ರೈತ ಮುಖಂಡರೊಂದಿಗೆ ಮಾತುಕತೆ ನಡೆಸಲಿರುವ ಗೃಹ ಸಚಿವ ಅಮಿತ್ ಶಾ

ಹೊಸದಿಲ್ಲಿ: ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಮಂಗಳವಾರ ಸಂಜೆ 7 ಗಂಟೆಗೆ ರೈತ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಭಾರತೀಯ ಕಿಸಾನ್ ಒಕ್ಕೂಟದ ವಕ್ತಾರ ರಾಕೇಶ್ ಹೇಳಿದ್ದಾರೆ. ಮಂಗಳವಾರ ಸಂಜೆ 7 ಗಂಟೆಗೆ ಮಾತುಕತೆಗೆ ಬರುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರೈತರಿಗೆ ಕರೆ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಇಂದು ವಿರೋಧ ಪಕ್ಷದ ಜಂಟಿ ನಿಯೋಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಲಿದ್ದಾರೆ.
Next Story





