Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನನ್ನನ್ನು ಪಕ್ಷದಿಂದ ವಜಾಗೊಳಿಸಿದ ನಂತರ...

ನನ್ನನ್ನು ಪಕ್ಷದಿಂದ ವಜಾಗೊಳಿಸಿದ ನಂತರ ಜೆಡಿಎಸ್ ಗೆಲುವಿನ ಸ್ಥಾನಗಳಲ್ಲಿ ಕುಸಿತ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ6 Dec 2020 9:04 PM IST
share
ನನ್ನನ್ನು ಪಕ್ಷದಿಂದ ವಜಾಗೊಳಿಸಿದ ನಂತರ ಜೆಡಿಎಸ್ ಗೆಲುವಿನ ಸ್ಥಾನಗಳಲ್ಲಿ ಕುಸಿತ: ಸಿದ್ದರಾಮಯ್ಯ

ಬೆಂಗಳೂರು, ಡಿ. 6: 'ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಪ್ರಕಟಿಸುವಂತೆ ವಿಧಾನ ಮಂಡಲ ಅಧಿವೇಶನದಲ್ಲಿ ಸರಕಾರವನ್ನು ಒತ್ತಾಯಿಸುತ್ತೇವೆ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದ್ದಾರೆ.

ರವಿವಾರ ವಿಧಾನ ಮಂಡಲದ ಉಭಯ ಸದನಗಳ ಹಿರಿಯ ಸದಸ್ಯರ ಸಭೆಯ ಬಳಿಕ ತಮ್ಮ ನಿವಾಸದಲ್ಲಿ ಅವರು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದ ವಿವಿಧ ಜಿಲ್ಲೆಗಳು ಈ ವರ್ಷ ಮೂರು ಬಾರಿ ಪ್ರವಾಹದಿಂದ ಹಾನಿಗೀಡಾಗಿವೆ, ಈವರೆಗೂ ನಷ್ಟಕ್ಕೊಳಗಾದ ಜನರಿಗೆ ಸೂಕ್ತ ಪರಿಹಾರ ನೀಡಿಲ್ಲ. ಜೊತೆಗೆ ಅನೇಕ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ನೀಡಿಲ್ಲ, ವಿದ್ಯುತ್ ಖರೀದಿಯಲ್ಲಿ ಅವ್ಯವಹಾರ ನಡೆಯುತ್ತಿದೆ. ಈ ಎಲ್ಲಾ ವಿಚಾರಗಳನ್ನು ಸದನದಲ್ಲಿ ಪ್ರಸ್ತಾಪಿಸಲಾಗುವುದು ಎಂದರು.

ರಾಜ್ಯದ ಹಣಕಾಸು ಸ್ಥಿತಿ ಹದಗೆಟ್ಟಿದೆ. ನೌಕರರ ಸಂಬಳ, ವೃದ್ಧಾಪ್ಯ ವೇತನ, ವಿಧವಾ ವೇತನ ಸೇರಿದಂತೆ ವಿವಿಧ ಪಿಂಚಣಿ ನೀಡಲು ಸರ್ಕಾರದ ಬಳಿ ಹಣವಿಲ್ಲ. ಹಾಗಾಗಿ ಈ ಬಾರಿಯ ಅಧಿವೇಶನದಲ್ಲಿ ರಾಜ್ಯದ ಆರ್ಥಿಕ ಸ್ಥಿತಿಗತಿಯ ಬಗ್ಗೆ ಶ್ವೇತಪತ್ರ ಹೊರಡಿಸುವಂತೆ ಸರಕಾರವನ್ನು ಒತ್ತಾಯಿಸುತ್ತೇವೆ ಎಂದುಇ ಹೇಳಿದರು.

ವಿಧಾನ ಪರಿಷತ್ ಸಭಾಪತಿಗಳ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಕ್ಕೆ ಸರಕಾರ ನಿರ್ಧರಿಸಿದೆ. ನಮ್ಮದು ಜಾತ್ಯತೀತ ಪಕ್ಷ ಎನ್ನುವ ಜೆಡಿಎಸ್ ಕೋಮುವಾದಿಗಳ ಪರವಾಗಿ ಮತ ಚಲಾಯಿಸುತ್ತದೋ, ವಿರುದ್ಧವಾಗಿ ಮತ ಚಲಾಯಿಸುತ್ತದೋ ಎಂಬುದನ್ನು ನೋಡಲು ಸಭಾಪತಿ ಪ್ರತಾಪ್ ಚಂದ್ರಶೆಟ್ಟಿಯವರಿಗೆ ಈಗಲೇ ರಾಜೀನಾಮೆ ನೀಡದಂತೆ ಹೇಳಿದ್ದೇನೆ ಎಂದು ಅವರು ಸ್ಪಷ್ಟನೆ ನೀಡಿದರು.

