Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಸೆಸೆಲ್ಸಿ ಫಲಿತಾಂಶ ಬಲವರ್ಧನೆಗೆ ಕ್ರಮ:...

ಎಸೆಸೆಲ್ಸಿ ಫಲಿತಾಂಶ ಬಲವರ್ಧನೆಗೆ ಕ್ರಮ: ಎನ್.ಎಚ್.ನಾಗೂರ

ಜನವರಿಯಿಂದ ಪ್ರತಿ ವಾರ ಮಕ್ಕಳಿಗೆ ಫೋನ್ ಇನ್ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ9 Dec 2020 5:56 PM IST
share
ಎಸೆಸೆಲ್ಸಿ ಫಲಿತಾಂಶ ಬಲವರ್ಧನೆಗೆ ಕ್ರಮ: ಎನ್.ಎಚ್.ನಾಗೂರ

ಉಡುಪಿ, ಡಿ.9: ಈ ಶೈಕ್ಷಣಿಕ ವರ್ಷದಲ್ಲಿ ಜಿಲ್ಲೆಯಲ್ಲಿ ಸುಮಾರು 11ಸಾವಿರ ಎಸೆಸೆಲ್ಸಿ ವಿದ್ಯಾರ್ಥಿಗಳಿದ್ದು, ಇವರ ಪರೀಕ್ಷಾ ಹಿತದೃಷ್ಠಿಯಿಂದ ಹಾಗೂ ಫಲಿತಾಂಶ ಬಲವರ್ಧನೆಗಾಗಿ ಇಲಾಖೆಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎನ್.ಎಚ್.ನಾಗೂರ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೇ.60ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಶಾಲೆಗಳ ಮುಖ್ಯ ಶಿಕ್ಷಕರ ಸಭೆಯನ್ನು ಪ್ರತ್ಯೇಕವಾಗಿ ಕರೆದು ಅವರಿಗೆ ಅಗತ್ಯ ಮಾರ್ಗದರ್ಶನ ಮಾಡಲು ಯೋಜನೆ ರೂಪಿಸ ಲಾಗಿದೆ. ಜನವರಿ ತಿಂಗಳಿನಿಂದ ಪ್ರತಿ ವಾರವೂ ಎಸೆಸೆಲ್ಸಿಯ ಒಂದು ವಿಷಯಕ್ಕೆ ಸಂಬಂಧಿಸಿ ಮಕ್ಕಳಿಗೆ ಫೋನ್ ಇನ್ ಕಾರ್ಯಕ್ರಮ ನಡೆಸಲಾಗುವುದು. ಪಾಲಕರ ಮನೆಗಳಿಗೆ ಭೇಟಿ ನೀಡುವ ಕಾರ್ಯಕ್ರಮವನ್ನು ಕೂಡ ಹಾಕಿಕೊಳ್ಳ ಲಾಗುವುದು ಎಂದರು.

ವಿದ್ಯಾರ್ಥಿಗಳ ಕಲಿಕಾ ನಿರಂತರತೆ ಕಾಪಾಡಿಕೊಳ್ಳಲು ಪ್ರತಿ ಶಾಲೆಯಲ್ಲಿ ಮಕ್ಕಳ ವಾಟ್ಸಾಪ್ ಗುಂಪುಗಳನ್ನು ರಚಿಸಿಕೊಂಡು ವಿಷಯವಾರು ಶಿಕ್ಷಕರು ನಿರಂತರ ವಾಗಿ ಮಕ್ಕಳೊಂದಿಗೆ ಸಂಪರ್ಕ ನಡೆಸುತ್ತಿದ್ದಾರೆ. ಕೆಲವು ಮಕ್ಕಳು ಶಾಲೆಗೆ ಬಂದು ಗೃಹಪಾಠಗಳನ್ನು ಲಭ್ಯ ಇರುವ ಶಿಕ್ಷಕ ರಲ್ಲಿ ತಿದ್ದಿಸಿಕೊಂಡು ಹೋಗುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಜನವರಿಯಿಂದ ಶಿಕ್ಷಕರಿಗೆ ಶಿಬಿರ

ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಸಹ ಶಿಕ್ಷಕರಿಗೆ ಶಿಕ್ಷಣ ಸಂಯೋಜಕರ ವಲಯದಡಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಶನಿವಾರ ಮತ್ತು ರವಿವಾರ ನಡೆಸಲಾಗುವುದು. ಪ್ರೌಢಶಾಲಾ ಶಿಕ್ಷಕರ ಬೋಧನಾ ಪ್ರಾವಿಣ್ಯತೆ ಮತ್ತು ಮನೋಬಲ ಬದಲಾವಣೆಗೆ ಜನವರಿಯಿಂದ ವಿಷಯವಾರು ವಾರಕ್ಕೆ ಒಂದು ಶನಿವಾರ ಅಥವಾ ರವಿವಾರ ಶಿಬಿರಗಳನ್ನು ಆರಂಭಿಸಲಾಗುವುದು ಎಂದು ಅವರು ತಿಳಿಸಿದರು.

ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳ ಪಾಲಕರಿಗೆ ಶಿಕ್ಷಣ ಸಂಯೋಜಕರ ವಲಯ ವ್ಯಾಪ್ತಿಯಲ್ಲಿ ಜನವರಿ ಎರಡನೆ ವಾರದಿಂದ ಸಭೆಯನ್ನು ಕರೆದು ಜವಾಬ್ದಾರಿಗಳು, ಮಕ್ಕಳ ಶಿಕ್ಷಣದ ಬಗ್ಗೆ ಕಾಳಜಿ ವಹಿಸಲು ಸೂಚಿಸಲಾಗುವುದು ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಒಂದು ದಿನದ ಶೈಕ್ಷಣಿಕ ಚಿಂತನ ಮಂಥನ ಸಭೆ ನಡೆಸಿ ಕರ್ತವ್ಯ ಮತ್ತು ಜವಾಬ್ದಾರಿಗಳ ಕುರಿತು ತಿಳಿಸಲಾಗಿದೆ. ಜಿಲ್ಲೆಯ ಎಲ್ಲ ತಾಲೂಕುಗಳ ಸಿಆರ್‌ಪಿ ಅವರಿಂದ ಡಿಡಿಪಿಐವರೆಗೆ ಸಭೆ ನಡೆಸಿ ಶೈಕ್ಷಣಿಕ ಕಾರ್ಯಕ್ರಮಗಳ ಅನುಷ್ಠಾನ, ಮೇಲ್ವಿಚಾರಣೆಯ ಮಾರ್ಗದರ್ಶನ ನೀಡುವ ಕ್ರಮಗ ಕುರಿತು ತಿಳಿಸಲಾಗಿದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ನಾಗೇಂದ್ರಪ್ಪ, ್ರಹ್ಮಾವರ ಶಿಕ್ಷಣ ಸಂಯೋಜಕ ಪ್ರಕಾಶ್ ಬಿ.ಬಿ., ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಓ.ಆರ್.ಪ್ರಕಾಶ್, ಮುದ್ರಾಡಿ ನೆಲ್ಲಿಕಟ್ಟೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯ ರವೀಂದ್ರ ಹೆಗ್ಡೆ ಉಪಸ್ಥಿತರಿದ್ದರು.

ಖಾಸಗಿಯಿಂದ 1832 ಮಕ್ಕಳು ಸರಕಾರಿ ಶಾಲೆಗೆ !

ಉಡುಪಿ ಜಿಲ್ಲೆಯಲ್ಲಿ ಈ ವರ್ಷ ಒಟ್ಟು 1832 ಮಕ್ಕಳು ಖಾಸಗಿ ಶಾಲೆ ಯಿಂದ ಸರಕಾರಿ ಶಾಲೆಗಳಿಗೆ ದಾಖಲಾಗಿದ್ದಾರೆ. ಕಾರ್ಕಳ ಹಾಗೂ ಬ್ರಹ್ಮಾವರ ವಲಯ ವ್ಯಾಪ್ತಿಯಲ್ಲಿ ಇಂತಹ ಮಕ್ಕಳ ಸಂಖ್ಯೆ ಹೆಚ್ಚಿದೆ. ಕೇವಲ ಒಂದನೆ ತರಗತಿ ಮಾತ್ರವಲ್ಲ, ಇತರ ತರಗತಿಗಳಿಗೂ ಮಕ್ಕಳು ಸೇರ್ಪಡೆಯಾಗಿದ್ದಾರೆ. ಇದಕ್ಕೆ ದುಬಾರಿ ಶುಲ್ಕ ಮತ್ತು ಕೊರೋನಾದಿಂದ ಉಂಟಾಗಿರುವ ಆರ್ಥಿಕ ಸಮಸ್ಯೆಯೇ ಮುಖ್ಯ ಕಾರಣ ಎಂದು ಉಪನಿದೇಶರ್ಕ ಎನ್.ಎಚ್.ನಾಗೂರ ತಿಳಿಸಿದರು.

ಖಾಸಗಿ ಶಾಲೆಯಿಂದ ಸರಕಾರಿ ಶಾಲೆಗೆ ದಾಖಲಾಗುವವರಿಗೆ ಟಿಸಿ ಕೊಡದೆ ಸತಾಯಿಸುವಂತಿಲ್ಲ ಮತ್ತು ಖಾಸಗಿ ಶಾಲೆಗಳಲ್ಲಿ ಒತ್ತಾಯ ಪೂರ್ವಕವಾಗಿ ಶುಲ್ಕ ವಸೂಲು ಮಾಡಬಾರದು. ಅಂತಹ ಶಾಲೆಗಳ ವಿರುದ್ದ ಕಾನೂನು ಕ್ರಮಕ್ಕೆ ಸರಕಾರಕ್ಕೆ ಬರೆಯಲಾಗುವುದು ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X