Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಗಮ ಚುನಾವಣೆಗೆ ಆಯೋಗದ...

ಸುಗಮ ಚುನಾವಣೆಗೆ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸಿ : ಜಿಲ್ಲಾಧಿಕಾರಿ ಜಿ.ಜಗದೀಶ್

ವಾರ್ತಾಭಾರತಿವಾರ್ತಾಭಾರತಿ2 Dec 2020 9:18 PM IST
share
ಸುಗಮ ಚುನಾವಣೆಗೆ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸಿ : ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ, ಡಿ.2: ಜಿಲ್ಲೆಯಲ್ಲಿ ಡಿ.22 ಮತ್ತು 27ರಂದು ನಡೆಯುವ ಎರಡು ಹಂತದ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ ಸುಗಮವಾಗಿ ಮತ್ತು ಯಾವುದೇಲೋಪಗಳಿಲ್ಲದೇ ನಡೆಯಲು ಚುನಾವಣಾ ಆಯೋಗ ಸೂಚಿಸಿರುವ ಮಾರ್ಗಸೂಚಿಯಂತೆ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಎಲ್ಲಾ ಅಧಿಕಾರಿಗಳಿಗೆ ಸೂಚಿಸಿದರು.

ಬುಧವಾರ ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಡಿ.22ರಂದು ನಡೆಯುವ ಮೊದಲನೇ ಹಂತದಲ್ಲಿ ಉಡುಪಿ, ಹೆಬ್ರಿ, ಬೈಂದೂರು ಮತ್ತು ಬ್ರಹ್ಮಾವರ ವ್ಯಾಪ್ತಿಯ 67 ಗ್ರಾಪಂಗಳ 415 ಕ್ಷೇತ್ರಗಳ ಒಟ್ಟು 553 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು, ಇಲ್ಲಿ 3,77,308 ಮಂದಿ ಮತದಾರರು ಮತ ಚಲಾಯಿಸಲಿದ್ದಾರೆ ಎಂದರು.

ಡಿ.27ರಂದು ನಡೆಯುವ ಎರಡನೇ ಹಂತದ ಮತದಾನದಲ್ಲಿ ಕುಂದಾಪುರ, ಕಾರ್ಕಳ ಮತ್ತು ಕಾಪು ತಾಲೂಕು ವ್ಯಾಪ್ತಿಯ 87 ಗ್ರಾಪಂಗಳ 451 ಕ್ಷೇತ್ರಗಳ ಒಟ್ಟು 576 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು, 4,17,564 ಮಂದಿ ಮತದಾರರು ಮತ ಚಲಾಯಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು 154 ಗ್ರಾಪಂಗಳ 866 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, 3,82,528 ಪುರುಷ ಮತ್ತು 4,12,335 ಮಹಿಳಾ ಮತ್ತು 9 ಇತರೆ ಮತದಾರರು ಸೇರಿದಂತೆ 7,94,872 ಮಂದಿ ಮತದಾರರು ಚುನಾವಣೆ ಯಲ್ಲಿ ಭಾಗವಹಿಸಲಿದ್ದಾರೆ ಎಂದರು.

ಎಲ್ಲಾ ಮತಗಟ್ಟೆಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳು ಇರುವ ಬಗ್ಗೆ ತಹಶೀಲ್ದಾರ್‌ಗಳು ಪರಿಶೀಲಿಸಿ ವರದಿ ನೀಡಿ. ಅಗತ್ಯ ದುರಸ್ತಿ ಕಾರ್ಯಗಳನ್ನು ಕೈಗೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಕೋವಿಡ್ ಸುರಕ್ಷಾ ಕ್ರಮಗಳೊಂದಿಗೆ ಚುನಾವಣೆಯನ್ನು ನಡೆಸು ವಂತೆ ತಿಳಿಸಿದರು. ಚುನಾವಣಾ ಕಾರ್ಯಕ್ಕಾಗಿ 155 ಚುನಾವಣಾಧಿಕಾರಿಗಳು ಮತ್ತು 166 ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಿ ಸಿದ್ದು, ಇತರೆ ಅಗತ್ಯವಿರುವ ಸಿಬ್ಬಂದಿಗಳ ಕುರಿತಂತೆ ಸಮಗ್ರ ಮಾಹಿತಿ ನೀಡುವಂತೆ ಸೂಚಿಸಿದರು.

