Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೈತರಿಗೆ ಒಂದು ಜಿಲ್ಲೆ ಒಂದು...

ರೈತರಿಗೆ ಒಂದು ಜಿಲ್ಲೆ ಒಂದು ಉತ್ಪನ್ನಕ್ಕಾಗಿ ತರಬೇತಿ: ಕೃಷಿ ಸಚಿವ ಬಿ.ಸಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ5 Dec 2020 11:45 PM IST
share
ರೈತರಿಗೆ ಒಂದು ಜಿಲ್ಲೆ ಒಂದು ಉತ್ಪನ್ನಕ್ಕಾಗಿ ತರಬೇತಿ: ಕೃಷಿ ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು, ಡಿ. 5: ಅಸಂಘಟಿತ ವಲಯದಲ್ಲಿರುವ ಸಣ್ಣ ಆಹಾರ ಸಂಸ್ಕರಣ ಉದ್ದಿಮೆಗಳನ್ನು, ಅವುಗಳ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರೈತರಿಗೆ ಒಂದು ಜಿಲ್ಲೆ ಒಂದು ಉತ್ಪನ್ನ(ಬೆಳೆ) ತರಬೇತಿಯನ್ನು ನೀಡಲು ನಿರ್ಧರಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

ಶನಿವಾರ ವಿಕಾಸಸೌಧದಲ್ಲಿ ಮೈಸೂರಿನ ಕೇಂದ್ರಿಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ (ಸಿಎಫ್‍ಟಿಆರ್‍ಐ) ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಮಾತನಾಡಿದ ಅವರು, ಕೇಂದ್ರದ 'ಆತ್ಮನಿರ್ಭರ್' ಭಾರತ ಅಭಿಯಾನದ ಭಾಗವಾಗಿ ಕೇಂದ್ರ ಸರಕಾರದ ಆಹಾರ ಸಂಸ್ಕರಣಾ ಉದ್ದಿಮೆಗಳ ಮಂತ್ರಾಲಯವು ಪ್ರಧಾನಮಂತ್ರಿ ಸಣ್ಣ ಆಹಾರ ಸಂಸ್ಕರಣಾ ಉದ್ಯಮಗಳ ಕ್ರಮಬದ್ಧಗೊಳಿಸುವಿಕೆ ಯೋಜನೆಯನ್ನು ರಾಜ್ಯ ಸರಕಾರದ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲು ಉದ್ದೇಶಿಸಿದ್ದು, ಅಸಂಘಟಿತ ವಲಯದಲ್ಲಿರುವ ಸಣ್ಣ ಆಹಾರ ಸಂಸ್ಕರಣ ಉದ್ದಿಮೆಗಳನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದರು.

2021ರ ಜ.11ರಿಂದ ಮಾರ್ಚ್ 30ರವರೆಗೆ ತರಬೇತಿ ನಡೆಸಲು ಉದ್ದೇಶಿಸಲಾಗಿದ್ದು, ಕೃಷಿ ಇಲಾಖೆಯ ಕೆಪೆಕ್ (ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ) 50 ಮಂದಿಯಂತೆ ಪ್ರತಿ ತಾಲೂಕಿನಿಂದ ಇಬ್ಬರು ರೈತರನ್ನು ಆಯ್ಕೆಮಾಡಿ ಒಂದು ಗುಂಪು ರಚಿಸಿ ಒಟ್ಟು 500 ಜನರಿಗೆ ತರಬೇತಿ ನೀಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದ್ದು, 6 ದಿನ ನಡೆಯುವ ಈ ತರಬೇತಿಯಲ್ಲಿ ಕೊನೆಯ 2 ದಿನಗಳನ್ನು ಮಾರ್ಕೆಟಿಂಗ್, ಬ್ರಾಂಡ್‍ಗಾಗಿ ಹೆಚ್ಚಿನ ಒತ್ತು ನೀಡಲು ಅವರು ಸಲಹೆ ನೀಡಿದರು.

ವಿಶೇಷವಾಗಿ ಮೆಕ್ಕೆಜೋಳ, ತೊಗರಿ ಹಾಗೂ ಸಿರಿಧಾನ್ಯಗಳ ಉತ್ಪನ್ನಗಳಿಗೆ ಹೆಚ್ಚಿನ ಆದ್ಯತೆ ನೀಡುವ ಬಗ್ಗೆಯೂ ಚರ್ಚಿಸಲಾಗಿದೆ. ಅಸಂಘಟಿತ ವಲಯದಲ್ಲಿರುವ ಸಣ್ಣ ಆಹಾರ ಸಂಸ್ಕರಣ ಉದ್ದಿಮೆಗಳನ್ನು, ಅವುಗಳ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವುದು ಮತ್ತು ಅವುಗಳನ್ನು ಸಂಘಟಿತ ವಲಯಕ್ಕೆ ತರುವುದು ಹಾಗೂ ರೈತ ಉತ್ಪಾದಕ ಸಂಸ್ಥೆಗಳು, ಸ್ವಸಹಾಯ ಸಂಘಗಳು ಹಾಗೂ ಉತ್ಪಾದಕ ಸಹಕಾರಿ ಸಂಘಗಳಿಗೆ ಉತ್ತೇಜನ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.

ಒಂದು ಜಿಲ್ಲೆ, ಒಂದು ಉತ್ಪನ್ನ ಅಥವಾ ಬೆಳೆಯನ್ನು ಪ್ರೋತ್ಸಾಹಿಸುವುದು ಆಗಿರುತ್ತದೆ. ಕೃಷಿ ಇಲಾಖೆ ಹಾಗೂ ಕೃಷಿ ಸಂಬಂಧಿತ ಇಲಾಖೆಗಳು ಒಂದು ಜಿಲ್ಲೆ ಒಂದು ಉತ್ಪನ್ನ(ಬೆಳೆ) ಯೋಜನೆಯಡಿ ಉತ್ಪನ್ನಗಳನ್ನು ಗುರುತಿಸಿ, ಈ ಉತ್ಪನ್ನದ ಮೌಲ್ಯವರ್ಧನೆ, ಸಂಸ್ಕರಣೆ, ಪ್ಯಾಕಿಂಗ್, ಬ್ರಾಂಡ್ ಅಭಿವೃದ್ಧಿ, ಮಾರುಕಟ್ಟೆಗೆ ಪ್ರೋತ್ಸಾಹಿಸಲು ತರಬೇತಿ ನೀಡಲಾಗುತ್ತಿದೆ ಎಂದು ಅವರು ವಿವರ ನೀಡಿದರು.

ಸಿಎಫ್‍ಟಿಆರ್‍ಐನ ನಿರ್ದೇಶಕ ಜಿತೇಂದ್ರ ಜಾಧವ್, ಮುಖ್ಯಸ್ಥ ಡಾ.ಉಮೇಶ್ ಹೆಬ್ಬಾರ್, ಕೃಷಿ ಇಲಾಖೆ ವಿಶೇಷ ಕರ್ತವ್ಯಾಧಿಕಾರಿ ಮಂಜು ಸೇರಿದಂತೆ ಕೃಷಿ ವಿಜ್ಞಾನಿಗಳು ಈ ಸಮಾಲೋಚನೆ ಸಭೆಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X