ಚಿರತೆ, ಹುಲಿ ಉಗುರುಗಳ ಮಾರಾಟ: ಮಹಿಳೆ ಸೇರಿ ನಾಲ್ವರ ಬಂಧನ

ಬೆಂಗಳೂರು, ಡಿ. 6: ಚಿರತೆ, ಹುಲಿ ಉಗುರುಗಳನ್ನು ಮಾರಾಟ ಮಾಡಲು ಯತ್ನಿಸಿದ ಆರೋಪ ಸಂಬಂಧ ಮಹಿಳೆ ಸೇರಿದಂತೆ ನಾಲ್ವರನ್ನು ಇಲ್ಲಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣಾ ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನ ಪ್ರಶಾಂತ್ ಕುಮಾರ್, ಕಾರ್ತಿಕ್, ಆಂಧ್ರಪ್ರದೇಶದ ಎಸ್ ಕುಮಾರ್ ಹಾಗೂ ಪ್ರಮೀಳಾ ರೆಡ್ಡಿ ಬಂಧಿತ ಆರೋಪಿಗಳಾಗಿದ್ದಾರೆ ಎಂದು ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ತಿಳಿಸಿದ್ದಾರೆ.
ಬನಶಂಕರಿಯ ಕತ್ರಿಗುಪ್ಪೆ ಮುಖ್ಯ ರಸ್ತೆಯಲ್ಲಿ ಚಿರತೆ, ಹುಲಿ ಉಗುರುಗಳನ್ನು ಮಾರಾಟ ಮಾಡಲು ಗ್ರಾಹಕರಿಗಾಗಿ ಕಾಯುತ್ತಿದ್ದಾಗ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
Next Story





