ಗೋಳಿಯಂಗಡಿ : ಮಹಡಿಯಿಂದ ಬಿದ್ದು ಯುವಕ ಮೃತ್ಯು

ಬೆಳ್ತಂಗಡಿ : ಮನೆಯ ಮಹಡಿ ಹತ್ತುವ ವೇಳೆ ಏಣಿಯಿಂದ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದ ಸುಲೈಮಾನ್ ಪುಲ್ಲಾಯ (34) ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಗೋಳಿಯಂಗಡಿ ಸನಿಹದ ಉಳ್ತೂರು ಪುಲ್ಲಾಯ ಎಂಬಲ್ಲಿನ ನಿವಾಸಿಯಾಗಿದ್ದ ಇವರು ಪ್ರಸ್ತುತ ಕಳೆದ ಒಂದು ವರ್ಷದಿಂದ ಕೊಯ್ಯೂರಿನಲ್ಲಿ ಮನೆ ಮಾಡಿಕೊಂಡು ನೆಲೆಸಿದ್ದರು. ರವಿವಾರ ಘಟನೆ ನಡೆದಿದ್ದು, ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಇವರು ಎಸ್ಸೆಸ್ಸೆಫ್ ಉಳ್ತೂರು ಶಾಖೆಯ ಸಕ್ರಿಯ ಕಾರ್ಯಕರ್ತರಾಗಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರಿಯರು, ತಂದೆ, ತಾಯಿ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
Next Story





