Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗದಲ್ಲಿ ಶಾಂತಿ ನೆಲೆಸಲು ಎಲ್ಲರ...

ಶಿವಮೊಗ್ಗದಲ್ಲಿ ಶಾಂತಿ ನೆಲೆಸಲು ಎಲ್ಲರ ಸಹಕಾರ ಅಗತ್ಯ : ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಶಾಂತಿ ಸಮಿತಿ ಸಭೆ

ವಾರ್ತಾಭಾರತಿವಾರ್ತಾಭಾರತಿ8 Dec 2020 4:30 PM IST
share

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ಜಿಲ್ಲಾಡಳಿತ ಸಭಾಂಗಣದಲ್ಲಿ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅನಪೇಕ್ಷಿತ ಘಟನೆಗಳಿಂದ ಕಳೆದ ಒಂದು ವಾರದಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಹಿನ್ನಡೆ ಉಂಟಾಗಿದೆ. ಎಲ್ಲರೂ ಸಾಮರಸ್ಯದಿಂದ ಬಾಳುವ ವಾತಾವರಣವನ್ನು ನಿರ್ಮಿಸುವುದು ನಮ್ಮ ಆದ್ಯತೆಯಾಗಿದೆ. ನಗರದ ಉತ್ತಮ ಇಮೇಜ್ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ನಗರದ ಜತೆಯಲ್ಲಿರುವ ಭಯದ ವಾತಾವರಣವನ್ನು ಹೋಗಲಾಡಿಸಲು ಜಿಲ್ಲಾಡಳಿತ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದು, ಪ್ರತಿಯೊಬ್ಬರೂ ಇದಕ್ಕೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

ಅಪ್ರಾಪ್ತೆ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ತಪ್ಪಿತಸ್ಥರಿಗೆ ಪೋಕ್ಸೋ ಕಾಯ್ದೆಯಡಿ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು. ಶಿವಮೊಗ್ಗ ನಗರದಲ್ಲಿ ಗಾಂಜಾ ಪ್ರಭಾವದಿಂದ ಹಲವಾರು ಅಪರಾಧ ಕೃತ್ಯಗಳು ಸಂಭವಿಸುತ್ತಿರುವ ಬಗ್ಗೆ ಹಲವು ಮಂದಿ ಕಳವಳ ವ್ಯಕ್ತಪಡಿಸಿದ್ದು, ಇದನ್ನು ಕಟ್ಟುನಿಟ್ಟಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುವುದು. ಔಷಧಿಗಳನ್ನು ಉದ್ದೀಪನವಾಗಿ ಬಳಸುವುದನ್ನು ತಡೆಯುವ ನಿಟ್ಟಿನಲ್ಲಿ ಫಾರ್ಮಸಿಸ್ಟ್ ಗಳ ಸಭೆಯನ್ನು ಆದಷ್ಟು ಬೇಗನೆ ಕರೆಯಲಾಗುವುದು. ವೈಯಕ್ತಿಕವಾಗಿ ನಡೆಯುವ ಘಟನೆಗಳನ್ನು ಸಾಮುದಾಯಿಕವಾಗಿ ನೋಡುವುದರಿಂದ ಪರಿಸ್ಥಿತಿ ಬಿಗಡಾಯಿಸಲು ಕಾರಣವಾಗುತ್ತದೆ. ಇದಕ್ಕೆ ಯಾರೂ ಆಸ್ಪದ ನೀಡಬಾರದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು ಮಾತನಾಡಿ, ಶಿವಮೊಗ್ಗ ನಗರದ ಸಾರ್ವಜನಿಕರ ಸಹಕಾರದಿಂದ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಮೊಹಲ್ಲಾ ಸಭೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ನಡೆಸಲಾಗುವುದು. ಸಾರ್ವಜನಿಕರು ಯಾವುದೇ ದೂರುಗಳಿದ್ದರೂ, ನೇರವಾಗಿ ತಮ್ಮನ್ನು ಕಚೇರಿಯಲ್ಲಿ ಭೇಟಿ ಮಾಡಬಹುದಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು. ನಾಗರಿಕರು ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಮನೆಯ ಮುಂದೆ ರಸ್ತೆಗೆ ಅಭಿಮುಖವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಅವರು ಮನವಿ ಮಾಡಿದರು.

ಅಭಿಪ್ರಾಯ ಮಂಡನೆ: ವಿವಿಧ ಸಮುದಾಯಗಳ ಪ್ರತಿನಿಧಿಗಳು ಮಾತನಾಡಿ ಹಲವಾರು ಸಲಹೆಗಳನ್ನು ಸಭೆಯ ಮುಂದಿರಿಸಿದರು. ನಗರದಲ್ಲಿ ಗಾಂಜಾ ಹಾವಳಿ ತೀವ್ರವಾಗಿದ್ದು, ಇದನ್ನು ಕಟ್ಟುನಿಟ್ಟಿನಿಂದ ನಿಯಂತ್ರಿಸಿದರೆ ಮಾತ್ರ ಅಪರಾಧ ಕೃತ್ಯಗಳನ್ನು ನಿಯಂತ್ರಿಸಲು ಸಾಧ್ಯ. 144 ಸೆಕ್ಷನ್ ಬಗ್ಗೆ ಸರಿಯಾಗಿ ಮಾಹಿತಿ ನೀಡದಿರುವುದರಿಂದ ಜನಸಾಮಾನ್ಯರಿಗೆ, ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಬಹಳ ತೊಂದರೆಯಾಗಿದೆ. ಸೆಕ್ಷನ್ ಜಾರಿಯಲ್ಲಿರುವಾಗ ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಿ ಎಂದು ವಿವಿಧ ಗಣ್ಯರು ಮನವಿ ಮಾಡಿದರು.

ಉಪ ಮೇಯರ್ ಸುರೇಖಾ ಮುರಳೀಧರ್ ವಿವಿಧ ಸಮಾಜಗಳ ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದು ಸಲಹೆ ಸೂಚನೆಗಳನ್ನು ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X