ಕೈಗಾರಿಕೆಗಳ ಉತ್ತೇಜನಕ್ಕೆ ಕರ್ನಾಟಕ ಸ್ಟಾಂಪು ತಿದ್ದುಪಡಿ ವಿಧೇಯಕ ಮಂಡನೆ
ಬೆಂಗಳೂರು, ಡಿ. 8: ರಾಜ್ಯ ಕೈಗಾರಿಕೆಗಳ ಬೆಳವಣಿಗೆ ಮತ್ತು ಉತ್ತೇಜನ ನೀಡಲು ಹಾಗೂ ಮೂವತ್ತೈದು ಲಕ್ಷ ರೂ.ವರೆಗಿನ ಫ್ಲಾಟ್ ಅಥವಾ ಅಪಾರ್ಟ್‍ಮೆಂಟ್‍ನ ಮೊದಲ ಮಾರಾಟಕ್ಕೆ ಸಾಫ್ಟ್ ತೆರಿಗೆ ಕಡಿಮೆ ಮಾಡುವ ಸಂಬಂಧದ ಕರ್ನಾಟಕ ಸ್ಟಾಂಪು(ಎರಡನೆ ತಿದ್ದುಪಡಿ) ವಿಧೇಯಕ 2020ನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.
ಮಂಗಳವಾರ ವಿಧಾನಸಭೆಯ ಶಾಸನ ರಚನಾ ಕಲಾಪದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ವಿಧೇಯಕ ಮಂಡಿಸಿದರು. ಕರ್ನಾಟಕ ಕೈಗಾರಿಕಾ ನೀತಿ 2020-25ರಲ್ಲಿ ಪ್ರಸ್ತಾಪಿಸುವ ಕೈಗಾರಿಕೆ ಬೆಳವಣಿಗೆ ದೃಷ್ಟಿಯಿಂದ ಕರ್ನಾಟಕ ಸ್ಟಾಂಪು ಅಧಿನಿಯಮ 1957ನ್ನು ಮತ್ತಷ್ಟು ತಿದ್ದುಪಡಿ ಮಾಡುವುದನ್ನು ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ ಎಂದು ತಿಳಿಸಿದರು.
Next Story





