ಅಂಬೇಡ್ಕರ್ ಪರಿನಿರ್ವಾಣ ಪ್ರಯುಕ್ತ ಕೋವಿಡ್ ಜಾಗೃತಿ ಕಾರ್ಯಕ್ರಮ

ಬೆಂಗಳೂರು, ಡಿ. 6: ಡಾ.ಬಿ.ಆರ್.ಅಂಬೇಡ್ಕರ್ ಅವರ 64ನೆ ಪರಿನಿರ್ವಾಣ ದಿನಾಚರಣೆಯ ಪ್ರಯುಕ್ತ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಸಾರ್ವಜನಿಕರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸುವ ಮೂಲಕ ಕೊರೋನ ಕುರಿತು ಜಾಗೃತಿ ಮೂಡಿಸಲಾಯಿತು.
ರವಿವಾರ ನಗರದ ಭಕ್ಷಿ ಗಾರ್ಡನ್‍ನಲ್ಲಿ ನಿರ್ಮಿಸಲಾಗಿರುವ ಡಾ.ಅಂಬೇಡ್ಕರ್ ಪ್ರತಿಮೆಗೆ ಮಾರ್ಲಾಪಣೆ ಮಾಡಿ, ಸಾರ್ವಜನಿಕರಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಿಸಲಾಯಿತು. ಜನರ ಹಿತಕ್ಕಾಗಿ ಡಾ.ಬಿ.ಆರ್.ಅಂಬೇಡ್ಕರ್ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು. ಹೀಗಾಗಿ ಅವರಿಗೆ ಗೌರವ ಸಲ್ಲಿಸುವ ಹಿನ್ನೆಲೆಯಲ್ಲಿ ಮಾಸ್ಕ್ ವಿತರಿಸಲಾಗಿದೆ ಎಂದು ದಸಂಸ ರಾಜ್ಯಾಧ್ಯಕ್ಷ ಡಾ.ಸಿ.ಎಸ್.ರಘು ತಿಳಿಸಿದ್ದಾರೆ.
ಕೊರೋನ ಸಾಂಕ್ರಾಮಿಕ ರೋಗವು ಬಡವ, ಮಧ್ಯಮ ವರ್ಗದ ಜನತೆಯನ್ನು ಸಮಸ್ಯೆಗೆ ನೂಕಿದೆ. ಹೀಗಾಗಿ ಬಡ ಜನತೆಯ ಸಮಸ್ಯೆಗಳಿಗೆ ಸ್ಪಂದಿಸುವುದು ಎಲ್ಲರ ಜವಾಬ್ದಾರಿಯಾಗಬೇಕು. ಈಗ ಮಾಸ್ಕ್, ಸ್ಯಾನಿಟೈಸರ್ ವಿತರಿಸಿದ್ದೇವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸಹಾಯ ಮಾಡಲಾಗುವುದೆಂದು ಅವರು ತಿಳಿಸಿದ್ದಾರೆ.
Next Story






.jpg)
.jpg)

