ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ
ಭಟ್ಕಳ : ಇಲ್ಲಿನ ಬಂದರ ಮಾವಿನಕುರ್ವೆಯಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ವರದಿಯಾಗಿದೆ.
ನಟರಾಜ ದೇವಪ್ಪ ಖಾರ್ವಿ (29) ಆತ್ಮಹತ್ಯೆಗೆ ಶರಣಾದ ಯುವಕ. ಸೋಮವಾರ ಮೀನುಗಾರಿಕೆಗೆ ತೆರಳಿದ್ದ ಈತ ಸಂಜೆ 5 ಗಂಟೆಯ ಸುಮಾರಿಗೆ ಮನೆಗೆ ಬಂದು ರೂಮಿಗೆ ಹೋಗಿ ಬಾಗಿಲು ಹಾಕಿಕೊಂಡಿದ್ದು, ಸಂಶಯಗೊಂಡು ಬಾಗಿಲು ಒಡೆದು ನೋಡುವಾಗ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





