ಪ್ರಚೋದನಕಾರಿ ಗೋಡೆ ಬರಹ ಪ್ರಕರಣ : ಮತ್ತೋರ್ವ ಆರೋಪಿ ವಶಕ್ಕೆ

ಫೈಲ್ ಫೋಟೊ
ಮಂಗಳೂರು, ಡಿ. 8: ನಗರದಲ್ಲಿ ಪ್ರತ್ಯೇಕ ಎರಡು ಕಡೆಗಳಲ್ಲಿ ಕಂಡುಬಂದ ಪ್ರಚೋದನಕಾರಿ ಗೋಡೆಬರಹ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಮಂಗಳೂರು ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬಂಧಿತ ಆರೋಪಿಗಳ ಸಂಬಂಧಿ, ತೀರ್ಥಹಳ್ಳಿಯ ಸಾದತ್ ಎಂಬಾತ ಪೊಲೀಸ್ ವಶದಲ್ಲಿರುವ ಆರೋಪಿ ಎಂದು ತಿಳಿದುಬಂದಿದೆ.
ವಶದಲ್ಲಿರುವ ಆರೋಪಿಯು ಪ್ರಕರಣದ ಮೊದಲ ಆರೋಪಿ ಮುಹಮ್ಮದ್ ಶಾರೀಕ್ನ ಸಂಬಂಧಿ ಎನ್ನಲಾಗಿದೆ. ಪ್ರಕರಣದಲ್ಲಿ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದ್ದು, ಮೂರನೇ ಆರೋಪಿಯನ್ನು ತೀರ್ಥಹಳ್ಳಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
Next Story





