ದ.ಕ. ಜಿಲ್ಲೆ : ಕೋವಿಡ್ಗೆ ಮೂವರು ಬಲಿ; 23 ಮಂದಿಗೆ ಕೊರೋನ ಸೋಂಕು
ಮಂಗಳೂರು, ಡಿ.7: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಮತ್ತೆ ಮೂವರು ಮೃತಪಟ್ಟಿದ್ದಾರೆ. ಸೋಮವಾರ ಹೊಸದಾಗಿ 23 ಮಂದಿಗೆ ಸೋಂಕು ತಗುಲಿದ್ದು, 65 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿನ 32,150 ಸೋಂಕಿತರ ಪೈಕಿ 30,933 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ನಿಂದಾಗಿ 720 ಮಂದಿ ಸಾವನ್ನಪ್ಪಿ ದ್ದಾರೆ. ಜಿಲ್ಲೆಯ ವಿವಿಧ ಆಸ್ಪತ್ರೆಗಳು ಹಾಗೂ ಮನೆಗಳಲ್ಲಿ 497 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ 15,765 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, 16,86,117 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟನೆ ತಿಳಿಸಿದೆ.
Next Story