Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರ ಸರಕಾರದ ಹೊಸ ಪ್ರಸ್ತಾವ...

ಕೇಂದ್ರ ಸರಕಾರದ ಹೊಸ ಪ್ರಸ್ತಾವ ನಿರಾಕರಿಸಿದ ರೈತರು; ಬೃಹತ್ ಪ್ರತಿಭಟನೆಗೆ ಸಿದ್ಧತೆ

ವಾರ್ತಾಭಾರತಿವಾರ್ತಾಭಾರತಿ9 Dec 2020 6:41 PM IST
share
ಕೇಂದ್ರ ಸರಕಾರದ ಹೊಸ ಪ್ರಸ್ತಾವ ನಿರಾಕರಿಸಿದ ರೈತರು; ಬೃಹತ್ ಪ್ರತಿಭಟನೆಗೆ ಸಿದ್ಧತೆ

ಹೊಸದಿಲ್ಲಿ, ಡಿ.9: ನೂತನ ಕೃಷಿ ಕಾಯ್ದೆಗಳಿಗೆ ತಿದ್ದುಪಡಿಗಳನ್ನು ಮಾಡುವ ಕೇಂದ್ರ ಸರಕಾರದ ಕೊಡುಗೆಯನ್ನು ಪ್ರತಿಭಟನಾ ನಿರತ ರೈತರು ಬುಧವಾರ ತಿರಸ್ಕರಿಸಿದ್ದು, ತಮ್ಮ ಮುಷ್ಕರವನ್ನು ಇನ್ನಷ್ಟು ತೀವ್ರಗೊಳಿಸುವ ನಿಟ್ಟಿನಲ್ಲಿ ಸರಣಿ ಯೋಜನೆಗಳನ್ನು ಘೋಷಿಸಿದ್ದಾರೆ. ದಿಲ್ಲಿ-ಜೈಪುರ ಹೆದ್ದಾರಿ ಬಂದ್, ರಿಲಯನ್ಸ್ ಮಾಲ್‌ಗಳಿಗೆ ಬಹಿಷ್ಕಾರ ಹಾಗೂ ಟೋಲ್ ಪ್ಲಾಝಾಗಳಿಗೆ ಮುತ್ತಿಗೆಯಂತಹ ಸರಣಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುವುದೆಂದು ಅವರು ಎಚ್ಚರಿಕೆ ನೀಡಿದ್ದಾರೆ. ಡಿಸೆಂಬರ್ 14ರ ಒಳಗೆ ದೇಶಾದ್ಯಂತ ಪೂರ್ಣ ಪ್ರಮಾಣದ ಪ್ರತಿಭಟನೆಗಳು ನಡೆಯಲಿವೆ ಎಂದು ಅವರು ಹೇಳಿದ್ದಾರೆ.

ದಿಲ್ಲಿಯ ಸಿಂಘು ಗಡಿಯಲ್ಲಿ ಬುಧವಾರ ರೈತ ಸಂಘಟನೆಗಳು ಬುಧವಾರ ಮತ್ತೆ ಸಭೆಯನ್ನು ನಡೆಸಿದ್ದು, ನೂತನ ಕೃಷಿ ಕಾಯ್ದೆಯನ್ನು ರದ್ದುಪಡಿಸುವುದನ್ನು ಹೊರತುಪಡಿಸಿ ಇನ್ನಾವುದೇ ರಾಜಿಸೂತ್ರವನ್ನು ತಾವು ಒಪ್ಪಿಕೊಳ್ಳುವುದಿಲ್ಲವೆಂದು ಘೋಷಿಸಿವೆ.

