Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಪತ್ತು ನಿರ್ವಹಣೆಗೆ ಸದಾ...

ವಿಪತ್ತು ನಿರ್ವಹಣೆಗೆ ಸದಾ ಸನ್ನದ್ಧವಾಗಿರಿ: ಸೆಂಥಿಲ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ4 Dec 2020 7:20 PM IST
share
ವಿಪತ್ತು ನಿರ್ವಹಣೆಗೆ ಸದಾ ಸನ್ನದ್ಧವಾಗಿರಿ: ಸೆಂಥಿಲ್ ಕುಮಾರ್

ಉಡುಪಿ, ಡಿ. 4: ಜಗತ್ತಿನಲ್ಲಿ ಹವಾಮಾನ ವೈಪರೀತ್ಯ ಮತ್ತು ಜಾಗತಿಕ ತಾಪಮಾನ ಏರಿಕೆಯಿಂದ ಹೆಚ್ಚಿನ ಸಂಖ್ಯೆಯ ಪ್ರಾಕೃತಿಕ ವಿಕೋಪಗಳು ಸಂಭವಿಸುತ್ತಿದ್ದು, ಕರಾವಳಿ ಪ್ರದೇಶದಲ್ಲಿ ವಿಕೋಪಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರಲಿವೆ. ಆದುದರಿಂದ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳೊಂದಿಗೆ ವಿಕೋಪ ಪರಿಸ್ಥಿತಿ ಎದುರಿಸಲು ಸದಾ ಸನ್ನದ್ಧವಾಗಿರಬೇಕು ಎಂದು 10ನೇ ಎನ್‌ಡಿಆರ್‌ಎಫ್ ತಂಡದ ಸಹಾಯಕ ಕಮಾಂಡೆಂಟ್ ಸೆಂಥಿಲ್ ಕುಮಾರ್ ಹೇಳಿದ್ದಾರೆ.

ಶುಕ್ರವಾರ ಮಣಿಪಾಲದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಉಡುಪಿ ಜಿಲ್ಲೆಯಲ್ಲಿ ಎನ್‌ಡಿಆರ್‌ಎಫ್ ತಂಡದಿಂದ ನಡೆಯುವ ಅಣಕು ಪ್ರದರ್ಶನ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿಅವರು ಮಾತನಾಡಿದರು.

ಜಿಲ್ಲೆಯಲ್ಲಿ ಈ ಹಿಂದೆ ಪ್ರಾಕೃತಿಕ ವಿಕೋಪ ಸಂದರ್ದಲ್ಲಿ ಸಂಕಷ್ಟಕ್ಕೆ ಸಿಲುಕಿದ ಪ್ರದೇಶಗಳನ್ನು ಹಾಗೂ ತಗ್ಗು ಪ್ರದೇಶಗಳನ್ನು ಪಟ್ಟಿ ಮಾಡಿಟ್ಟು ಕೊಂಡು, ಈ ಪ್ರದೇಶಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿರಬೇಕು. ಕೇಂದ್ರ ಮತ್ತು ರಾಜ್ಯ ವಿಪತ್ತು ಪ್ರಾಧಿಕಾರ ದಿಂದ ವಿಕೋಪದ ಬಗ್ಗೆ ಮಾಹಿತಿ ಬಂದ ಕೂಡಲೇ, ಜನ ಮತ್ತು ಜಾನುವಾರು ಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು. ಇದಕ್ಕಾಗಿ ಸೂಕ್ತ ಪ್ರದೇಶವನ್ನು ಗುರುತಿಸಿಕೊಂಡಿರಬೇಕು ಎಂದು ಸೆಂಥಿಲ್‌ಕುಮಾರ್ ತಿಳಿಸಿದರು.

ಪ್ರಸ್ತುತ ತಂತ್ರಜ್ಞಾನ ಸಾಕಷ್ಟು ಮುಂದುವರೆದಿರುವುದರಿಂದ ಸುನಾಮಿ, ಚಂಡಮಾರುತದಂತಹ ವಿಕೋಪಗಳನ್ನು ಮುಂಚಿತವಾಗಿ ಗುರುತಿ ಸಲು ಸಾಧ್ಯ ವಿದೆ. ಇದರಿಂದ ನಾಗರಿಕರ ಜೀವ ಉಳಿಸಲು ಸಾಧ್ಯವಾಗಿದೆ. ರಕ್ಷಣಾ ಕಾರ್ಯದ ಸಂದರ್ಭದಲ್ಲಿ ಮಕ್ಕಳು, ಅಶಕ್ತರು ಮತ್ತು ಹಿರಿಯ ನಾಗರಿಕರ ರಕ್ಷಣೆಗೆ ಆದ್ಯತೆ ನೀಡಬೇಕು ಎಂದರು.

