Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹದಗೆಟ್ಟ ತೊಕ್ಕೊಟ್ಟು- ಕುತ್ತಾರು...

ಹದಗೆಟ್ಟ ತೊಕ್ಕೊಟ್ಟು- ಕುತ್ತಾರು ರಸ್ತೆಯಲ್ಲಿ ವಾಹನ ಸವಾರರ ಪರದಾಟ

ಗುಂಡಿ ಬಿದ್ದ ರಸ್ತೆಯಲ್ಲಿ ಸಂಚಾರ ದುಸ್ತರ

ನಾಸಿರ್ ಸಜಿಪನಾಸಿರ್ ಸಜಿಪ9 Dec 2020 2:59 PM IST
share
ಹದಗೆಟ್ಟ ತೊಕ್ಕೊಟ್ಟು- ಕುತ್ತಾರು ರಸ್ತೆಯಲ್ಲಿ ವಾಹನ ಸವಾರರ ಪರದಾಟ

ಉಳ್ಳಾಲ: ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಮೆಡಿಕಲ್ ಕಾಲೇಜ್ ಗಳು ಹಾಗೂ ವಿವಿಧ ಆಸ್ಪತ್ರೆಗಳಿಗೆ ತೆರಳುವ ತೊಕ್ಕೊಟ್ಟು ಹಾಗೂ ಕುತ್ತಾರು ನಡುವಿನ ರಸ್ತೆ ಮಳೆಗಾಲದ ಬಳಿಕ ಸಂಪೂರ್ಣ ಹದಗೆಟ್ಟಿದ್ದು, ರಸ್ತೆಯಲ್ಲಿ ಸಂಚರಿಸಲು ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡಿರುವ ತೊಕ್ಕೊಟ್ಟು ಜಂಕ್ಷನ್ ನಲ್ಲೇ ರಸ್ತೆ ಅಲ್ಲಲ್ಲಿ ಗುಂಡಿ ಬಿದ್ದಿದ್ದು, ಸಂಚಾರ ದುಸ್ತರವಾಗಿ ವಾಹನ ಸವಾರರು ಸರ್ಕಸ್ ಮಾಡಬೇಕಾಗಿದೆ. ಚೊಂಬುಗುಡ್ಡೆ ಸಮೀಪದ ರಸ್ತೆಯಂತೂ ತೀರಾ ಹದಗೆಟ್ಟಿದ್ದು, ಡಾಂಬರು ಕಿತ್ತುಹೋಗಿ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಇಲ್ಲಿ ಪಾದಾಚಾರಿಗಳಿಗೆ ರಸ್ತೆ ಬದಿಯಲ್ಲಿ ನಡೆಯಲೂ ಜಾಗವಿಲ್ಲದಾಗಿದ್ದು, ರಸ್ತೆಯಲ್ಲೇ ನಡೆಯಬೇಕಾದ ಸ್ಥಿತಿ ಉದ್ಭವಿಸಿದೆ. ಶೀಘ್ರವೇ ರಸ್ತೆ ದುರಸ್ತಿ ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇಲ್ಲಿ ಗುಂಡಿ ತುಂಬಿದ ರಸ್ತೆಗಳೇ ಇರುವುದರಿಂದ ವಾಹನ ದಟ್ಟನೆಯೂ ಉಂಟಾಗುತ್ತಿದ್ದು, ಧೂಳಿನ ಕಾಟವೂ ರಸ್ತೆ ಬದಿಯ ವ್ಯಾಪಾರಸ್ಥರನ್ನು ಹೈರಾಣಾಗಿಸಿದೆ. ವಾಹನ ಸವಾರರು ಎದ್ದು ಬಿದ್ದು ಹೋಗಬೇಕಾದ ಪರಿಸ್ಥಿತಿ ಉಂಟಾಗಿ ಜನರು ನಗರಸಭೆಗೆ ಹಿಡಿಶಾಪ ಹಾಕಿಕೊಂಡು ಸಂಚರಿಸುವಂತಾಗಿದೆ. ಇತ್ತೀಚಿಗೆ ರಸ್ತೆ ರಿಪೇರಿ ಮಾಡಿದ್ದರೂ ಕೂಡಾ ಕೆಲ ದಿನಗಳಲ್ಲೆ ರಸ್ತೆ ಡಾಂಬರು ಕಿತ್ತುಹೋಗಿ ಮೊದಲಿನಂತಾಗಿದೆ. 

