ಮಂಗಳೂರು: ಕಂಟೈನರ್‌ಗೆ ಬೈಕ್ ಢಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು

ಮಂಗಳೂರು, ಡಿ.6: ನಗರದ ಪಡೀಲ್‌ನಲ್ಲಿ ಕಂಟೈನರ್‌ವೊಂದಕ್ಕೆ ಬೈಕ್ ಢಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಮೃತಪಟ್ಟ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ.
ನೀರುಮಾರ್ಗದ ಮನ್ವಿತ್(22) ಮೃತ ಬೈಕ್ ಸವಾರ ಎಂದು ತಿಳಿದುಬಂದಿದೆ.
ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಕಂಟೈನರ್ ನಂತೂರು ಕಡೆಯಿಂದ ಪಡೀಲ್‌ನತ್ತ ಸಂಚರಿಸುತ್ತಿತ್ತು. ಈ ವೇಳೆ ಎದುರುಗಡೆಯಿಂದ ಬಂದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ ದಾಟಿ ಕಂಟೈನರ್ ಅಡಿಗೆ ಬಿದ್ದಿದೆ ಎನ್ನಲಾಗಿದೆ. ಕಂಟೈನರ್ ಬೈಕ್ ಮೇಲೆ ಹರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಬೈಕ್ ಜಖಂಗೊಂಡಿದ್ದು, ಸವಾರನ ಹೆಲ್ಮೆಟ್ ಸಂಪೂರ್ಣ ನಜ್ಜುಗುಜ್ಜಾಗಿದೆ.
ಈ ಕುರಿತು ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





