM IST
share
ನಿಮ್ಮ ಕಾಳಜಿಯ ಬಗ್ಗೆ ಸಂದೇಹಗಳು ಹುಟ್ಟುತ್ತಿವೆ: ಇಂದಿರಾ ಕ್ಯಾಂಟೀನ್ ಮುಚ್ಚದಂತೆ ಸಿಎಂಗೆ ಸಿದ್ದರಾಮಯ್ಯ ಪತ್ರ

ಬೆಂಗಳೂರು, ಡಿ.2: ದುಡಿಯುವ ಕಾರ್ಮಿಕರು, ಬಡವರ ಮುಂತಾದವರ ಹಸಿವನ್ನು ನೀಗಿಸಲು ಬಿಬಿಎಂಪಿ ಮತ್ತು ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್‍ಗಳನ್ನು ಪ್ರಾರಂಭಿಸಲಾಗಿತ್ತು. ಆದರೆ, ಬಿಜೆಪಿ ಸರಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ಮೇಲೆ ನಿರಂತರವಾಗಿ ಇಂದಿರಾ ಕ್ಯಾಂಟೀನ್‍ಗಳನ್ನು ವ್ಯವಸ್ಥಿತವಾಗಿ ಮುಚ್ಚಲು ಪ್ರಯತ್ನ ಮಾಡುತ್ತಿರುವಂತೆ ಕಾಣಿಸುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದಿರುವ ಅವರು, ಇಂದಿರಾ ಕ್ಯಾಂಟೀನ್‍ಗಳಿಗೆ ಬಿಡುಗಡೆ ಮಾಡಬೇಕಾದ ಹಣವನ್ನು ನಿಗದಿತವಾಗಿ ಬಿಡುಗಡೆ ಮಾಡದೆ ಸತಾಯಿಸಲಾಗುತ್ತಿದೆ. ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಕ್ಯಾಂಟೀನ್‍ಗಳಿಗೆ ಸುಮಾರು 28 ಕೋಟಿ ರೂ.ಗಳನ್ನು ಬಿಡುಗಡೆ ಮಾಡದೆ ಸುಮಾರು 6 ತಿಂಗಳಿನಿಂದ ಬಾಕಿ ಉಳಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

198 ಕ್ಯಾಂಟೀನ್‍ಗಳಿಗೆ ನೀರಿನ ಸಂಪರ್ಕ ಮತ್ತು ಸ್ಯಾನಿಟರಿ ಲೈನ್ ಅನ್ನು ಕೂಡ ಬೆಂಗಳೂರು ಜಲ ಮಂಡಳಿ ಕಡಿತಗೊಳಿಸಿದೆ. ಅಲ್ಲದೆ, 12 ಅಡುಗೆ ಮನೆಗಳಿಗೂ ನೀರಿನ ಸಂಪರ್ಕವನ್ನು ನಿಲ್ಲಿಸಲಾಗಿದೆ. ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಾಯಿಸಿ ರಾಜಕಾರಣ ಮಾಡಲು ಈ ಹಿಂದೆ ಪ್ರಯತ್ನಿಸಲಾಗಿತ್ತು. ಈ ರೀತಿಯ ಹಲವು ಹುನ್ನಾರಗಳನ್ನು ಮಾಡಿ ಕ್ಯಾಂಟೀನ್‍ಗಳನ್ನು ಮುಚ್ಚಲು ಪ್ರಯತ್ನ ಮಾಡುತ್ತಿರುವಂತೆ ಕಂಡು ಬರುತ್ತಿದೆ. ಬಿಜೆಪಿ ಸರಕಾರವು ಹಸಿದವರ, ಬಡವರ, ದೀನರ ಪರವಾಗಿ ಇಲ್ಲ ಎನ್ನುವುದಕ್ಕೆ ಈ ಎಲ್ಲವೂ ಉದಾಹರಣೆಗಳಾಗಿವೆ ಎಂದು ಸಿದ್ದರಾಮಯ್ಯ ದೂರಿದ್ದಾರೆ.

ಇತ್ತೀಚೆಗೆ ಸರಕಾರವು ಹಲವು ರೀತಿಯ ದುಂದುವೆಚ್ಚದ, ಅಗತ್ಯವಿಲ್ಲದ ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಕೋವಿಡ್ ಸಂಕಷ್ಟದ ಪರಿಸ್ಥಿತಿಯಲ್ಲಿ ಜನರು ದುಡಿಮೆ ಇಲ್ಲದೆ ಪರಿತಪಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಇಂದಿರಾ ಕ್ಯಾಂಟೀನ್‍ಗಳಲ್ಲಿ ಉಚಿತವಾಗಿ ಆಹಾರವನ್ನು ನೀಡಬೇಕೆಂದು ಈ ಹಿಂದೆ ಪತ್ರ ಬರೆದು ಒತ್ತಾಯಿಸಿದ್ದೆವು. ಇದಕ್ಕೆ ಹೆಚ್ಚೆಂದರೆ ವರ್ಷಕ್ಕೆ 200 ರಿಂದ 250 ಕೋಟಿ ರೂ.ಖರ್ಚು ಬರಬಹುದು. ಹಸಿದವರ ಹೊಟ್ಟೆ ತುಂಬಿಸಲು ಸರಕಾರ ಇಷ್ಟನ್ನೂ ಮಾಡಲು ಮೀನಾಮೇಷ ಎಣಿಸುತ್ತದೆ ಎಂದಾದರೆ ನಿಮ್ಮ ಕಾಳಜಿಯ ಕುರಿತಾಗಿ ಸಂದೇಹಗಳು ಹುಟ್ಟುತ್ತಿವೆ ಎಂದು ಅವರು ಟೀಕಿಸಿದ್ದಾರೆ.

ಯಾವುದೆ ಕಾರಣಕ್ಕೂ ಇಂದಿರಾ ಕ್ಯಾಂಟೀನ್‍ಗಳು ನಿಲ್ಲದ ಹಾಗೆ ನೋಡಿಕೊಂಡು ಹಸಿದವರ ಹಸಿವನ್ನು ನೀಗಿಸುವ ಕೆಲಸವನ್ನು ಮಾಡಬೇಕೆಂದು ಹಾಗೂ ಮುಖ್ಯಮಂತ್ರಿಗಳೆ ಖುದ್ದಾಗಿ ಆಸಕ್ತಿ ವಹಿಸಿ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X