ಅಲ್ಲದೇ, ಪಂಡಿತ್ ಹೌಸ್, ಬಬ್ಬುಕಟ್ಟೆ, ಕುತ್ತಾರ್ ರಸ್ತೆಯಲ್ಲಿ ಕೂಡಾ ಅಲ್ಲಲ್ಲಿ ಗುಂಡಿ ಬಿದ್ದಿದ್ದು, ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಮಳೆ ಬಂದರೆ ಸಮಸ್ಯೆ ಮತ್ತಷ್ಟು ಬಿಗಡಾಯಿಸುತ್ತದೆ’ ಎಂದು ಸ್ಥಳೀಯರು ದೂರಿದ್ದಾರೆ.

ಟ್ರಾಫಿಕ್ ಜಾಮ್: ಶಿಕ್ಷಣ ಸಂಸ್ಥೆಗಳು, ಮೆಡಿಕಲ್ ಕಾಲೇಜ್ ಗಳು ಹಾಗೂ ವಿವಿಧ ಆಸ್ಪತ್ರೆಗಳಿಗೆ ತೆರಳಲು ಇದೇ ರಸ್ತೆಯನ್ನು ಅವಲಂಬಿಸಬೇಕಾಗಿದ್ದರಿಂದ ಈ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಸರ್ವೇ ಸಾಮಾನ್ಯ ಎಂಬಂತಾಗಿದೆ. ಅದರಲ್ಲೂ ಬೆಳಗ್ಗೆ ಹಾಗೂ ಸಂಜೆ ವೇಳೆಗೆ ಈ ರಸ್ತೆಯಲ್ಲಿ ವಾಹನಗಳು ತುಂಬಿ ವಾಹನ ದಟ್ಟಣೆ ಉಂಟಾಗುತ್ತದೆ. ಪ್ರಯಾಣಿಕರ ಬಸ್ ನಿಲ್ಲಿಸಲೂ ಸರಿಯಾದ ಜಾಗ ಇಲ್ಲದಿರುವುದರಿಂದ ರಸ್ತೆಯಲ್ಲೇ ಬಸ್ ನಿಲುಗಡೆ ಮಾಡುತ್ತಿದ್ದು, ಇದರಿಂದ ಟ್ರಾಫಿಕ್‌ ಸಮಸ್ಯೆ ಹೆಚ್ಚಾಗಿದೆ.

ಇಲ್ಲಿ ರಸ್ತೆ ಇಕ್ಕಟ್ಟಾಗಿರುವುದರಿಂದ ಪ್ರಯಾಣಿಕರ ಬಸ್ ನಿಲ್ಲಿಸಿದಾಗ ರಸ್ತೆಯುದ್ದಕ್ಕೂ ವಾಹನಗಳು ಸಾಲುಗಟ್ಟಿ ನಿಂತುಕೊಂಡಿರುತ್ತವೆ. ರಸ್ತೆಯನ್ನು ಅಗಲೀಕರಣ ಮಾಡುವ ಬಗ್ಗೆ ಭರವಸೆ ನೀಡಿದ್ದರೂ ಇನ್ನೂ ಅಗಲೀಕರಣ ಕಾಮಗಾರಿ ಆರಂಭವಾಗಿಲ್ಲ ಎಂದು ನಿತ್ಯ ಪ್ರಯಾಣಿಸುವ ಕುತ್ತಾರು ನಿವಾಸಿಯೊಬ್ಬರು ದೂರಿದ್ದಾರೆ.

''ಹಲವು ತಿಂಗಳುಗಳ ಹಿಂದೆಯೇ ಇಲ್ಲಿನ ರಸ್ತೆ ಹದಗೆಟ್ಟಿದ್ದರೂ ಇನ್ನೂ ರಸ್ತೆ ದುರಸ್ತಿಯಾಗಿಲ್ಲ. ಒಮ್ಮೆ ರಿಪೇರಿ ಮಾಡಿದ್ದರೂ ಕೆಲ ದಿನಗಳಲ್ಲೆ ಡಾಂಬರು ಕಿತ್ತುಹೋಗಿ ಮೊದಲಿನಂತಾಗಿದೆ. ರಸ್ತೆ ಅಗಲೀಕರಣ ಮಾಡುತ್ತಾರೆಂಬ ಮಾಹಿತಿ ಇದೆ. ಆದರೂ ಇನ್ನೂ ಕಾಮಗಾರಿ ಆರಂಭವಾಗಿಲ್ಲ. ಜನವರಿಯಲ್ಲಿ ಕಾಮಗಾರಿ ಶುರು ಮಾಡಬಹುದು'' ಎಂದು ಸ್ಥಳೀಯ ನಿವಾಸಿಯೊಬ್ಬರು ಮಾಹಿತಿ ನೀಡಿದ್ದಾರೆ.

share
ನಾಸಿರ್ ಸಜಿಪ
ನಾಸಿರ್ ಸಜಿಪ
Next Story
X