ಎಚ್‍ಡಿಕೆ ವಿರುದ್ಧ ಟೀಕೆ: ಸಮ್ಮಿಶ್ರ ಸರಕಾರ ಬಂದಮೇಲೆ ತನ್ನ ಗೌರವ ಹಾಳಾಯ್ತು ಎಂಬ ಕುಮಾರಸ್ವಾಮಿಯವರ ಹೇಳಿಕೆ ಹಾಸ್ಯಾಸ್ಪದವಾಗಿದೆ. ಕುಮಾರಸ್ವಾಮಿಗೆ ಒಳ್ಳೆ ಇಮೇಜ್ ಇದ್ದದ್ದೇ ಆದರೆ ಹಿಂದಿನ ಚುನಾವಣೆಗಳಲ್ಲಿ ಜೆಡಿಎಸ್ ಪಕ್ಷ ಗೆಲ್ಲುವ ಸ್ಥಾನಗಳ ಸಂಖ್ಯೆ ಏರಿಕೆಯಾಗುತ್ತಿತ್ತೇ ಹೊರತು ಕಡಿಮೆಯಾಗುತ್ತಿರಲಿಲ್ಲ ಎಂದು ಟೀಕಿಸಿದರು.

2004ರಲ್ಲಿ ನಾನು ಜೆಡಿಎಸ್ ನಲ್ಲಿದ್ದಾಗ ಜಿಡಿಎಸ್ 59 ಸ್ಥಾನಗಳನ್ನು ಗೆದ್ದಿತ್ತು, ನನ್ನನ್ನು ಪಕ್ಷದಿಂದ ವಜಾಗೊಳಿಸಿದ ನಂತರದ ಚುನಾವಣೆಯಲ್ಲಿ 28 ಸ್ಥಾನ, 2013ರ ಚುನಾವಣೆಯಲ್ಲಿ 40 ಸ್ಥಾನ, ಕಳೆದ ಚುನಾವಣೆಯಲ್ಲಿ 37 ಸ್ಥಾನ ಗೆದ್ದಿತ್ತು. ಕುಮಾರಸ್ವಾಮಿ ಜನರ ಬಳಿ ಗೌರವ ಉಳಿಸಿಕೊಂಡಿದ್ದರೆ 59 ರಿಂದ 28 ಸ್ಥಾನಕ್ಕೆ ಬರುತ್ತಿತ್ತೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಜೆಡಿಎಸ್ ನವರ ರಾಜಕೀಯ ವಿರೋಧಿ ಕಾಂಗ್ರೆಸ್ ಪಕ್ಷವೇ ಹೊರತು ಬಿಜೆಪಿ ಅಲ್ಲ. ಅವರು ಬಿಜೆಪಿ ಬಗ್ಗೆ ಸದಾಕಾಲ ಮೃದು ಧೋರಣೆ ಹೊಂದಿದ್ದಾರೆ. ನಿನ್ನೆ ಕುಮಾರಸ್ವಾಮಿ ಅವರು ತಾವು ಬಿಜೆಪಿಗೆ ಹೋಗಿದ್ದರೆ 5 ವರ್ಷ ಮುಖ್ಯಮಂತ್ರಿ ಆಗಿರುತ್ತಿದ್ದೆ ಎಂದು ಹೇಳಿರುವುದೇ ಇದಕ್ಕೆ ಸಾಕ್ಷಿ. ಇದೇ ಕಾರಣಕ್ಕೆ ನಾನು ಜೆಡಿಎಸ್ ಅನ್ನು ಬಿಜೆಪಿಯ 'ಬಿ ಟೀಮ್' ಎನ್ನುವುದು ಎಂದು ಸಿದ್ದರಾಮಯ್ಯ ಲೇವಡಿ ಮಾಡಿದರು.

ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಾಗ ಸರಕಾರ ರಚನೆ ಮಾಡುವಂತೆ ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡಿದ್ದು, ಅವರೊಂದಿಗೆ ಮೊದಲ ಸುತ್ತಿನ ಮಾತುಕತೆ ಮಾಡಿದ್ದು ಕಾಂಗ್ರೆಸ್ ಹೈಕಮಾಂಡ್, ನಾನಲ್ಲ. 37 ಸ್ಥಾನ ಗೆದ್ದವರಿಗೆ ಮುಖ್ಯಮಂತ್ರಿ ಹುದ್ದೆ ನೀಡಿದ್ದರು, ಇದರಲ್ಲಿ ಟ್ರ್ಯಾಪಿಂಗ್ ಎಲ್ಲಿಂದ ಬಂತು? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X