Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆರೆಸ್ಸೆಸ್ ನಿಂದ ಈಡಿ ದುರ್ಬಳಕೆ :...

ಆರೆಸ್ಸೆಸ್ ನಿಂದ ಈಡಿ ದುರ್ಬಳಕೆ : ಪಾಪ್ಯುಲರ್ ಫ್ರಂಟ್

ವಾರ್ತಾಭಾರತಿವಾರ್ತಾಭಾರತಿ7 Dec 2020 11:46 AM IST
share
ಆರೆಸ್ಸೆಸ್ ನಿಂದ ಈಡಿ ದುರ್ಬಳಕೆ : ಪಾಪ್ಯುಲರ್ ಫ್ರಂಟ್

ಮಂಗಳೂರು : ಇತ್ತೀಚೆಗೆ ದೇಶದ ವಿವಿಧ ಭಾಗಗಳಲ್ಲಿ ಪಾಪ್ಯುಲರ್ ಫ್ರಂಟ್ ನಾಯಕರ ನಿವಾಸಗಳ ಮೇಲೆ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಈಡಿ) ನಡೆಸಿರುವ ದಾಳಿ ಮತ್ತು ಶೋಧನೆಗಳು ಏಜೆನ್ಸಿಯು ಆರೆಸ್ಸೆಸ್ ನ ಅಸ್ತ್ರವಾಗಿ ಕಾರ್ಯಾಚರಿಸುತ್ತಿದೆ ವಿನ: ಸ್ವಂತಂತ್ರವಾಗಿಲ್ಲ ಎನ್ನುವುದನ್ನು ತೋರಿಸುತ್ತದೆ. ಆರೆಸ್ಸೆಸ್ ನ ಜನವಿರೋಧಿ ಸಿದ್ಧಾಂತದ ವಿರುದ್ಧದ ರಾಜಿಯಿಲ್ಲದ ನಿಲುವಿನ ಕಾರಣಕ್ಕಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವನ್ನು ಬೇಟೆಯಾಡಲಾಗುತ್ತಿದೆ ಎಂದು ದೇಶದ ಜನತೆ ಅರಿತಿರುವುದಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಾಕಾರಿ ಸಮಿತಿ‌ ಹೇಳಿದೆ.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ಮೂಲೆಗೆ ತಳ್ಳಲ್ಪಟ್ಟ ಮುಸ್ಲಿಮ್ ಸಮುದಾಯದ ಸಬಲೀಕರಣದ ಮೇಲೆ ಗಮನ ಕೇಂದ್ರೀಕರಿಸುವ ಜನಪರ ಸಂಘಟನೆಯಾಗಿದೆ. ಸಾರ್ವಜನಿಕರ ದೇಣಿಗೆಯನ್ನು ಆಧರಿಸಿರುವ ಸಂಘಟನೆಯಾಗಿ ಅದು ಹಣಕಸಿನ ವ್ಯವಹಾರಕ್ಕೆ ಸಂಬಂಧಿಸಿದ ಸರಕಾರಿ ನಿಯಮಗಳು ಮತ್ತು ನಿಬಂಧನೆಗಳನ್ನು ಪಾಲಿಸುತ್ತಿದೆ. ಆರೆಸ್ಸೆಸ್ ಮತ್ತು ಅದರ ರಾಜಕೀಯ ಅಂಗ ಸಂಘಟನೆಯಾಗಿರುವ ಬಿಜೆಪಿಯ ವಿಭಜನಕಾರಿ ಮತ್ತು ಕೋಮುವಾದಿ ಅಜೆಂಡಾದ ವಿರುದ್ಧದ ಧ್ವನಿಯನ್ನು ಅಡಗಿಸುವ ಮತ್ತು ದಮನಿಸುವ ಏಜೆನ್ಸಿಯಾಗಿ ಈಡಿ ಬದಲಾಗಿರುವುದು ಅದರ ಆಯ್ದ ದುರ್ಬಳಕೆಯಿಂದ ಸ್ಪಷ್ಟವಾಗುತ್ತದೆ ಎಂದು ಪಾಪ್ಯುಲರ್ ಫ್ರಂಟ್ ಹೇಳಿದೆ.

