Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಿರಾಶ್ರಿತರಿಗೆ ಚಿಕಿತ್ಸೆ, ಆಶ್ರಯ ನೀಡಿ:...

ನಿರಾಶ್ರಿತರಿಗೆ ಚಿಕಿತ್ಸೆ, ಆಶ್ರಯ ನೀಡಿ: ಡಿಸಿ ರಾಜೇಂದ್ರ

ವಾರ್ತಾಭಾರತಿವಾರ್ತಾಭಾರತಿ4 Dec 2020 8:57 PM IST
share
ನಿರಾಶ್ರಿತರಿಗೆ ಚಿಕಿತ್ಸೆ, ಆಶ್ರಯ ನೀಡಿ: ಡಿಸಿ ರಾಜೇಂದ್ರ

ಮಂಗಳೂರು, ಡಿ.4: ನಗರದಲ್ಲಿರುವ ನಿರ್ಗತಿಕ ಕೇಂದ್ರಗಳನ್ನು ಗುರುತಿಸಿ ನಿರಾಶ್ರಿತರಿಗೆ ಸೂಕ್ತ ಚಿಕಿತ್ಸೆ ಹಾಗೂ ಆಶ್ರಯ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ‘ನಗರ ವ್ಯಾಪ್ತಿಯ ನಿರಾಶ್ರಿತರಲ್ಲಿ ಮಲೇರಿಯಾ ಪ್ರಕರಣಗಳ ವರದಿ ಹಾಗೂ ಅವರಿಗೆ ಪರ್ಯಾಯ ವ್ಯವಸ್ಥೆ ಮಾಡುವ’ ಕುರಿತ ಸಭೆ ಮತ್ತು ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.

ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ, ಆರೋಗ್ಯ ಇಲಾಖೆಯ ಅಧಿಕಾರಿ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಜೊತೆಗೆ ಸಂಬಂಧ ಪಟ್ಟ ಅಧಿಕಾರಿಗಳ ತಂಡ ರಚನೆ ಮಾಡಿ, ಪ್ರತಿದಿನ ಒಂದೊಂದು ವಾರ್ಡ್‌ನಂತೆ ನಿರಾಶ್ರಿತರನ್ನು ಗುರುತಿಸಿ ವಾಹನದ ಮೂಲಕ ನಿರ್ಗತಿಕ ಕೇಂದ್ರಗಳಿಗೆ ತಲುಪಿಸಿ ಆಶ್ರಯ ನೀಡಬೇಕು. ರೋಗದ ಲಕ್ಷಣ ಕಂಡುಬಂದರೆ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಸೂಚಿಸಿದರು.

ಅಂಗಡಿಗಳ ಸುತ್ತ ಮುತ್ತಲಿರುವ ನಿರುಪಯುಕ್ತ ಸಾಮಗ್ರಿಗಳಿಂದ ಸೊಳ್ಳೆ ಉತ್ಪತ್ತಿಯಾಗುತ್ತಿರುವುದು ಗಮನಕ್ಕೆ ಬಂದರೆ ದಾಖಲೆ ಸಹಿತ ವರದಿ ನೀಡಿ ಅಂತಹ ಅಂಗಡಿಗಳ ಟ್ರೇಡ್ ಲೈಸನ್ಸ್ ರದ್ದುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶಿಸಿದರು.

ಪಿಂಚಣಿ ಪಾವತಿ ಪರಿಶೀಲನೆ: ಜಿಲ್ಲೆಯ ಎಲ್ಲ ತಹಶೀಲ್ದಾರರು ಎಂಡೋಸಲ್ಫಾನ್ ಸಂತ್ರಸ್ತರಿಗೆ ಪ್ರತೀ ಮಾಹೆ ಪಿಂಚಣಿ ಪಾವತಿಯಾಗುತ್ತಿದೆಯೇ ಎಂಬುವುದನ್ನು ಪರಿಶೀಲಿಸಬೇಕು. ಬಾಕಿ ಇದ್ದರೆ ಅಂತವರ ಪಟ್ಟಿ ಮಾಡಿ ವರದಿ ನೀಡಬೇಕು. ಜಿಲ್ಲೆಯ 6 ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ‌ನಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ವಿಶೇಷ ತಜ್ಞ ವೈದ್ಯರ ಶಿಬಿರವನ್ನು ಮುಂದಿನ ತಿಂಗಳಿನಿಂದ ಪ್ರಾರಂಭಿಸಿ ಸಂತ್ರಸ್ತರಿಗೆ ಚಿಕಿತ್ಸೆ ನೀಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಹೇಳಿದರು.

