ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ
ಜಿಲ್ಲಾ ಪಂಚಾಯತ್ ಸದಸ್ಯನ ಹತ್ಯೆ ಪ್ರಕರಣ

ಬೆಂಗಳೂರು, ಡಿ.7: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಮತ್ತೆ ಡಿ.21ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು. ಬಂಧನದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇಂದಿನವರೆಗೆ ಸಿಬಿಐ ವಿಶೇಷ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿತ್ತು.
ಸೋಮವಾರ ಅವರ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ, ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಸಿಬಿಐ ವಿಶೇಷ ಕೋರ್ಟ್ ಮತ್ತೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಡಿ.21ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
Next Story





