Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಡಿ.14, 15ರಂದು ‘ಒಂದು ರಾಷ್ಟ್ರ ಒಂದು...

ಡಿ.14, 15ರಂದು ‘ಒಂದು ರಾಷ್ಟ್ರ ಒಂದು ಚುನಾವಣೆ' ಚರ್ಚೆ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ

ವಾರ್ತಾಭಾರತಿವಾರ್ತಾಭಾರತಿ7 Dec 2020 7:46 PM IST
share
ಡಿ.14, 15ರಂದು ‘ಒಂದು ರಾಷ್ಟ್ರ ಒಂದು ಚುನಾವಣೆ ಚರ್ಚೆ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ

ಬೆಂಗಳೂರು, ಡಿ. 7: ವಿಧಾನ ಮಂಡಲ ಅಧಿವೇಶನದಲ್ಲಿ ಡಿ.14 ಮತ್ತು 15ರಂದು 'ಒಂದು ರಾಷ್ಟ್ರ ಒಂದು ಚುನಾವಣೆ' ವಿಚಾರದ ಕುರಿತು ಚರ್ಚೆ ನಡೆಸಲಾಗುವುದು ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದಿಲ್ಲಿ ಪ್ರಕಟಿಸಿದ್ದಾರೆ.

ಸೋಮವಾರ ವಿಧಾನಸಭೆ ಕಲಾಪದಲ್ಲಿ ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚನೆ ನಿರ್ಣಯ ಮಂಡನೆ ಬಳಿಕ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಒಂದು ರಾಷ್ಟ್ರ, ಒಂದು ಚುನಾವಣೆ ವಿಷಯವನ್ನು ಪ್ರಸ್ತಾಪಿಸಿದ್ದು, ಈ ಬಗ್ಗೆ ಚರ್ಚೆ, ಸಂವಾದದ ಅಗತ್ಯವಿದೆ ಎಂದರು.

ಮುನ್ನಚ್ಚರಿಕೆ ವಹಿಸಿ: ಕೊರೋನ ಸೋಂಕಿನ ಎರಡನೇ ಅಲೆ ಪ್ರಾರಂಭವಾಗುತ್ತಿದೆ ಎಂದು ತಜ್ಞ ವೈದ್ಯರು ಸಲಹೆ ನೀಡಿದ್ದು, ಸದನದ ಎಲ್ಲ ಸದಸ್ಯರು ಮಾಸ್ಕ್ ಕಡ್ಡಾಯವಾಗಿ ಧರಿಸಿರಬೇಕು. ಸ್ಯಾನಿಟೈಸರ್ ಬಳಕೆ ಮತ್ತು ಸುರಕ್ಷಿತ ಅಂತರ ಕಾಯ್ದುಕೊಳ್ಳುವುದರ ಜತೆಗೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಯಾವುದೇ ಸಂದರ್ಭದಲ್ಲಿಯೂ ನಿರ್ಲಕ್ಷ್ಯ ಸರಿಯಲ್ಲ ಎಂದು ಅವರು ಸಲಹೆ ನೀಡಿದರು.

ಅನಾರೋಗ್ಯ ಅಥವಾ ಕೊರೋನ ವೈರಸ್ ಸೋಂಕಿನ ಲಕ್ಷಣ ಇರುವವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಪರೀಕ್ಷೆ ಮಾಡಿಸಿಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದ ಅವರು, ಕೊರೋನ ಸೋಂಕಿನ ಬಗ್ಗೆ ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದಾರೆಂಬ ಆರೋಪವಿದೆ. ಹೀಗಾಗಿ ಎಲ್ಲರೂ ಸ್ವಯಂ ಶಿಸ್ತು ಪಾಲಿಸಬೇಕು. ಇಲ್ಲವಾದರೆ ಕೋವಿಡ್-19 ಸೋಂಕಿನ ನಿರ್ಲಕ್ಷ್ಯದಿಂದ ಆಗುವ ಅನಾಹುತದ ಬಗ್ಗೆ ನಮಗೆಲ್ಲರಿಗೂ ಅರಿವಿದೆ ಎಂದರು.

ಲಾಂಜ್‍ಗೆ ಹೋಗಿ: ಮಾತನಾಡಬೇಕಿದ್ದರೆ ಕಲಾಪದ ಹೊರಗೆ ಹೋಗಿ ಅಲ್ಲಿ ಲಾಂಜ್ ಇದೆ. ಸಚಿವರೊಂದಿಗೆ ಸಮಾಲೋಚನೆ ನಡೆಸಬೇಕಿದ್ದರೆ ಅವರ ಕೊಠಡಿಗಳಿಗೆ ಹೋಗಿ. ಆದರೆ, ಯಾವುದೇ ಕಾರಣಕ್ಕೂ ಯಾವುದೇ ಸಂದರ್ಭದಲ್ಲಿಯೂ ಕಲಾಪದಲ್ಲಿ ಗುಂಪುಗೂಡಿ, ಪರಸ್ಪರ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಕಾಗೇರಿ ಸೂಚಿಸಿದರು.

ನಾಳೆ ಸಭೆ: ಸುಗಮ ಕಲಾಪ ನಡೆಸಲು ನಾಳೆ(ಡಿ.8) ಮುಖ್ಯಮಂತ್ರಿ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಲಾಪ ಸಲಹಾ ಸಮಿತಿ ಸಭೆಯನ್ನು ನಡೆಸಲಾಗುವುದು ಎಂದ ಅವರು, ಅಲ್ಲಿನ ಸಲಹೆ-ಸೂಚನೆಗಳನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X