ಗ್ರಾಪಂ ವ್ಯಾಪ್ತಿಯಲ್ಲಿ ನಡೆಯುವ ಅನಿರೀಕ್ಷಿತ ಸಮಾರಂಭಗಳ ಕುರಿತು ಪರಿಶೀಲಿಸಿ, ಸಮಾರಂಭಗಳಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದಲ್ಲಿ ಕೂಡಲೇ ಸಂಬಂಧಪಟ್ಟವರ ವಿರುದ್ದ ಪ್ರಕರಣ ದಾಖಲಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಮದ್ಯ ಮಾರಾಟದ ಪ್ರಮಾಣ ಕುರಿತಂತೆ ಪ್ರತಿದಿನ ಪರಿಶೀಲಿಸುವಂತೆ ಅಬಕಾರಿ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚನೆ ನೀಡಿದರು.

ಗ್ರಾಪಂ ಚುನಾವಣೆಗಳು ಪಕ್ಷ ರಹಿತವಾಗಿ ನಡೆಯಲಿದ್ದು, ಗ್ರಾಮಗಳಲ್ಲಿ ಯಾವುದೇ ರಾಜಕೀಯ ಪಕ್ಷ ಅಥವಾ ವ್ಯಕ್ತಿಗಳ ಪ್ರಚಾರ ಫಲಕ, ಕಟೌಟ್ ಗಳು ಇದ್ದಲ್ಲಿ ಸಂಬಂಧಪಟ್ಟ ಗ್ರಾಪಂ ವತಿಯಿಂದ ತಕ್ಷಣವೇ ತೆಗೆಸಬೇಕು. ತಪ್ಪಿದಲ್ಲಿ ಆಯಾ ಗ್ರಾಪಂಗಳ ಪಿಡಿಓಗಳ ಮೇಲೆ ಕ್ರಮ ಕೈಗೊಳ್ಳುವಂತೆ ಜಿಪಂ ಸಿಇಓಗೆ ಡಿಸಿ ತಿಳಿಸಿದರು.

ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ರಾಜಕೀಯ ಪಕ್ಷ ಅಥವಾ ವ್ಯಕ್ತಿಯ ಬೆಂಬಲಿಗ ಎಂದು ಜಾಹೀರಾತು ನೀಡುವುದು ನೀತಿಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಲಿದ್ದು, ಅಂತಹ ವ್ಯಕ್ತಿಗಳ ವಿರುದ್ದ ಪ್ರಕರಣ ದಾಖಲಿಸುವಂತೆ ತಹಶೀಲ್ದಾರ್‌ಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.

 ಜಿಲ್ಲೆಯಲ್ಲಿರುವ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಿ ಅಲ್ಲಿಗೆ ಅಗತ್ಯವಿರುವ ಪೊಲೀಸ್ ಸಿಬ್ಬಂದಿ ನೇಮಕ ಮಾಡುವ ಕುರಿತಂತೆ ವಿವರವಾದ ಬಂದೋಬಸ್ತ್ ಪ್ಲಾನ್ ಸಲ್ಲಿಸಿ. ಗ್ರಾಮಗಳಲ್ಲಿ ಯಾವುದೇ ಗಲಾಟೆ, ಘರ್ಷಣೆಗಳು ನಡೆಯದಂತೆ ಎಚ್ಚರವಹಿಸಿ. ನೀತಿ ಸಂಹಿತೆ ಉಲ್ಲಂಘಿಸುವವರ ವಿರುದ್ದ ಪ್ರಕರಣ ದಾಖಲಿಸಿ ಎಂದು ಪೊಲೀಸ್ ಇಲಾಖೆಗೆ ಡಿಸಿ ಸೂಚನೆ ನೀಡಿದರು.

ಚುನಾವಣಾ ಕಾರ್ಯಕ್ಕೆ ಅಗತ್ಯವಿರುವ ವಾಹನಗಳನ್ನು ಒದಗಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಸೂಚಿಸಿದ ಜಿಲ್ಲಾಧಿಕಾರಿ, ನೀತಿ ಸಂಹಿತೆಯ ವಿವರಗಳನ್ನು ಎಲ್ಲಾ ಅಧಿಕಾರಿಗಳು ಅರ್ಥೈಸಿಕೊಂಡು ಅದರಂತೆ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಜಿಪಂ ಸಿಇಓ ಡಾ.ನವೀನ್ ಭಟ್, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X