Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಆಂಜನೇಯ ದೇವಾಲಯ ನಿರ್ಮಾಣಕ್ಕೆ...

ಬೆಂಗಳೂರು: ಆಂಜನೇಯ ದೇವಾಲಯ ನಿರ್ಮಾಣಕ್ಕೆ ಭೂಮಿ ದಾನ ಮಾಡಿದ ಬಾಷಾ

-ಸಮೀರ್ ದಳಸನೂರು-ಸಮೀರ್ ದಳಸನೂರು5 Dec 2020 10:13 PM IST
share
ಬೆಂಗಳೂರು: ಆಂಜನೇಯ ದೇವಾಲಯ ನಿರ್ಮಾಣಕ್ಕೆ ಭೂಮಿ ದಾನ ಮಾಡಿದ ಬಾಷಾ

ಬೆಂಗಳೂರು, ಡಿ.5: ಆಂಜನೇಯ ದೇವಾಲಯ ನಿರ್ಮಾಣಕ್ಕೆ ಮುಸ್ಲಿಮ್ ಸಮುದಾಯದ ವ್ಯಕ್ತಿಯೊಬ್ಬರು ಲಕ್ಷಾಂತರ ಬೆಲೆಬಾಳುವ ತನ್ನ ಒಡೆತನದ 1.5 ಗುಂಟೆ ಭೂಮಿಯನ್ನು ದಾನ ಮಾಡಿದ್ದಾರೆ.

ನಗರದ ಕಾಡುಗೋಡಿ ಬೆಳತೂರು ಕಾಲನಿ ನಿವಾಸಿಯೂ, ಲಾರಿ ಉದ್ಯಮಿಯೂ ಆದ ಸಮಾಜ ಸೇವಕ ಎಚ್.ಎಂ.ಜಿ.ಬಾಷಾ ಅವರು ಬೆಂಗಳೂರು ಗ್ರಾಮಾಂತರದ ಹೊಸಕೋಟೆ ಸಮೀಪ ವಳಗೆರೆಪುರದಲ್ಲಿರುವ ತಮ್ಮ 3 ಎಕರೆ ಭೂಮಿಯಲ್ಲಿ 1.5 ಗುಂಟೆ ಭೂಮಿಯನ್ನು ಉಚಿತವಾಗಿಯೇ ಆಂಜನೇಯ ದೇವಾಲಯಕ್ಕೆ ದಾನ ಮಾಡಿದ್ದು, ಜೊತೆಗೆ ಅದರ ಮಾಲಕತ್ವವನ್ನು ಸಹ ಶ್ರೀ ವೀರಾಂಜನೇಯಸ್ವಾಮಿ ದೇವಾಲಯ ಸೇವಾ ಟ್ರಸ್ಟ್ ಗೆ ವರ್ಗಾವಣೆ ಮಾಡಿಕೊಟ್ಟಿದ್ದಾರೆ.

ಕಳೆದ ಮೂರು ದಶಕಗಳ ಹಿಂದೆ ಸಣ್ಣ ಗುಡಿಯಲ್ಲಿ ಆಂಜನೇಯ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿತ್ತು. ಈ ದೇವಾಲಯಕ್ಕೆ ಹೊಂದಿಕೊಂಡಂತೆ  ಎಚ್.ಎಂ.ಜಿ.ಬಾಷಾ ಅವರ ಮೂರು ಎಕರೆ ಜಮೀನು ಇತ್ತು. ಇತ್ತೀಚಿಗೆ ದೇವಾಲಯಕ್ಕೆ ಕಟ್ಟಡ ನಿರ್ಮಿಸುವ ಕಾರ್ಯವನ್ನು ಗ್ರಾಮಸ್ಥರು ಕೈಗೆತ್ತಿಕೊಳ್ಳಲು ಆಲೋಚನೆ ನಡೆಸಿದ್ದರು. ಈ ಸಂದರ್ಭದಲ್ಲಿ ವಿಶಾಲವಾಗಿ ದೇವಾಲಯ ನಿರ್ಮಿಸುವಂತೆ ಸ್ವತಃ ಬಾಷಾ ಅವರು 1.5 ಗುಂಟೆ ಜಾಗವನ್ನು ಗ್ರಾಮದ ಹಿಂದೂಗಳಿಗೆ ಹಸ್ತಾಂತರಿಸಿದರು.

ಧನ ಸಹಾಯ: ಕಳೆದ ಎಂಟು ತಿಂಗಳಿನಿಂದ ದೇವಾಲಯದ ನೂತನ ಜೀಣೋದ್ಧಾರ ಕಟ್ಟಡದ ಕಾಮಗಾರಿ ನಡೆಯುತ್ತಿದ್ದು, ಬಾಷಾ ಅವರು ಭೂಮಿ ಮಾತ್ರವಲ್ಲದೆ, ಧನಸಹಾಯ ಮಾಡುವ ಮೂಲಕ ಮೆಚ್ಚುಗೆ ಪಾತ್ರರಾಗಿದ್ದಾರೆ ಎಂದು ಗ್ರಾಮದ ಮುಖಂಡ ಬೈರೇಗೌಡ ತಿಳಿಸಿದರು.

