Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿ.15ರಿಂದ ಕೈತ್ರೋಡಿ ಶ್ರೀ ಕೊರಗಜ್ಜ...

ಡಿ.15ರಿಂದ ಕೈತ್ರೋಡಿ ಶ್ರೀ ಕೊರಗಜ್ಜ ಕ್ಷೇತ್ರದಲ್ಲಿ ಚಂಡಿಕಾಯಾಗ, ಯಕ್ಷಗಾನ, ವಾರ್ಷಿಕ ನೇಮೋತ್ಸವ

ವಾರ್ತಾಭಾರತಿವಾರ್ತಾಭಾರತಿ5 Dec 2020 7:31 PM IST
share
ಡಿ.15ರಿಂದ ಕೈತ್ರೋಡಿ ಶ್ರೀ ಕೊರಗಜ್ಜ ಕ್ಷೇತ್ರದಲ್ಲಿ ಚಂಡಿಕಾಯಾಗ, ಯಕ್ಷಗಾನ, ವಾರ್ಷಿಕ ನೇಮೋತ್ಸವ

ಬಂಟ್ವಾಳ : ಇಲ್ಲಿನ ರಾಯಿ ಸಮೀಪದ ಕೈತ್ರೋಡಿ ಕ್ವಾರ್ಟಸ್ ಶ್ರೀ ಮಂತ್ರ ದೇವತೆ ಕೊರಗಜ್ಜ ಕ್ಷೇತ್ರದಲ್ಲಿ ಡಿಸೆಂಬರ್ 15ರಿಂದ 19ರ ವರೆಗೆ ಚಂಡಿಕಾಯಾಗ ಸಹಿತ ಯಕ್ಷಗಾನ ಮತ್ತು ವಾರ್ಷಿಕ ನೇಮೋತ್ಸವ ಮತ್ತಿತರ ಕಾರ್ಯಕ್ರಮ ನಡೆಯಲಿದೆ ಎಂದು ಕ್ಷೇತ್ರದ ಧರ್ಮದರ್ಶಿ ಲೋಕೇಶ್ ಹೇಳಿದ್ದಾರೆ.

ಕೊರಗಜ್ಜ ಕ್ಷೇತ್ರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.15ರಂದು ಬೆಳಗ್ಗೆ ಗಂಟೆ 7.30ರಿಂದ ವೇದಮೂರ್ತಿ ಸುಬ್ರಹ್ಮಣ್ಯ ಪರಾಡ್ಕರ್ ಗುಂಡ್ಯಡ್ಕ ಮತ್ತು ರಾಧಾಕೃಷ್ಣ ಭಟ್ ಪೆದಮಲೆ ಮಾರ್ಗದರ್ಶನದಲ್ಲಿ ಚಂಡಿಕಾಯಾಗ ಆರಂಭಗೊಳ್ಳಲಿದ್ದು ಅಂದು ಮಧ್ಯಾಹ್ನ ಝೀ ಕನ್ನಡ ಮಹರ್ಷಿವಾಣಿ ಖ್ಯಾತಿಯ ಡಾ. ಆನಂದ ಗುರೂಜಿ ಮತ್ತು ಕಟೀಲು ಕ್ಷೇತ್ರದ ವೇದಮೂರ್ತಿ ಕಮಲಾದೇವಿ ಅಸ್ರಣ್ಣರ ಉಪಸ್ಥಿತಿಯಲ್ಲಿ ಪೂರ್ಣಾಹುತಿಗೊಳ್ಳಲಿದೆ ಎಂದರು.

ಇದೇ ವೇಳೆ ಕೊರಗಜ್ಜ ಭಕ್ತಿಗೀತೆ ಹಾಡಿ ಗಮನ ಸೆಳೆದ ಬಾಲ ಪ್ರತಿಭೆ ಕಾರ್ತಿಕ್ ಕಾರ್ಕಳ ಅವರನ್ನು ಸನ್ಮಾನಿಸಿ ಆಶೀರ್ವಚನ ನೀಡುವರು. 

ಅಂದು ಸಂಜೆ ರಾತ್ರಿ ಗಂಟೆ 7.30ರಿಂದ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಚಿತ್ರನಟ ಅರ್ಜುನ್ ಕಾಪಿಕಾಡ್ ಮತ್ತು ದೇವದಾಸ ಕಾಪಿಕಾಡ್ ಭಾಗವಹಿಸುವರು. ರಾತ್ರಿ ಗಂಟೆ 9ರಿಂದ 'ಪನಿಯರೆ ಆವಂದಿನ' ತುಳು ನಾಟಕ ಪ್ರದರ್ಶನಗೊಳ್ಳಲಿದೆ ಎಂದು ತಿಳಿಸಿದರು. 

ಡಿ.17ರಂದು ರಾತ್ರಿ ಗಂಟೆ 9ಕ್ಕೆ  ಕಟೀಲು ಮೇಳದವರಿಂದ 3ನೇ ವರ್ಷದ 'ಶ್ರೀದೇವಿ ಮಹಾತ್ಮೆ' ಯಕ್ಷಗಾನ ಬಯಲಾಟ ನಡೆಯಲಿದೆ. 

ಡಿ. 19ರಂದು ರಾತ್ರಿ ಗಂಟೆ 8 ರಿಂದ ಮಂತ್ರದೇವತೆ ಮತ್ತು ಕೊರಗಜ್ಜ ದೈವಗಳಿಗೆ ವಾರ್ಷಿಕ ನೇಮೋತ್ಸವ ನಡೆಯಲಿದ್ದು, ಪ್ರತಿದಿನ ಮಧ್ಯಾಹ್ನ ಮತ್ತು ರಾತ್ರಿ ಸಾರ್ವಜನಿಕ ಅನ್ನಸಂತರ್ಪಣೆ ಇದೆ ಎಂದು ಅವರು ವಿವರಿಸಿದರು.

ಕಳೆದ 24 ವರ್ಷಗಳಿಂದ ಇಲ್ಲಿ ಕೊರಗಜ್ಜ ದೈವ ಆರಾಧಿಸಿಕೊಂಡು ಬರುತ್ತಿದ್ದು ಕಳೆದ ಐದು ವರ್ಷಗಳಿಂದ ವಿವಿಧ ಜಿಲ್ಲೆಯ ಭಕ್ತರು ಆಗಮಿಸಿ ಅವರ ಕಷ್ಟ ಕಾರ್ಪಣ್ಯಗಳಿಗೆ ಪರಿಹಾರ ಕಂಡುಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಕೋವಿಡ್ ಸಂಕಷ್ಟ ಸಮಯದಲ್ಲಿ ನೂರಾರು ಕುಟುಂಬಗಳಿಗೆ ಉಚಿತ ಅಕ್ಕಿ ಮತ್ತಿತರ ಸಾಮಾಗ್ರಿ ವಿತರಿಸಲಾಗಿದ್ದು ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆಯೂ ನಡೆಯುತ್ತಿದೆ ಎಂದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಜಿ ವಲಯಾಧ್ಯಕ್ಷ ಚಂದಪ್ಪ ಪೂಜಾರಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X