Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆರ್ಥಿಕ ಇಲಾಖೆ ಒಪ್ಪಿಗೆ ನೀಡುತ್ತಿದ್ದಂತೆ...

ಆರ್ಥಿಕ ಇಲಾಖೆ ಒಪ್ಪಿಗೆ ನೀಡುತ್ತಿದ್ದಂತೆ ಕೃಷಿ ಇಲಾಖೆಯ ಹುದ್ದೆಗಳ ಭರ್ತಿ: ಬಿ.ಸಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ7 Dec 2020 2:15 PM IST
share
ಆರ್ಥಿಕ ಇಲಾಖೆ ಒಪ್ಪಿಗೆ ನೀಡುತ್ತಿದ್ದಂತೆ ಕೃಷಿ ಇಲಾಖೆಯ ಹುದ್ದೆಗಳ ಭರ್ತಿ: ಬಿ.ಸಿ.ಪಾಟೀಲ್

ಬೆಂಗಳೂರು, ಡಿ. 7: ಆರ್ಥಿಕ ಇಲಾಖೆಯಿಂದ ಹುದ್ದೆ ಭರ್ತಿಗೆ ಒಪ್ಪಿಗೆ ಸಿಗುತ್ತಿದ್ದಂತೆಯೇ ಆದಷ್ಟುಬೇಗ ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳನ್ನು ತುಂಬಲಾಗುವುದು ಎಂದು ಕೃಷಿ ಸಚಿವರೂ ಆಗಿರುವ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಬಿ.ಸಿ.ಪಾಟೀಲ್, ಕೋವಿಡ್ ಆರ್ಥಿಕ ಸಂಕಷ್ಟದಿಂದ ಯಾವುದೇ ಹೊಸ ಹುದ್ದೆ ತುಂಬಲು ಸದ್ಯಕ್ಕೆ ಆರ್ಥಿಕ ಇಲಾಖೆ ಅನುಮೋದನೆ ನೀಡುತ್ತಿಲ್ಲ. ಹುದ್ದೆ ತುಂಬಲು ಸರ್ಕಾರದಿಂದ ಒಪ್ಪಿಗೆ ಸಿಕ್ಕ ಬಳಿಕ ಶೀಘ್ರವೇ ಖಾಲಿ ಸ್ಥಾನಗಳನ್ನು ತುಂಬಲಾಗುವುದು ಎಂದರು.

ಈ ಹುದ್ದೆಗಳೆಲ್ಲ ಇತ್ತೀಚೆಗೆ ಖಾಲಿಯಾಗಿದ್ದಲ್ಲ. ಬಹಳ ಹಿಂದಿನಿಂದಲೇ ಭರ್ತಿಯಾಗದೇ ಉಳಿದಿದ್ದವು. ಕೊಪ್ಪಳ ಜಿಲ್ಲೆಯ ಕೃಷಿ ಇಲಾಖೆಯಲ್ಲಿನ ಜಂಟಿ ಕೃಷಿ ನಿರ್ದೇಶಕರ, ಉಪ ಕೃಷಿ ನಿರ್ದೇಶಕರ ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳಲ್ಲಿ ಒಟ್ಟು 246 ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ 141 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. 105 ಹುದ್ದೆಗಳು ಖಾಲಿಯಿವೆ. ಶೀಘ್ರದಲ್ಲಿಯೇ ಇವುಗಳನ್ನು ಸಹ ಸರ್ಕಾರದಿಂದ ಅನುಮೋದನೆ ಸಿಗುತ್ತಿದ್ದಂತೆಯೇ ಭರ್ತಿ ಮಾಡಲಾಗುವುದು ಎಂದು ಬಿ.ಸಿ.ಪಾಟೀಲ್ ಹೇಳಿದರು.

2018-19 ಸಾಲಿನಲ್ಲಿ ರಾಜ್ಯದಲ್ಲಿ ಗ್ರೂಪ್-ಎ ಮತ್ತು ಬಿ ವೃಂದದಲ್ಲಿ ಸಹಾಯಕ ಕೃಷಿ ನಿರ್ದೇಶಕರು  66 ಹುದ್ದೆ, ಕೃಷಿ ಅಧಿಕಾರಿಗಳು  350 ಹುದ್ದೆ, ಸಹಾಯಕ ಕೃಷಿ ಅಧಿಕಾರಿಗಳು 157  ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗಿದೆ.ಗ್ರೂಪ್-ಸಿ ವೃಂದದಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಲೋಕ ಸೇವಾ ಆಯೋಗಕ್ಕೆ ಪತ್ರ ಬರೆಯಲಾಗಿದೆ ಹಾಗೂ ಮುಂಬಡ್ತಿ ಕೋಟಾದಡಿ ಖಾಲಿ ಇರುವ ಹುದ್ದೆಗಳನ್ನು ನಿಯಮಾನುಸಾರ ಬಡ್ತಿ ಮೂಲಕ ಭರ್ತಿ ಮಾಡುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದರು.

ಕೃಷಿ ಚಟುವಟಿಕೆಗಳನ್ನು ಸಮರ್ಪಕವಾಗಿ ಸಕಾಲದಲ್ಲಿ ಕಾರ್ಯನಿರ್ವಹಿಸಲು ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವ ಸಲುವಾಗಿ ಕೊಪ್ಪಳ ಜಿಲ್ಲೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ 70 ಸಿಬ್ಬಂದಿಗಳನ್ನು ಇಲಾಖಾ ಮಾರ್ಗಸೂಚಿಯನ್ವಯ ನೇಮಕ ಮಾಡಿಕೊಳ್ಳಲಾಗಿದೆ. ಖಾಲಿ ಹುದ್ದೆಗಳಿಗೆ ಎದುರಾಗಿ ಹಾಗೂ ಆತ್ಮಯೋಜನೆಯಡಿ ಹೊರಗುತ್ತಿಗೆ ಹುದ್ದೆಗಳನ್ನು ತುಂಬಲಾಗಿದೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದರು.

ರೈತರು ಬೆಳೆ ವಿಮೆಗೆ ಆಧಾರ್ ಲಿಂಕ್ ಸೇರಿದಂತೆ ಮತ್ತಿತರ ಕೃಷಿಗೆ ಸಂಬಂಧಿಸಿದಂತೆ ತಮಗೆ ಯಾವುದೇ ಸಮಸ್ಯೆ ಕಂಡುಬಂದಲ್ಲಿ ಸ್ಥಳೀಯ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿ ಬಿ.ಸಿ.ಪಾಟೀಲ್ ಸದನಕ್ಕೆ ಉತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X