ಎನ್‌ಡಿಆರ್‌ಎಫ್ ಮೂಲಕ ದೇಶದಲ್ಲಿ ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಸಂಕಷ್ಟಕ್ಕೀಡಾಗುವ ಜಿಲ್ಲೆಗಳನ್ನು ಗುರುತಿಸಲಾಗಿದ್ದು, ಈ ಎಲ್ಲಾ ಜಿಲ್ಲೆಗಳಲ್ಲಿ 3 ವರ್ಷಗಳ ಒಳಗೆ ಅಣಕು ಕಾರ್ಯಾಚರಣೆ ಆಯೋಜಿಸುವ ಮೂಲಕ ವಿಕೋಪ ಸಂದರ್ಭದಲ್ಲಿ ಕಾರ್ಯನಿರ್ವಹಿಸುವ ವಿಧಾನಗಳ ಕುರಿತು ಅರಿವು ಮೂಡಿಸಲಾಗುತ್ತದೆ. ಯಾವುದೇ ಅಗತ್ಯ ತರಬೇತಿ ಇಲ್ಲದಿದ್ದರೂ ಸಾಮಾನ್ಯ ವಿಧಾನಗಳ ಮೂಲಕ ಸಾರ್ವಜನಿಕರ ರಕ್ಷಣಾ ಕಾರ್ಯಚರಣೆ ಮತ್ತು ವಿಶೇಷ ರಕ್ಷಣಾ ಕಾರ್ಯಚರಣೆಯ ವಿಧಾನಗಳ ಮೂಲಕ ಸ್ಥಳೀಯ ಜಿಲ್ಲಾಡಳಿತದ ಸಿಬ್ಬಂದಿಗಳಿಗೆ ತರಬೇತಿ ನೀಡಲಾಗು ತ್ತದೆ ಎಂದು ಸೆಂಥಿಲ್ ವಿವರಿಸಿದರು.

ಉಡುಪಿ ಜಿಲ್ಲೆಯಲ್ಲಿ ಆಗಸ್ಟ್ ಮತ್ತು ಸೆಪ್ಟಂಬರ್ ತಿಂಗಳಲ್ಲಿ ಕಂಡುಬಂದ ಅನಿರೀಕ್ಷಿತ ಪ್ರಾಕೃತಿಕ ವಿಕೋಪ ಸಂದರ್ದಲ್ಲಿ ಜಿಲ್ಲಾಡಳಿತ ಮತ್ತು ಸಾರ್ವಜನಿಕರ ಸಹಕಾರದಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದ್ದು, ಯಾವುದೇ ಜೀವಹಾನಿಗೆ ಅವಕಾಶ ನೀಡಿಲ್ಲ. ವಿಕೋಪ ಸಂದರ್ಭ ದಲ್ಲಿ ಕಾರ್ಯಾಚರಣೆ ನಡೆಸಲು ವಿಶೇಷ ತರಬೇತಿ ಅಗತ್ಯವಿದ್ದು, ಎನ್‌ಡಿಆರ್‌ಎಫ್ ತಂಡ ನೀಡುವ ತರಬೇತಿಯಲ್ಲಿ ಜಿಲ್ಲೆಯ ಪೊಲೀಸ್, ಅಗ್ನಿಶಾಮಕ ಮತ್ತು ಗೃಹ ರಕ್ಷಕರು ಸೇರಿದಂತೆ ವಿವಿಧ ಇಲಾಖೆಗಳು ಭಾಗವಹಿಸಿ ಸೂಕ್ತ ರಕ್ಷಣಾ ವಿಧಾನಗಳನ್ನು ರೂಡಿಸಿಕೊಳ್ಳಬೇಕು. ಅಲ್ಲದೇ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದ ಮೂಲಕ ವಿಕೋಪ ಸಂದರ್ಭದಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಸಭೆಯ ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ಉಪ ವಿಬಾಗಾಧಿಕಾರಿ ರಾಜು ಹೇಳಿದರು.

ಈ ವರ್ಷ ಉಡುಪಿ ಜಿಲ್ಲೆಯಲ್ಲಿ ಡಿ.1ರವರೆಗೆ 4519 ಮಿ.ಮಿ ವಾಡಿಕೆ ಮಳೆ ಆಗಬೇಕಿದ್ದು, 5140 ಮಿ.ಮಿ ಮಳೆ ಆಗಿ ಶೇ.14ರಷ್ಟು ಹೆಚ್ಚುವರಿ ಮಳೆ ಸುರಿದಿದೆ. ಈ ವರ್ಷ ಸಂಭವಿಸಿದ ಪ್ರಾಕೃತಿಕ ವಿಕೋಪದಲ್ಲಿ 77 ಗ್ರಾಮಗಳ 827 ಕುಟುಂಬದ 2874 ಮಂದಿಯನ್ನು ರಕ್ಷಿಸಿದ್ದು, 31 ಕಾಳಜಿ ಕೇಂದ್ರಗಳನ್ನು ತರೆಯಲಾಗಿತ್ತು. ಒಟ್ಟು 4518 ಹಾನಿ ಪ್ರಕರಣಗಳಲ್ಲಿ 11.64 ಕೋಟಿ ರೂ. ಅಂದಾಜು ನಷ್ಠ ಸಂವಿಸಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತ ರವಿ ಓಜನಹಳ್ಳಿ ಮಾಹಿತಿ ನೀಡಿದರು.

ಡಿ.5ರಂದು ಬೆಳಗ್ಗೆ 8:30ರಿಂದ 9:30ರವರೆಗೆ ಉದ್ಯಾವರ ನದಿ ತೀರದಲ್ಲಿ ಎನ್‌ಡಿಆರ್‌ಎಫ್ ಮೂಲಕ ಅಣಕು ಕಾರ್ಯಚರಣೆ ನಡೆಯಲಿದೆ. ಸಭೆಯಲ್ಲಿ ಪೊಲೀಸ್, ಅಗ್ನಿಶಾಮಕ ಮತ್ತು ಗೃಹರಕ್ಷಕ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X