ಅತ್ಯಂತ ಕನಿಷ್ಠ ಹಣಕಾಸಿನ ಮೂಲ ಮತ್ತು ವ್ಯವಹಾರಗಳನ್ನು ಹೊಂದಿರುವ ಗುಂಪುಗಳ ಹಿಂದೆ ಈಡಿ ಮತ್ತು ಇತರ ತನಿಖಾ ಏಜೆನ್ಸಿಗಳು ಓಡುತ್ತಿವೆ. ಆದರೆ ಆರೆಸ್ಸೆಸ್ ಹಿತಾಸಕ್ತಿಯ ಪರವಾಗಿರುವ ದೊಡ್ಡ ಕಾರ್ಪೊರೇಟ್ ಗಳು, ರಾಜಕೀಯ ಗುಂಪುಗಳು ಮತ್ತು ಎನ್.ಜಿ.ಒಗಳನ್ನು  ಮುಟ್ಟಲು ಅವುಗಳು ಭಯಪಡುತ್ತಿವೆ. ಎಲೆಕ್ಟೊರಲ್ ಬಾಂಡ್ಸ್ ಮರೆಯಲ್ಲಿ ನೂರಾರು ಕೋಟಿ ರೂಪಾಯಿಗಳಿಗೆ ಯಾವುದೇ ಮೂಲವನ್ನು ತೋರಿಸಬೇಕಾದ  ಹೊಣೆಗಾರಿಕೆಯಿಲ್ಲದೆ ಸೇರಿಸಿಟ್ಟಿರುವ ಆಡಳಿತಾರೂಢ ಬಿಜೆಪಿ ವಿರುದ್ಧ ಕ್ರಮಕೈಗೊಳ್ಳುವ ತನಕ ತನಿಖಾ ಸಂಸ್ಥೆಯು ತನ್ನ ವಿಶ್ವಾಸಾರ್ಹತೆಯನ್ನು ಪ್ರತಿಪಾದಿಸುವುದು ಸಾಧ್ಯವಿಲ್ಲ ಎಂದು ರಾಷ್ಟ್ರವು ಚೆನ್ನಾಗಿ ತಿಳಿದಿದೆ. ಪಿ.ಎಫ್.ಐ ವಿರುದ್ಧದ ಹಗೆತನವು ನಿರ್ದಿಷ್ಟ ಸಂಘಟನೆಯ ವಿರುದ್ಧದ ಪ್ರತ್ಯೇಕ ಪ್ರಯತ್ನವಲ್ಲ ಎಂದು ಎನ್.ಇ.ಸಿ ಪುನರುಚ್ಛರಿಸುತ್ತದೆ. ಇದು ಭಾರತದಲ್ಲಿ ಸಮಾನ ನಾಗರಿಕರಾಗಿ ಜೀವಿಸುವ ಮುಸ್ಲಿಮರ ಸಾಂವಿಧಾನಿಕ ಹಕ್ಕುಗಳನ್ನು ನಿರಾಕರಿಸುವ ವಿಸ್ತೃತ ಹಿಂದುತ್ವ ಅಜೆಂಡಾದ ಭಾಗವಾಗಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವನ್ನು ಗುರಿಪಡಿಸುವ ಮೂಲಕ ಭಾರತೀಯ ಮುಸ್ಲಿಮ್ ಸಮುದಾಯದ ಮುಂಚೂಣಿಯಲ್ಲಿರುವ ಪ್ರಾಮಾಣಿಕ ಸಂಘಟನೆಗಳು, ಸಂಸ್ಥೆಗಳು ಮತ್ತು ನಾಯಕರನ್ನು ಭಯಪಡಿಸುವುದು ಅವರ ಅಂತಿಮ ಗುರಿಯಾಗಿದೆ. ಹೊಸ ಸುತ್ತಿನ ಪ್ರತೀಕಾರದ ಕ್ರಮವು ಸಂಘಟನೆಯನ್ನು ಮೌನಗೊಳಿಸದು ಎಂದು ಪಾಪ್ಯುಲರ್ ಫ್ರಂಟ್ ನ ಎನ್.ಇ.ಸಿ ಸ್ಪಷ್ಟಪಡಿಸುತ್ತದೆ. ಇಂತಹ ಅಧಿಕಾರದ ದುರುಪಯೋಗಕ್ಕಾಗಿ ವ್ಯಕ್ತವಾಗಿರುವ ಸಾರ್ವಜನಿಕ ಪ್ರತಿಕ್ರಿಯೆಗಳು ಸರಕಾರಿ ಏಜೆನ್ಸಿಗಳು ಭಾರತೀಯ ಸಂವಿಧಾನ ಮತ್ತು ಕಾನೂನು ನಿಯಮಕ್ಕೆ ಮರಳಿ ಅಧೀನರಾಗಲು ಒಂದು ಕರೆಗಂಟೆಯಾಗಿದೆ  ಎಂದು ಎನ್.ಇ.ಸಿ ಆಶಿಸುತ್ತದೆ ಎಂದು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X