ಬೆಂಗಳೂರು ಕೃಷಿ ವಿವಿಯಲ್ಲಿ ಪದವೀಧರರಾಗಿ ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ
ಬೆಂಗಳೂರು, ಡಿ.5: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದಲ್ಲಿ ವಿವಿಧ ಕೋರ್ಸ್‍ಗಳಲ್ಲಿ ಪದವಿ ಪಡೆದು 5 ವರ್ಷ ಪೂರೈಸಿದ ಪದವೀಧರರಿಂದ ನೋಂದಾಯಿತ ಪದವೀಧರರಾಗಿ ನೋಂದಣಿ ಮಾಡಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಕೃಷಿ ವಿಶ್ವವಿದ್ಯಾನಿಲಯದ ವೆಬ್‍ಸೈಟ್‍ನಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಗಳ ಜೊತೆಗೆ 500ರೂ.ಗಳ ಡಿ.ಡಿ.ಯನ್ನು ಹಣಕಾಸು ನಿಯಂತ್ರಣಾಧಿಕಾರಿಗಳು, ಕೃಷಿ ವಿಶ್ವವಿದ್ಯಾನಿಲಯ, ಜಿಕೆವಿಕೆ, ಬೆಂಗಳೂರು ಇವರ ಹೆಸರಿಗೆ ಪಡೆದು ಡಿ.31 ರೊಳಗೆ ಕುಲಸಚಿವರ ಕಚೇರಿಗೆ ಸಲ್ಲಿಸುವುದು. ತಡವಾಗಿ ಬಂದ, ಅಪೂರ್ಣ ಹಾಗೂ ನಿಗದಿತ ಶುಲ್ಕ ಭರಿಸದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಈ ಕುರಿತು ಹೆಚ್ಚಿನ ವಿವರಗಳಿಗೆ ಕುಲಸಚಿವರ ಕಚೇರಿಯ ದೂ.080-23330984/ 23330149 ಸಂಪರ್ಕಿಸುವುದು ಅಥವಾ ಕೃಷಿ ವಿಶ್ವವಿದ್ಯಾನಿಲಯದ ವೆಬ್‍ಸೈಟ್ www.uasbangalore.edu.inನಲ್ಲಿ ಪಡೆಯಬಹುದಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
Next Story





