Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಸುಟ್ಟ ಗಾಯಗಳೊಂದಿಗೆ...

ಚಿಕ್ಕಮಗಳೂರು: ಸುಟ್ಟ ಗಾಯಗಳೊಂದಿಗೆ ಪತ್ತೆಯಾಗಿದ್ದ ವಿವಾಹಿತ ಮಹಿಳೆ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ4 Dec 2020 10:05 PM IST
share
ಚಿಕ್ಕಮಗಳೂರು: ಸುಟ್ಟ ಗಾಯಗಳೊಂದಿಗೆ ಪತ್ತೆಯಾಗಿದ್ದ ವಿವಾಹಿತ ಮಹಿಳೆ ಮೃತ್ಯು

ಚಿಕ್ಕಮಗಳೂರು, ಡಿ.4: ವಿವಾಹಿತ ಮಹಿಳೆಯೋರ್ವಳನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ ಯುವಕನೋರ್ವ ಮಹಿಳೆಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾನೆಂದು ಮಹಿಳೆಯ ಪೋಷಕರು ಮೂಡಿಗೆರೆ ಪೊಲೀಸರಿಗೆ ದೂರು ನೀಡಿರುವ ಮಧ್ಯೆ ಮಹಿಳೆಯೊಂದಿಗೆ ಸಲುಗೆಯಿಂದಿದ್ದ ಯುವಕ ಸುಟ್ಟ ಗಾಯಗಳೊಂದಿಗೆ ಆಸ್ಪತ್ರೆ ಸೇರಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಳಗುಳ ಗ್ರಾಮದಲ್ಲಿ ವರದಿಯಾಗಿದೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪಟ್ಟಣ ಸಮೀಪದ ಬಿಳುಗುಳ ನಿವಾಸಿ 42 ವರ್ಷದ ಸವಿತಾಳನ್ನು ಕೊಪ್ಪ ತಾಲೂಕಿನ ಗ್ರಾಮವೊಂದಕ್ಕೆ ವಿವಾಹ ಮಾಡಿಕೊಡಲಾಗಿದ್ದು, ಗಂಡ ಹೆಂಡತಿ ನಡುವಿನ ಮನಸ್ತಾಪದಿಂದಾಗಿ ಪತ್ನಿ ಸವಿತಾ ಇತ್ತೀಚೆಗೆ ಬಿಳಗುಳದ ತನ್ನ ತವರು ಮನೆಗೆ ಹಿಂದಿರುಗಿದ್ದರು. ಈ ವೇಳೆ ಕೊಲ್ಲಿಬೈಲ್ ನಿವಾಸಿ ನಂದೀಶ ಎಂಬ 28 ವರ್ಷದ ಯುವಕ ಸವಿತಾಳಿಗೆ ಪರಿಚಯವಾಗಿದ್ದ. 

ಸವಿತಾ ಬಿಳಗುಳ ಸಮೀಪದ ಹೋಮ್ ಸ್ಟೇ ಒಂದರಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದು, ನಂದೀಶ್ ಸಮೀಪದ ಕಾಫಿ ಎಸ್ಟೇಟ್‍ನಲ್ಲಿ ರೈಟರ್ ಆಗಿ ಕೆಲಸ ಮಾಡುತ್ತಿದ್ದ. ಇತ್ತೀಚೆಗೆ ಅವರಿಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿದ್ದು, ಸವಿತಾ ಪೆಟ್ರೋಲ್ ಸುರಿದುಕೊಂಡು ಸಾಯುತ್ತೇನೆ ಎಂದು ಬೆದರಿಕೆ ಹಾಕಿದ್ದಕ್ಕೆ ಸಾಯಿ ನೋಡೋಣ ಎಂದು ನಂದೀಶ್ ಉತ್ತರಿಸಿದ್ದ ಎಂದು ತಿಳಿದು ಬಂದಿದೆ.

ಕಳೆದ ರವಿವಾರ ನಂದೀಶ್ ಕೆಲಸ ನಿರ್ವಹಿಸುತ್ತಿದ್ದ ಎಸ್ಟೇಟ್ ಸಮೀಪ ಸವಿತಾ ಬಹುತೇಕ ಸುಟ್ಟು ಗಾಯಗಳೊಂದಿಗೆ ಗಂಭೀರ ಪರಿಸ್ಥಿತಿಯಲ್ಲಿ ಸಿಕ್ಕಿದ್ದು, ಪೋಷಕರು ತಕ್ಷಣ ಆಕೆಯನ್ನು ಮಂಗಳೂರು ನಗರದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸವಿತಾ ಶುಕ್ರವಾರ ಮೃತಪಟ್ಟಿದ್ದಾಳೆಂದು ತಿಳಿದು ಬಂದಿದೆ.

ಘಟನೆಯಲ್ಲಿ ಸವಿತಾಳೇ ಬೆಂಕಿ ಹಂಚಿಕೊಂಡರಾ ಅಥವಾ ನಂದೀಶನೇ ಬೆಂಕಿ ಹಚ್ಚಿದನಾ ಎಂಬುದು ತಿಳಿದು ಬಂದಿಲ್ಲ. ಆದರೆ ಸಾಯುವ ಮುನ್ನ ಪೆಟ್ರೋಲ್ ಸುರಿದುಕೊಂಡು ಸಾಯುತ್ತೇನೆ ಎಂದು ಸವಿತಾ ಮತ್ತು ನಂದೀಶ್ ನಡುವೆ ನಡೆದ ಮೊಬೈಲ್ ಸಂಭಾಷಣೆ ಪೊಲೀಸರಿಗೆ ಸಿಕ್ಕಿದೆ ಎನ್ನಲಾಗಿದೆ.

ಘಟನೆಯಲ್ಲಿ ನಂದೀಶನ ಎರಡು ಕೈಗಳು ಸುಟ್ಟು ಹೋಗಿದ್ದು, ಸವಿತಾ ಪೆಟ್ರೋಲ್ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡರಾ? ಅಥವಾ ನಂದೀಶನೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನಾ, ಸವಿತಾ ರಕ್ಷಣೆಗೆ ಮುಂದಾದಾಗ ನಂದೀಶ್ ಕೈ ಸುಟ್ಟು ಹೋಗಿದೆಯೋ ಎಂಬುದು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.

ಈ ನಡುವೆ ಸವಿತಾ ಕುಟುಂಬದವರು ನಂದೀಶನೇ ಕೊಲೆ ಮಾಡಿದ್ದಾನೆಂದು ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸದ್ಯ ಎರಡು ಕೈಗಳನ್ನು ಸುಟ್ಟುಕೊಂಡು ಆಸ್ಪತ್ರೆ ಸೇರಿರುವ ನಂದೀಶ ಗುಣಮುಖವಾಗುವವರೆಗೂ ಪೊಲೀಸರು ಘಟನೆಯ ಬಗ್ಗೆ ತನಿಖೆ ನಡೆಸಲು ಕಾಯಬೇಕಾಗಿದ್ದು, ನಂತರ ಸವಿತಾ ಸಾವಿನ ರಹಸ್ಯ ಹೊರಬೀಳಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X