ಉಡುಪಿ: ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ

ಉಡುಪಿ, ಡಿ.6: ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿರ್ವಾಣ ದಿನದ ಪ್ರಯುಕ್ತ ರವಿವಾರ ಮಣಿಪಾಲದಲ್ಲಿರುವ ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಆವರಣದಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಪಂ ಅಧ್ಯಕ್ಷ ದಿನಕರ ಬಾಬು, ಜಿಲ್ಲಾಧಿಕಾರಿ ಜಿ. ಜಗದೀಶ್, ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಪಂ ಉಪಕಾರ್ಯದರ್ಶಿ ಕಿರಣ್ ಪಡ್ನೆಕರ್, ಪೌರಾಯುಕ್ತ ಆನಂದ್ ಕಲ್ಲೋಳಿಕರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಅನಿತಾ ಮಡ್ಲುರ್ ಹಾಗೂ ವಿವಿಧ ದಲಿತ ಸಂಘಟನೆಗಳ ಮುಖಂಡರುಗಳು ಉಪಸ್ಥಿತರಿದ್ದರು.
Next Story





