ಭಾರತ್ ಬಂದ್‌ಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಬೆಂಬಲ
ಉಡುಪಿ, ಡಿ.7: ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಡಿ.8 ರಂದು ರೈತ ಸಂಘಟನೆಗಳು ಹಮ್ಮಿಕೊಂಡ ಭಾರತ್ ಬಂದ್‌ಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸಂಪೂರ್ಣ ಬೆಂಬಲ ಸೂಚಿಸಿದೆ.
ರೈತರ ಬೇಡಿಕೆಗಳಿಗೆ ಒಪ್ಪಿಗೆ ನೀಡಲು ಕೇಂದ್ರ ಸರಕಾರ ಮೀನಮೇಷ ಎಣಿಸುತ್ತಿದೆ. ದೇಶದಲ್ಲಿ ಕೃಷಿ ಉತ್ಪಾದನೆಯನ್ನು ಸುಸ್ಥಿತಿಯಲ್ಲಿಡಲು ಸರಕಾರ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಬೇಕು. ಏಕೆಂದರೆ ದರ ಕುಸಿತಕ್ಕೀಡಾದಾಗ ರೈತರು ಸಂಕಷ್ಟಕ್ಕೀಡಾಗಿ ಉತ್ಪಾದನೆಯಿಂದ ವಿಮುಖರಾಗುತ್ತಾರೆ. ಇದು ಆಹಾರ ಭದ್ರತೆಗೆ ದಕ್ಕೆ ತರಬಹುದು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





