ತುಳು ಗೌರವ ಪ್ರಶಸ್ತಿ; ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ
ಮಂಗಳೂರು, ಡಿ.8: ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯಿಂದ ಪ್ರಸ್ತುತ ಸಾಲಿನಲ್ಲಿ ತುಳು ಸಾಹಿತ್ಯ- ಸಂಶೋಧನೆ, ತುಳು ಜಾನಪದ ಕ್ಷೇತ್ರ, ತುಳು ನಾಟಕ- ಸಿನೆಮಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ಗೌರವ ಪ್ರಶಸ್ತಿಗೆ, ತುಳು ಸಾಹಿತ್ಯಕ್ಕೆ ಸಂಬಂಧಿಸಿದ ಕೃತಿಗಳನ್ನು ಪುಸ್ತಕಗಳ ಬಹುಮಾನಕ್ಕೆ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಕೆಗೆ ಡಿ.31 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವವರು ತುಳು ಅಕಾಡಮಿ ಗೌರವ ಪ್ರಶಸ್ತಿ-2020 ಅಥವಾ ತುಳು ಅಕಾಡಮಿ ಪುಸ್ತಕ ಬಹುಮಾನ ಯೋಜನೆ-2020 ಎಂದು ಬರೆದು, ರಿಜಿಸ್ಟ್ರಾರ್, ಕರ್ನಾಟಕ ತುಳು ಸಾಹಿತ್ಯ ಅಕಾಡಮಿ, ತುಳುಭವನ, ಪೋಸ್ಟ್ ಅಶೋಕನಗರ, ಉರ್ವಸ್ಟೋರ್, ಮಂಗಳೂರು-575006 ಅಥವಾ 9901016962ನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡಮಿ ಅಧ್ಯಕ್ಷರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





