Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶುದ್ಧ ಕುಡಿಯುವ ನೀರಿನ ಘಟಕ...

ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಯಲ್ಲಿನ ಅಕ್ರಮ ತನಿಖೆಗೆ ಜಂಟಿ ಸದನ ಸಮಿತಿ ರಚನೆ: ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ9 Dec 2020 8:08 PM IST
share
ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಯಲ್ಲಿನ ಅಕ್ರಮ ತನಿಖೆಗೆ ಜಂಟಿ ಸದನ ಸಮಿತಿ ರಚನೆ: ಯಡಿಯೂರಪ್ಪ

ಬೆಂಗಳೂರು, ಡಿ. 9: ರಾಜ್ಯದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ತನಿಖೆಗೆ ಜಂಟಿ ಸದನ ಸಮಿತಿ ರಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಭರವಸೆ ನೀಡಿದ್ದಾರೆ.

ಬುಧವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯ ವೆಂಕಟರೆಡ್ಡಿ ಮುದ್ನಾಳ್ ಕೇಳಿದ ಪ್ರಶ್ನೆಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಉತ್ತರ ನೀಡುತ್ತಿದ್ದ ವೇಳೆ ಸದಸ್ಯರು ಮಾಡಿದ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಶುದ್ಧ ನೀರಿನ ಘಟಕಗಳ ಸ್ಥಾಪನೆಯಲ್ಲಿ ಅಕ್ರಮ ನಡೆದಿರುವುದು ಸರಕಾರದ ಗಮನಕ್ಕೆ ಬಂದಿದೆ. ಅಗತ್ಯಕ್ಕಿಂತ ನಾಲ್ಕು ಪಟ್ಟು ಹೆಚ್ಚು ಖರ್ಚು ಮಾಡಲಾಗಿದೆ. ಈ ನಿಟ್ಟಿನಲ್ಲಿ ಜಂಟಿ ಸದನ ಸಮಿತಿ ರಚಿಸಿ ತನಿಖೆ ನಡೆಸಿ, ಎರಡು ತಿಂಗಳ ಒಳಗಾಗಿ ಸದನಕ್ಕೆ ವರದಿ ಮಂಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಆರಂಭಕ್ಕೆ ಮಾತನಾಡಿದ ಆಡಳಿತ ಪಕ್ಷದ ಸದಸ್ಯ ಅರಗ ಜ್ಞಾನೇಂದ್ರ, ಶುದ್ಧ ಕುಡಿಯುವ ನೀರಿನ ಘಟಕವನ್ನು 3.50 ಲಕ್ಷ ರೂ.ನಿಂದ 4 ಲಕ್ಷ ರೂ.ವೆಚ್ಚದಲ್ಲಿ ಸ್ಥಾಪನೆ ಮಾಡಲು ಸಾಧ್ಯ ಆದರೆ, ಇದರಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿದೆ. ಈ ಕುರಿತಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಇದಕ್ಕೆ ಧ್ವನಿಗೂಡಿಸಿದ ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್, ಜೆಡಿಎಸ್‍ನ ವೆಂಕಟರಾವ್ ನಾಡಗೌಡ, ಕಾಂಗ್ರೆಸ್‍ನ ಯು.ಟಿ ಖಾದರ್, ರಾಜ್ಯದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಯಲ್ಲಿ ಅಕ್ರಮ ನಡೆದಿದ್ದು, ತನಿಖೆ ನಡೆಸಬೇಕು ಎಂದು ಸರಕಾರವನ್ನು ಆಗ್ರಹಿಸಿದರು.

ಅನಂತರ ಉತ್ತರ ನೀಡಿದ ಸಚಿವ ಕೆ.ಎಸ್.ಈಶ್ವರಪ್ಪ, ರಾಜ್ಯದಲ್ಲಿನ 18 ಸಾವಿರ ಶುದ್ಧ ನೀರಿನ ಘಟಕಗಳ ಪೈಕಿ ಶೇ.70ರಷ್ಟು ಘಟಕಗಳು ಸುಸ್ಥಿತಿಯಲ್ಲಿದ್ದು, ಶೇ.24ರಷ್ಟು ತಾತ್ಕಾಲಿಕವಾಗಿ ಸ್ಥಗಿತಗೊಂಡಿವೆ ಹಾಗೂ ಶೇ.4ರಷ್ಟು ಸಂಪೂರ್ಣ ಸ್ಥಗಿತಗೊಂಡಿವೆ. ಈ ನಿಟ್ಟಿನಲ್ಲಿ ಯಾವ ಸ್ವರೂಪದಲ್ಲಿ ತನಿಖೆ ನಡೆಸಬೇಕು ಎಂದು ಮಾರ್ಗದರ್ಶನ ಮಾಡಿದರೆ ಆ ರೀತಿಯಲ್ಲಿ ತನಿಖೆ ನಡೆಸುವುದು ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X