ಎಂಡೋಸಂತ್ರಸ್ತರು ಕೌಶಲ್ಯ ಅಭಿವೃದ್ಧಿ ತರಬೇತಿ ಕೇಂದ್ರದಲ್ಲಿ ತಯಾರಿಸುವ ಪೇಪರ್ ಕವರ್ ಸೇರಿದಂತೆ ವಿವಿಧ ಕರಕುಶಲ ವಸ್ತುಗಳನ್ನು ಸಂಗ್ರಹಿಸಿ, ಆ ವಸ್ತುಗಳನ್ನು ಕಚೇರಿ ಕೆಲಸಗಳಿಗೆ ಉಪಯೋಗಿಸಿ ಕೌಶಲ್ಯವನ್ನು ಪ್ರೋತ್ಸಾಹಿಸಬೇಕು ಎಂದು ಹೇಳಿದರು.

ಡಿಎಚ್‌ಒ ರಾಮಚಂದ್ರ ಬಾಯರಿ ಮಾತನಾಡಿ, ಎಂಡೋಸಲ್ಫಾನ್ ಸಂತ್ರಸ್ತರಿಗೆ ಈಗಾಗಲೇ ಗುರುತಿನ ಚೀಟಿ, ಪಾಲನಾ ಕೇಂದ್ರದ ಸೇವೆ (ಡೇ ಕೇರ್ ಸೆಂಟರ್), ವಿಶೇಷ ತಜ್ಞ ವೈದ್ಯರ ಶಿಬಿರದ ಸೇವೆ, ಸ್ಪೆಷಲಿಸ್ಟ್, ಸೂಪರ್ ಸ್ಪೆಷಲಿಸ್ಟ್ ಆಸ್ಪತ್ರೆಗಳಲ್ಲಿ ಶುಲ್ಕರಹಿತ ಚಿಕಿತ್ಸೆ, ಔಷಧಿ ವಿತರಣೆ, ಉಚಿತ ಬಸ್‌ಪಾಸ್, ಸಂಚಾರ ಆರೋಗ್ಯ ಘಟಕದ ಸೇವೆ, ಫಿಸಿಯೋಥೆರಪಿ ಘಟಕದ ಸೇವೆ, ಕೌಶಲ್ಯ ಅಭಿವೃದ್ಧಿ ತರಬೇತಿ ಕೇಂದ್ರದ ಸೇವೆ ಗಳನ್ನು ಒದಗಿಸಲಾಗುತ್ತಿದೆ ಎಂದರು.

ಪ್ರಸ್ತುತ ದಿನಗಳಲ್ಲಿ ಕೊವೀಡ್-19 ನಿಮಿತ್ತ ಸಂತ್ರಸ್ತ ಮಕ್ಕಳು ಕೇಂದ್ರಕ್ಕೆ ಬರಲು ಅವಕಾಶವಿಲ್ಲದೇ ಇರುವುದರಿಂದ ಕೇಂದ್ರದ ಸಿಬ್ಬಂದಿ ಮೂಲಕ ಮನೆ ಭೇಟಿ ಮಾಡಿ ಸೇವೆಗಳನ್ನು ನೀಡುತ್ತಿದ್ದಾರೆ ಎಂದು ಹೇಳಿದರು.

ಸಭೆಯಲ್ಲಿ ಮಲೇರಿಯಾ ನಿಯಂತ್ರಣಾಧಿಕಾರಿ ನವೀನ್ ಚಂದ್ರ ಕುಲಾಲ್, ಸಾಮಾಜಿಕ ಭದ್ರತೆ ಸಹಾಯಕ ನಿರ್ದೇಶಕ ಎ.ಡಿ. ಬೋಪಯ್ಯ, ತಾಲೂಕು ವೈದ್ಯಾಧಿಕಾರಿಗಳು, ಸಮಾಜ ಕಲ್ಯಾಣ ಅಧಿಕಾರಿಗಳು, ತಹಶೀಲ್ದಾರರು ಹಾಗು ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X