ಬುಧವಾರ ಸಂಜೆ ನಡೆದ ರೈತ ಒಕ್ಕೂಟಗಳ ಪ್ರತಿನಿಧಿಗಳ ಸಭೆಯ ಬಳಿಕ ರೈತ ಮುಖಂಡ ದರ್ಶನ್‌ಪಾಲ್ ಸುದ್ದಿಗಾರರ ಜೊತೆ ಮಾತನಾಡಿ, “ಡಿಸೆಂಬರ್ 12ರ ಒಳಗೆ ದಿಲ್ಲಿ-ಜೈಪುರ ಹೆದ್ದಾರಿಯನ್ನು ನಾವು ಮುಚ್ಚುಗಡೆಗೊಳಿಸುತ್ತೇವೆ. ದೇಶದ್ಯಾಂತ ಎಲ್ಲಾ ಟೋಲ್ ಪ್ಲಾಝಾಗಳಲ್ಲಿಯೂ ನಾವು ಧರಣಿ ನಡೆಸಲಿದ್ದೇವೆ. ಡಿಸೆಂಬರ್ 14ರಂದು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ನಾವು ಕರೆ ನೀಡಿದ್ದೇವೆ. ಬಿಜೆಪಿಯ ಪ್ರತಿಯೊಬ್ಬ ಸಂಸದ, ಶಾಸಕನ ವಿರುದ್ಧ ಪ್ರತಿಭಟನೆ ನಡೆಸಬೇಕೆಂದು ಜನರಿಗೆ ಕರೆ ನೀಡುತ್ತೇವೆ’’ ಎಂದು ಹೇಳಿದರು.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಜೊತೆ ಮಂಗಳವಾರ ರಾತ್ರಿ ನಡೆದ ಸಭೆಯಲ್ಲಿ ವಿವಿಧ ರೈತ ಒಕ್ಕೂಟಗಳ 13 ಮಂದಿ ನಾಯಕರು ಭಾಗವಹಿಸಿದ್ದರು. ಕೃಷಿ ಕಾಯ್ದೆಯಲ್ಲಿ ಮಾಡಲುದ್ದೇಶಿಸಿರುವ ತಿದ್ದುಪಡಿಗಳ ಪ್ರಸ್ತಾವನೆಯನ್ನು ರೈತ ಮುಖಂಡರಿಗೆ ಸಲ್ಲಿಸುವುದಾಗಿ ಕೇಂದ್ರ ಸರಕಾರವು ಸಭೆಯಲ್ಲಿ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ನೇತೃತ್ವದಲ್ಲಿ ಇಂದು ರೈತ ಪ್ರತಿನಿಧಿಗಳೊಂದಿಗೆ ನಡೆಯಲಿದ್ದ ಸಭೆಯನ್ನು ಮುಂದೂಡಲಾಗಿತ್ತು.

ಈ ಮಧ್ಯೆ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಹೇಳಿಕೆಯೊಂದನ್ನು ನೀಡಿ, ರೈತರ ಜೊತೆಗಿನ ಸಂಧಾನ ಮಾತುಕತೆ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.

14ನೇ ದಿನಕ್ಕೆ ಕಾಲಿಟ್ಟ ರೈತ ಮುಷ್ಕರ

ಈ ಮಧ್ಯೆ ರೈತರ ಪ್ರತಿಭಟನೆ ಬುಧವಾರ 14ನೇ ದಿನಕ್ಕೆ ಕಾಲಿರಿಸಿದ್ದು, ದಿಲ್ಲಿಯ ಸಿಂಘು ಗಡಿಯಲ್ಲಿ ಸಾವಿರಾರು ಮಂದಿ ಮುಷ್ಕರವನ್ನು ಮುಂದುವರಿಸಿದ್ದಾರೆ. ಹರ್ಯಾಣ-ದಿಲ್ಲಿ ಗಡಿ ಪ್ರದೇಶಗಳಾದ ಟಿಕ್ರಿ, ಜರೂಡಾ ಹಾಗೂ ಧನ್ಸಾಗಳಲ್ಲಿಯೂ ಪ್ರತಿಭಟನೆ ಮುಂದುವರಿದಿದ್ದು, ಅಲ್ಲಿನ ರಸ್ತೆಗಳನ್ನು ಸಂಚಾರಕ್ಕೆ ಮುಚ್ಚುಗಡೆಗೊಳಿಸಲಾಗಿದೆ. ರಾಜಧಾನಿಯ ಗಡಿ ಪ್ರದೇಶಗಳಲ್ಲಿ ಮಾತ್ರವಲ್ಲದೆ ರೈತರ ಪ್ರತಿಭಟನೆಗೆ ಅವಕಾಶ ನೀಡಲಾಗಿದ್ದ ದಿಲ್ಲಿಯ ಹೊರವಲಯದ ಮೈದಾನದಲ್ಲಿಯೂ ಸಾವಿರಾರು ರೈತರು ಧರಣಿ ಮುಂದುವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X