ಪ್ರದಕ್ಷಿಣೆ ಹಾಕಲು ಜಾಗ ಇರಲಿಲ್ಲ: ಆಂಜನೇಯ ಗುಡಿ ಚಿಕ್ಕದಾಗಿದ್ದ ಹಿನ್ನೆಲೆ ಸುತ್ತಲೂ ಪ್ರದಕ್ಷಿಣೆ ಹಾಕಲು ಆಗುತ್ತಿರಲಿಲ್ಲ. ಆದರೆ, ಈಗ ಅವರು ಭೂಮಿ ದಾನ ಮಾಡಿರುವುದು ಸಂತೋಷ ತಂದಿದೆ. ಅಲ್ಲದೆ, ತಮ್ಮ ಜಾಗದಲ್ಲಿ ಹಿಂದೂ ಧರ್ಮದ ದೇವರು ಒಂದು ಇದೆ ಎಂದು ಗೊತ್ತಿದ್ದರೂ ಸಹ ಬಾಷಾ ಕುಟುಂಬಸ್ಥರು ಇದುವರೆಗೂ ಯಾವುದೇ ತೊಂದರೆ ಕೊಡದೇ ಪೂಜಾ ಕಾರ್ಯಕ್ಕೆ ಅನುವು ಮಾಡಿಕೊಟ್ಟಿದ್ದಾರೆ ಎಂದು ಗ್ರಾಮದ ಮತ್ತೋರ್ವ ಮುಖಂಡ ಮುನಿರಾಜು ನುಡಿದರು.

ಬ್ಯಾನರ್ ವೈರಲ್: ಆಂಜನೇಯ ದೇವಾಲಯ ಕಟ್ಟಡ ನಿರ್ಮಾಣ ಕಾಮಗಾರಿ ಕುರಿತು ಟ್ರಸ್ಟ್ ಆಡಳಿತ ಮಂಡಳಿ ಸದಸ್ಯರು, ಮಾಹಿತಿ ಪತ್ರವೊಂದನ್ನು ಗ್ರಾಮದ ಪ್ರವೇಶ ದ್ವಾರದಲ್ಲಿ ಹಾಕಲಾಗಿತ್ತು. ಆದರೆ, ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪುಟ್ಟ ಸಹಾಯ

ನಮ್ಮ ಭೂಮಿಗೆ ಹೊಂದಿಕೊಂಡಂತೆ ಆಂಜನೇಯ ಗುಡಿ ಇತ್ತು. ದಿನನಿತ್ಯ ಇಲ್ಲಿಗೆ ಆಗಮಿಸುವ ಭಕ್ತರು ಸ್ಥಳದ ಕೊರೆತಯಿಂದ ತೊಂದರೆ ಅನುಭವಿಸುತ್ತಿದ್ದುದನ್ನು ಕಂಡಿದ್ದೇನೆ. ಹಾಗಾಗಿ, ನನ್ನ ಬಳಿಯ ಭೂಮಿಯಲ್ಲಿ ಸ್ವಲ್ಪ ದಾನ ಮಾಡುವ ಮೂಲಕ ಪುಟ್ಟ ಸಹಾಯ ಮಾಡಿದ್ದೇನೆ ಅಷ್ಟೇ.

-ಎಚ್.ಎಂ.ಜಿ.ಬಾಷಾ, ದಾನಿ

ಕ್ಷುಲ್ಲಕ ಕಾರಣಗಳಿಗೆ ಕೋಮುಸೌಹಾರ್ದತೆಗೆ ಧಕ್ಕೆ ಉಂಟು ಮಾಡುವ ವಾತಾವರಣ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಎಚ್‍ಎಂಜಿ ಬಾಷಾ ಅವರು ದೇವಾಲಯಕ್ಕೆ ಭೂಮಿ ದಾನ ಮಾಡಿರುವುದಕ್ಕೆ ಗ್ರಾಮದ ಎಲ್ಲರೂ ಸಂತಸ ವ್ಯಕ್ತಪಡಿಸಿ, ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದೇವೆ.

-ಎಂ.ವಿ.ಮುನೇಗೌಡ, ವಳಗೆರೆಪುರ ಗ್ರಾಮದ ಮುಖಂಡ

share
-ಸಮೀರ್ ದಳಸನೂರು
-ಸಮೀರ್ ದಳಸನೂರು
Next Story
X