ಕೃಷಿ ಕಾಯ್ದೆಗಳಿಗೆ ವಿರೋಧ: ಕಪ್ಪು ಬಾವುಟ ಪ್ರದರ್ಶಿಸಿ ವಿಧಾನಸೌಧದ ಎದುರು ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು, ಡಿ.8: ಕೇಂದ್ರ, ರಾಜ್ಯ ಸರಕಾರಗಳು ಜಾರಿಗೆ ತರಲು ಹೊರಟಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ಶಾಸಕರು, ಮುಖಂಡರು ಇಂದು ವಿಧಾನಸೌಧ ಆವರಣದಲ್ಲಿನ ಮಹಾತ್ಮ ಗಾಂಧಿ ಪ್ರತಿಮೆ ಮುಂಭಾಗ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಹಿರಿಯ ನಾಯಕ ಡಾ.ಜಿ. ಪರಮೇಶ್ವರ್, ಎಸ್.ಆರ್. ಪಾಟೀಲ್, ಬಿ.ಕೆ. ಹರಿಪ್ರಸಾದ್, ಕೆ.ಜೆ. ಜಾರ್ಜ್, ರಾಮ ಲಿಂಗಾರೆಡ್ಡಿ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Next Story







