ಶಸ್ತ್ರಾಸ್ತ್ರ ಠೇವಣಿ ಇರಿಸಲು ಡಿಸಿ ಡಾ.ಕೆ.ವಿ. ರಾಜೇಂದ್ರ ಆದೇಶ
ಮಂಗಳೂರು, ಡಿ.7: ಗ್ರಾಮ ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು ಗ್ರಾಪಂ, ಬೆಳ್ತಂಗಡಿ ತಾಲೂಕಿನ ವೇಣೂರು ಮತ್ತು ಆರಂಬೋಡಿ ಗ್ರಾಪಂ ವ್ಯಾಪ್ತಿ ಹೊರತುಪಡಿಸಿ ಉಳಿದಂತೆ ಎಲ್ಲ ಗ್ರಾಪಂಗಳಿಗೆ ಒಳಪಟ್ಟ ಬೆಳೆ ರಕ್ಷಣೆಗಾಗಿ ಮತ್ತು ಆತ್ಮರಕ್ಷಣೆಗಾಗಿ ಪರವಾನಿಗೆ ಹೊಂದಿರುವ ಎಲ್ಲ ಪರವಾನಿಗೆದಾರರು ಶಸ್ತ್ರಾಸ್ತ್ರಗಳನ್ನು ಚುನಾವಣಾ ಅವಧಿಯಲ್ಲಿ ಠೇವಣಿಯಲ್ಲಿರಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಸೋಮವಾರ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿ ಹಾಗೂ ಬಂಟ್ವಾಳ ತಾಲೂಕಿನ ಪುದು ಗ್ರಾಪಂ ವ್ಯಾಪ್ತಿಯನ್ನು ಹೊರತುಪಡಿಸಿ ಉಳಿ ದಂತೆ ಬಂಟ್ವಾಳ ತಾಲೂಕಿನ ಎಲ್ಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರವಾನಿಗೆದಾರರು ಡಿ.10ರೊಳಗೆ ಎಲ್ಲ ಶಸ್ತ್ರಾಸ್ತ್ರ ಠೇವಣಿಯನ್ನು ಇಡಬೇಕು.
ಬೆಳ್ತಂಗಡಿ ತಾಲೂಕಿನ ವೇಣೂರು ಮತ್ತು ಆರಂಬೋಡಿ ಗ್ರಾಪಂ ವ್ಯಾಪ್ತಿಯನ್ನು ಹೊರತುಪಡಿಸಿ ಉಳಿದಂತೆ ಬೆಳ್ತಂಗಡಿ, ಸುಳ್ಯ ಪುತ್ತೂರು ಮತ್ತು ಕಡಬ ತಾಲೂಕಿಗೆ ಸಂಬಂಧಪಟ್ಟ ಎಲ್ಲ ಪರವಾನಿಗೆದಾರರು ಶಸ್ತ್ರಾಸ್ತ್ರ ಠೇವಣಿ ಇಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.





